Karnataka Rain: ಬೆಂಗಳೂರು ಸೇರಿದಂತೆ ರಾಜ್ಯದ ಈ ಜಿಲ್ಲೆಗಳಲ್ಲಿ ಅಬ್ಬರಿಸಲಿದ್ದಾನೆ ವರುಣದೇವ?
ಬೆಂಗಳೂರು, ನವೆಂಬರ್ 27: ಕರ್ನಾಟಕದಲಿ ಹಿಂಗಾರು ಚುರುಕುಗೊಂಡಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಹೌದು, ಕರ್ನಾಟಕದ ಕರಾವಳಿ, ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆಯ ಆರ್ಭಟ ಜೋರಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ತಿಳಿಸಿದೆ.
ಇನ್ನೂ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಅಲ್ಲದೇ ಕರಾವಳಿ ಜಿಲ್ಲೆಗಳಿಗೆ ಎರಡು ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ. ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮೂರು ದಿನಗಳ ಕಾಲ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.
ಕೊಡಗು, ಶಿವಮೊಗ್ಗ ವರುಣ ಅಬ್ಬರಿಸಲಿದ್ದು, ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನೂ ವಿಜಯಪುರದಲ್ಲಿ 17.1 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ತಾಪಮಾನ ದಾಖಲಾಗಿದೆ. ಎಚ್ಎಎಲ್ನಲ್ಲಿ 25.3 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 16.7 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 26.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.8 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 25.9 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.












Click it and Unblock the Notifications