Karnataka Rain: ರಾಜ್ಯದ ಈ 17 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿಸೆಂಬರ್ 5ರವರೆಗೆ ಮಳೆ!
ಬೆಂಗಳೂರು, ನವೆಂಬರ್ 29: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ ಹಲವು ದಿನಗಳಿಂದ ಮಳೆಯಾಗುತ್ತಿದ್ದು, ಹಲವು ಕಡೆಗಳಲ್ಲಿ ಹಿಂಗಾರು ಮಳೆ ಚುರುಕಾಗಿದೆ. ಈ ನಡುವೆ ಹವಾಮಾನ ಇಲಾಖೆ ಮುಂದಿನ ಹಲವು ದಿನಗಳಲ್ಲಿ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಲಕ್ಷಣಗಳು ಇವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ಬೆಂಗಳೂರು ಸೇರಿ ರಾಜ್ಯದ 17ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಡಿಸೆಂಬರ್ 5 ರವರೆಗೆ ಮಳೆಯಾಗಲಿದ್ದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ತುಮಕೂರು ಹಾಗೂ ವಿಜಯನಗರದಲ್ಲಿ ಮಳೆಯಾಗಲಿದೆ.

ಮುಂದಿನ ಎರಡರಿಂದ ಮೂರು ದಿನ ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಮಳೆ ಸಾಮಾನ್ಯ ಪ್ರಮಾಣದಲ್ಲಿ ಆಗಲಿದೆ. ಆದರೆ ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಹಿಂಗಾರು ಮಳೆ ಅಬ್ಬರಿಸುವ ಸಾಧ್ಯತೆಗಳು ಇವೆ. ಈ ಪೈಕಿ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಹಾಸನ, ತುಮಕೂರು, ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ದಾವಣಗೆರೆ,ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗ, ಜಿಲ್ಲೆಗಳಲ್ಲಿ ಭಾರೀ ಮಳೆ ಸಂಭವವಿದೆ.
ರಾಜ್ಯದ ಗರಿಷ್ಠ ತಾಪಮಾನ ಮಾಹಿತಿ
ಎಚ್ಎಎಲ್ನಲ್ಲಿ 28.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 28.2 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.
ಇನ್ನೂ ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಒಂದೆರಡು ಕಡೆ ಮಳೆಯಾಗಿದ್ದು, ಚಾಮರಾಜನಗರದಲ್ಲಿ 17.3 ಡಿಗ್ರಿ ಸೆಲ್ಸಿಯಸ್ ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಅಲ್ಲದೇ ಬೆಂಗಳೂರಿನ ಕೆಲವೆಡೆ ಮಂಗಳವಾರ ತುಂತುರು ಮಳೆಯಾಗಿದ್ದು, ಮೋಡಕವಿದ ವಾತಾವರಣವಿರಲಿದ್ದು, ಹಗುರ ಮಳೆಯಾಗುವ ಸಾಧ್ಯತೆ ಇದೆ.












Click it and Unblock the Notifications