karnataka Rain: ರಾಜ್ಯದಲ್ಲಿ ಐದು ದಿನಗಳ ಕಾಲ ಮಳೆ; ಹವಾಮಾನ ಇಲಾಖೆ ಕೊಟ್ಟ ಸೂಚನೆ ಏನು?

ಬೆಂಗಳೂರು, ನವೆಂಬರ್‌ 13: ರಾಜ್ಯದಲ್ಲಿ ಹಲವು ದಿನಗಳ ಹಿಂದೆ ಉತ್ತಮ ಮಳೆಯಾಗಿದ್ದು, ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಇನ್ನೂ ನಾಲ್ಕೈದು ದಿನಗಳ ಕಾಲ ರಾಜ್ಯದಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.

ಹೌದು, ದಕ್ಷಿಣ ಒಳನಾಡಿನ ಬಹುತೇಕ ಕಡೆ ನವೆಂಬರ್ 15 ರಿಂದ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿರಲಿದೆ, ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮೋಡ ಕವಿದ ವಾತಾವರಣವಿರಲಿದೆ, ಎರಡು ದಿನದ ಬಳಿಕ ಮಳೆ ಕಾಣಿಸಿಕೊಳ್ಳುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Karnataka Rain: Karnatakas Many Districts Will Witness Heavy Rainfall Till November 15

ಇನ್ನೂ ವಿಜಯಪುರ ಜಿಲ್ಲೆಯ ನಾಗತಿಬಸಾಪುರ, ನಾಗತಿಬಸಾಪುರ, ಹಾಸನ ಜಿಲ್ಲೆಯ ಜಂಬೂರು, ಚಿಕ್ಕಮಗಳೂರು ಜಿಲ್ಲೆಯ ಮೇಲಿನ ಹುಲುವತ್ತಿ,ಯಲಗತವಳಿ, ಶಾಂತಿಗ್ರಾಮ, ಹಲಸುಲಿಗೆ, ಬೈಲಹಳ್ಳಿ, ಉಡುಪಿ ಜಿಲ್ಲೆಯ ಮೊಲಹಳ್ಳಿ, ತಲ್ಲೂರು, ಗುಜ್ಜಾಡಿ, ವಡ್ಡರ್ಸೆ, ಕಡೆಕರ್, ಕುಚ್ಚೂರು, ತುಳುವಿನಕೊಪ್ಪ, ತ್ರಿಪುರ, ದಾಸರಹಳ್ಳಿ, ಚಿಕ್ಕಂಗಲದಲ್ಲಿ ಸಾಧಾರಣ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ. ಅಲ್ಲದೇ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಹಾಸನ,ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ವಿಜಯಪುರ, ಹಾಸನ, ಬೆಳಗಾವಿ, ಉಡುಪಿ, ಚಿಕ್ಕಮಗಳೂರು, ದಾವಣಗೆರೆ, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮೈಸೂರು, ತುಮಕೂರು ಜಿಲ್ಲೆಯಲ್ಲಿ ಚದುರಿದಂತೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಹವಾಮಾನ ಇಲಾಖೆ ಪ್ರಕಾರ ನವೆಬಂರ್ 14‌ ರ ವೇಳೆಗೆ ಆಗ್ನೇಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡದ ಪ್ರದೇಶ ನಿರ್ಮಾಣವಾಗುವ ಸಾಧ್ಯತೆ ಇದ್ದು, ಈ ಹಿನ್ನೆಲೆಯಲ್ಲಿ ನವೆಂಬರ್‌ 14 ಮತ್ತು 15ರಂದು ತಮಿಳುನಾಡಿನ 9 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+