Get Updates
Get notified of breaking news, exclusive insights, and must-see stories!

Rain Alert: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮುಂದುವರೆದ ಮಳೆಯ ಅಬ್ಬರ: ಹವಾಮಾನ ಇಲಾಖೆ ಕೊಟ್ಟ ಸೂಚನೆ ಏನು?

ಬೆಂಗಳೂರು, ಏಪ್ರಿಲ್‌ 26: ಕರ್ನಾಟಕದ ಜನತೆ ಬಿರು ಬಿಸಿಲಿನಿಂದ ತತ್ತರಿಸಿ ಹೋಗಿದ್ದು, ಕೊನೆಗೂ ವರುಣ ಕೃಪೆ ತೋರಿದ್ದಾನೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಹಲವು ದಿನಗಳಿಂದ ಭರ್ಜರಿ ಮಳೆಯಾಗುತ್ತಿದ್ದು, ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆರಾಯನ ಆಗಮನವಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಹೌದು, ಕಳೆದ ಹಲವು ದಿನಗಳಿಂದ ಉತ್ತಮ ಮಳೆಯಾಗುತ್ತಿದ್ದು, ಕರ್ನಾಟಕದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ಏಪ್ರಿಲ್ 29 ರಿಂದ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಾವಣಗೆರೆ, ಕೊಡಗು, ಮಂಡ್ಯ, ತುಮಕೂರು, ಮೈಸೂರು, ಹಾಸನ, ಬಾಗಲಕೋಟೆ, ಗದಗ, ಬೀದರ್, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ ಮಳೆಯಾಗಲಿದ್ದು, ಈ ಭಾಗದಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ ಎಂದು ತಿಳಿದು ಬಂದಿದೆ.

Karnataka Rain Karnataka s Many Districts Will Witness Heavy Rainfall From April 29

ಇನ್ನೂ ಮೇ 1 ರಂದು ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ವಿಜಯಪುರ, ಬೆಳಗಾವಿ, ಬಾಗಲಕೋಟೆ, ಕೊಪ್ಪಳ, ಯಾದಗಿರಿ, ದಾವಣಗೆರೆ, ಚಿತ್ರದುರ್ಗ, ರಾಮನಗರ, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ. ಈ ಬಾರಿ ರಾಜ್ಯದಲ್ಲಿ ಬಿಸಿಲಿಗೆ ಜನ ರೋಸಿ ಹೋಗಿದ್ದು, ಕರುನಾಡ ಮಂದಿ ಹೈರಾಣಾಗಿಸಿದೆ. ಅದರಲ್ಲೂ ಬೆಂಗಳೂರಲ್ಲಿ ತಾಪಮಾನ ಏರುತ್ತಲೇ ಇದೆ. ಸಿಲಿಕಾನ್ ಸಿಟಿ ಮಂದಿ ಬಿಸಿಲಿನ ಝಳಕ್ಕೆ ತತ್ತರಿಸಿದ್ದಾರೆ. ಇತ್ತ ಕಲಬುರಗಿ, ರಾಯಚೂರು, ಕೊಡಗು, ಕೋಲಾರ, ಗದಗ, ಹಾಸನ, ಬಳ್ಳಾರಿ, ಚಿಕ್ಕಮಗಳೂರು, ತುಮಕೂರು, ಶಿವಮೊಗ್ಗದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+