Rain Alert : ರಾಜ್ಯದಲ್ಲಿ ಮುಂದುವರೆದ ವರುಣನ ಆರ್ಭಟ, ಏಪ್ರಿಲ್ 20ರವರೆಗೂ ಈ ಜಿಲ್ಲೆಗಳಲ್ಲಿ ಮಳೆಯೋ.. ಮಳೆ
ಬೆಂಗಳೂರು, ಏಪ್ರಿಲ್ 14: ಬಿಸಿಲ ತಾಪದಿಂದ ಕಂಗೆಟ್ಟಿದ್ದ ರಾಜ್ಯದಲ್ಲಿ ಯುಗಾದಿ ನಂತರ ವಿವಿಧ ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ರಾಜ್ಯದ ಜನತೆ ಸಂತಸ ವ್ಯಕ್ತಪಡಿಸಿದ್ದಾರೆ. ಕರ್ನಾಟಕದ ಹಲವೆಡೆ ಕಳೆದ ಮೂರು ದಿನಗಳಿಂದ ವರುಣನ ಆಗಮನವಾಗಿದ್ದು, ಶಿವಮೊಗ್ಗ, ಶೃಂಗೇರಿ, ತೀರ್ಥಹಳ್ಳಿ, ಉತ್ತರ ಕನ್ನಡ ಸೇರಿದಂತೆ ಹಲವೆಡೆ ಮಳೆಯಾಗಿದೆ.
ಹೌದು, ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ. ಬೀದರ್, ಬೆಳಗಾವಿ, ನರಗುಂದ, ಕಕ್ಕೇರಿ, ಅಥಣಿ, ಯಲಬುರ್ಗಾ, ಜಯಪುರ, ಬಾಳೆಹೊನ್ನೂರು, ನಾಪೋಕ್ಲು, ತ್ಯಾಗರ್ತಿ, ಮೈಸೂರಿನಲ್ಲಿ ಶನಿವಾರ ಮಳೆಯಾಗಿದೆ. ಏಪ್ರಿಲ್ 15 ಹಾಗೂ 16ರಂದು ರಾಜ್ಯಾದ್ಯಂತ ಒಣಹವೆ ಇರುವ ಸಾಧ್ಯತೆ ಇದೆ. ಅಲ್ಲದೇ ಏಪ್ರಿಲ್ 20 ರವರೆಗೂ 25 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇನ್ನೂ ಏಪ್ರಿಲ್ 17ರಂದು ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಶಿವಮೊಗ್ಗ, ತುಮಕೂರು, ವಿಜಯನಗರ, ಮೈಸೂರು, ವಿಜಯನಗರ ಜಿಲ್ಲೆಗಳ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.












Click it and Unblock the Notifications