Karnataka Rain: ಡಿ. 3 ರವರೆಗೂ ರಾಜ್ಯದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣದೇವ? ಹವಾಮಾನ ಇಲಾಖೆ ಕೊಟ್ಟ ಸೂಚನೆ ಏನು?

ಬೆಂಗಳೂರು, ನವೆಂಬರ್‌ 28: ರಾಜ್ಯದಲ್ಲಿ ಹಿಂಗಾರು ಚುರುಕುಗೊಂಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಡಿಸೆಂಬರ್ 3ರವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಹೌದು, ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

Karnataka Rain: Karnatakas Many Districts Will Witness Heavy Rainfall Till December 3

ಇಂದಿನಿಂದ ಡಿಸೆಂಬರ್‌ 2ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಾತ್ರ ಮೋಡ ಕವಿದ ವಾತಾವರಣ ಇರಲ್ಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ, ಕರಾವಳಿಯಲ್ಲಿ ಒಣಹವೆ ಇತ್ತು. ಬೆಳಗಾವಿ ವಿಮಾನ ನಿಲ್ದಾಣದಲ್ಲಿ 17.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Karnataka Rain: Karnatakas Many Districts Will Witness Heavy Rainfall Till December 3

ಇನ್ನೂ ಸೋಮವಾರ ಬೆಂಗಳೂರಿನ ಹಲವು ಕಡೆ ತುಂತುರು ಮಳೆಯಾಗಿದೆ, ಇಂದು ಸಹ ಮೋಡಕವಿದ ವಾತಾವರಣವಿರಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಎಚ್​ಎಎಲ್​ನಲ್ಲಿ 27.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 27.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.7 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+