Karnataka Rain : ಮುಂದಿನ 2 ದಿನಗಳ ಕಾಲ ಕರ್ನಾಟಕದ 4 ಜಿಲ್ಲೆಗಳಲ್ಲಿ ಭಾರೀ ಮಳೆ
ಬೆಂಗಳೂರು, ಮಾರ್ಚ್ 17: ರಾಜ್ಯದಲ್ಲಿ ಕೆಲವು ಕಡೆ ವಿಪರೀತ ಬಿಸಿಲಿಗೆ ಜನ ರೋಸಿ ಹೋಗಿದ್ದಾರೆ. ಇನ್ನು ರಾಜ್ಯದ ಕೆಲವೆಡೆ ಹಗುರ ಮಳೆಯಾಗುತ್ತಿದ್ದು, ದಕ್ಷಿಣ ಒಳನಾಡಿನಲ್ಲಿ ಮಳೆ ಮುನ್ಸೂಚನೆ ಹಿನ್ನೆಲೆ ಬಿಸಿಲು ಕಡಿಮೆಯಾಗಿದೆ. ಆದರೆ ಬೆಂಗಳೂರು ತುಮಕೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಭಾರೀ ಬಿಸಿಲಿದೆ. ಉತ್ತರ ಒಳನಾಡಿನ ಜನರಂತೂ ಬಿಸಿಲ ಬೇಗೆಗಗೆ ಕಂಗಾಲಾಗಿದ್ದಾರೆ. ಇತ್ತ ಮುಂದಿನ ದಿನಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಮುನ್ಸೂಚನೆ ನೀಡಿದೆ.
ಕರ್ನಾಟಕದ ಕೆಲವು ಭಾಗಗಳಲ್ಲಿ ಶಾಖದ ಅಲೆ ಇದ್ದರೆ ಇನ್ನೂ ಕೆಲವು ಭಾಗಗಳಲ್ಲಿ ವರುಣನ ಅಬ್ಬರ ಶುರುವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯನ್ನು ನೀಡಿದೆ. ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಉಷ್ಣ ಅಲೆ ಇರಲಿದೆ.ತುಮಕೂರು, ವಿಜಯನಗರ, ಶಿವಮೊಗ್ಗ, ಕೋಲಾರ, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಉಡುಪಿಯಲ್ಲಿ ಒಣಹವೆ ಇರಲಿದೆ.

ಮುಂದಿನ ಎರಡು ದಿನಗಳ ಕಾಲ ಕರ್ನಾಟಕದ ನಾಲ್ಕು ಜಿಲ್ಲೆಗಳಾದ ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, 6 ಜಿಲ್ಲೆಗಳಲ್ಲಿ ಉಷ್ಣ ಅಲೆ ಇರಲಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಾಗಲಕೋಟೆ, ಬೀದರ್, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಉಷ್ಣ ಅಲೆ ಇರಲಿದೆ. ಇನ್ನೂ, ತುಮಕೂರು, ವಿಜಯನಗರ, ಶಿವಮೊಗ್ಗ, ಕೋಲಾರ, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಉಡುಪಿಯಲ್ಲಿ ಒಣಹವೆ ಇರಲಿದೆ.
ಮುಂದಿನ 5 ದಿನಗಳ ಕಾಲ ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾದ್ಯತೆಯಿದ್ದು ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ, ಇನ್ನುಳಿದ ದಿನಗಳಲ್ಲಿ ಒಣ ಹವೆಯಿರುವ ನಿರೀಕ್ಷೆಯಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆಯಿದೆ.
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಾರ್ಚ್ 18-20 ರವರೆಗೆ ಅಲ್ಲಲ್ಲಿ ಬಿಸಿ ಗಾಳಿ ಪರಿಸ್ಥಿತಿ ಹೆಚ್ಚಾಗಿರುವ ಸಾಧ್ಯತೆಯಿದೆ.
ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾದ್ಯತೆಯಿದ್ದು, ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯುವ ಸಾಧ್ಯತೆಯಿದೆ. ಮುಂದಿನ 5 ದಿನಗಳಕಾಲ ರಾಜ್ಯದಾದ್ಯಂತ ಒಣ ಹವೆಯಿರುವ ಸಾದ್ಯತೆಯಿದ್ದು, ಮಾರ್ಚ್ 20 ರಂದು ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಅಲ್ಲದೇ, ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆ ಮುಂದುವರೆಯುವ ಸಾದ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications