Karnataka Weather: ರಾಜ್ಯದಲ್ಲಿ ಜನವರಿ 4 ರಿಂದ 7ರವರೆಗೆ ಈ ಜಿಲ್ಲೆಗಳಲ್ಲಿ ಮಳೆ!
ಬೆಂಗಳೂರು, ಜನವರಿ 01: ಪ್ರತಿ ವರ್ಷದಂತೆ ಈ ವರ್ಷವೂ ಕರ್ನಟಕದಲ್ಲಿ ಬಹುತೇಕ ಜಿಲ್ಲೆಗಳಲ್ಲಿ ಚಳಿಯ ವಾತಾವರಣ ಶುರುವಾಗಿದೆ. ಬೆಳಗಿನ ಜಾವ ಮಂಜು ಮುಸುಕಿದ ವಾತಾವರಣವಿದ್ದು, ಹೊಸ ವರ್ಷದ ಆರಂಭದಲ್ಲೇ ವರುಣ ದೇವನ ಆಗಮನವಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಜನವರಿ 4 ರಿಂದ 7 ರವರೆಗೆ ಉತ್ತರ ಒಳನಾಡು, ದಕ್ಷಿಣ ಒಳನಾಡು, ಕರಾವಳಿ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ,ಕೊಪ್ಪಳ, ರಾಯಚೂರು, ವಿಜಯಪುರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಅಲ್ಲದೇ ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಕನಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2-3 ಡಿಗ್ರಿ ಸೆಲ್ಸಿಯಸ್ನಷ್ಟು ಕಡಿಮೆಯಾಗುವ ಸಾಧ್ಯತೆ ಇದೆ. ಹಾಗೂ ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ,ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ರಾಜ್ಯದ ಗರಿಷ್ಠ ತಾಪಮಾನ ಮಾಹಿತಿ ಇಲ್ಲಿದೆ
ಎಚ್ಎಎಲ್ನಲ್ಲಿ 28.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 14.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.1 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 29.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಬೆಳಗಿನ ಜಾವ ಚಳಿ ಜತೆಗೆ ಕೆಲವೆಡೆ ಮಂಜು ಮುಸುಕಿದ ವಾತಾವರಣವೂ ಇತ್ತು.
ಮಂಗಳೂರುನಲ್ಲಿ 31ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 24 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಶಿವಮೊಗ್ಗದಲ್ಲಿ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಹಾಗೂ ಬೆಳಗಾವಿಯಲ್ಲಿ 29ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಮೈಸೂರುನಲ್ಲಿ 31 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.












Click it and Unblock the Notifications