Karnataka Rain: ಆಗಸ್ಟ್ 28ರವರೆಗೆ ಭಾರೀ ಮಳೆ ಸಾಧ್ಯತೆ! ಯಾವ ಜಿಲ್ಲೆಗಳಲ್ಲಿ ವರುಣನ ಆಗಮನ ಇಲ್ಲಿದೆ ನೋಡಿ
ಬೆಂಗಳೂರು, ಆಗಸ್ಟ್ 24: ಈ ವರ್ಷ ಮಳೆರಾಮನ ಆಗಮನವೇ ತಡವಾಗಿದ್ದು, ಆಗಸ್ಟ್ ತಿಂಗಳ ಆರಂಭದಲ್ಲೇ ಮಳೆರಾಯ ಕೈ ಕೊಟ್ಟಿದ್ದು, ಇದೀಗ ರಾಜ್ಯದಲ್ಲಿಆಗಸ್ಟ್ 28ರವರೆಗೆ ಹಲವು ಜಿಲ್ಲೆಗಳಲ್ಲಿ ವರುಣ ಆರ್ಭಟಿಸಲಿದ್ದಾನೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ.
ಇನ್ನೂ ಹೆಚ್ಚು ಮಳೆಯಾಗುವ ಹಿನ್ನಲೆ ಕೆಲ ಜಿಲ್ಲೆಗಳು ಅಲರ್ಟ್ ಆಗಿರುವಂತೆ ಸೂಚಿಸಲಾಗಿದೆ. ಅಲ್ಲದೇ ಇಂದಿನಿಂದ ಉತ್ತರ ಕರ್ನಾಟಕದಲ್ಲಿ ಮಳೆ ಏರಿಕೆಯಾಗಲಿದೆ. ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಹಾವೇರಿ, ಗದಗ, ಕೊಪ್ಪಳ, ಬೀದರ್, ಕಲಬುರಗಿ, ಯಾದಗಿರಿ ಮತ್ತು ರಾಯಚೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.

ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಉತ್ತರ ಕರ್ನಾಟಕ ಮಾತ್ರವಲ್ಲದೇ ಕಲ್ಯಾಣ ಕರ್ನಾಟಕ ಭಾಗದಲ್ಲೂ ಈ ತಿಂಗಳಾಂತ್ಯಕ್ಕೆ ಮಳೆ ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನೂ ಈ ಬಾರೀ ಮೂರು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರಿಸಲಿದ್ದಾನೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಯೆಲ್ಲೊಅಲರ್ಟ್ ಘೋಷಣೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ಈಗಾಗಲೇ ಮಳೆ ಇಲ್ಲದೇ ರಾಜ್ಯದ ಜನತೆ ಹಾಗೂ ರೈತ ಸಮುದಾಯ ಕಂಗೆಟ್ಟಿದ್ದು, ಇಂದಿನಿಂದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮಳೆ ಚುರುಕುಗೊಳ್ಳಲಿದೆ. ಈ ತಿಂಗಳಾಂತ್ಯಕ್ಕೆ ಮಳೆ ಆರ್ಭಟಿಸಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಮತ್ತು ದಾವಣಗೆರೆ ಜಿಲ್ಲೆಗಳ ವಿವಿಧೆಡೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಚಾಮರಾಜನಗರ, ಮೈಸೂರು, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಕೋಲಾರದಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.












Click it and Unblock the Notifications