karnataka Rain: ರಾಜ್ಯದಲ್ಲಿ ಮೂರು ದಿನಗಳ ಕಾಲ ವರುಣಾರ್ಭಟ; ಹವಾಮಾನ ಇಲಾಖೆ ಕೊಟ್ಟ ಸೂಚನೆ ಏನು?

ಬೆಂಗಳೂರು, ನವೆಂಬರ್‌ 15: ರಾಜ್ಯದಲ್ಲಿ ಕೆಲ ದಿನಗಳ ಕಾಲ ಮಳೆರಾಯ ತುಸು ವಿರಾಮ ನೀಡಿದ್ದು, ಇದೀಗ ಹಿಂಗಾರು ಮತ್ತೆ ಆರ್ಭಟಿಸುವ ಮುನ್ಸೂಚನೆ ಇದೆ. ನವೆಂಬರ್ 15 ರಿಂದ ಮತ್ತೆ ಕರಾವಳಿ ಹಾಗೂ ಒಳನಾಡಿನಲ್ಲಿ ವರುಣಾರ್ಭಟ ನಡೆಸಲಿದ್ದಾನೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

ಹೌದು, ನವೆಂಬರ್ 19ರಿಂದ 3 ದಿನಗಳ ಕಾಲ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಲ್ಲಿ ಕೆಲವು ದಿನಗಳಿಂದ ದುರ್ಬಲವಾಗಿರುವ ಮಳೆ ಬಿರುಸುಗೊಳ್ಳಲಿದೆ. ಈಗಾಗಲೇ ಬಂಗಾಳಕೊಲ್ಲಿಯಲ್ಲಿ ಸಾಗರದಲ್ಲಿ ಕಡಿಮೆ ಒತ್ತಡದ ಪ್ರದೇಶ ಸೃಷ್ಟಿಯಾಗಿದೆ. ಇದರ ಪರಿಣಾಮವು ಕರ್ನಾಟಕದ ಹವಾಮಾನದ ಮೇಲಾಗಲಿದೆ ಎಂದು ಅಂದಾಜಿಸಲಾಗಿದೆ.

Karnataka Rain: Karnatakas Many Districts Will Witness Heavy Rainfall Till November 21

ನವೆಂಬರ್‌ 19 ರಿಂದ ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ವೇಳೆಗೆ ಕೆಲವು ಕಡೆ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ದಕ್ಷಿಣ ಒಳನಾಡು ಮತ್ತೆ ಭಾರೀ ಮಳೆಗೆ ಸಾಕ್ಷಿ ಆಗಲಿದೆ. ಇಂದಿನಿಂದ (ನವೆಂಬರ್ 15) ಮೂರು ದಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮಚರಾಜನಗರ, ಚಿಕ್ಕಮಗಳೂರು, ಕೋಲಾರ, ಮಂಡ್ಯ, ಮೈಸೂರು, ರಾಮನಗರ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಅಲ್ಲಿದೇ ನವೆಂಬರ್ 20 ರವರೆಗೆ ಹಲವು ಜಿಲ್ಲೆಗಳು ಸೇರಿದಂತೆ ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ತುಮಕೂರು, ಶಿವಮೊಗ್ಗ, ಕೊಡಗು, ಚಿಕ್ಕಬಳ್ಳಾಪುರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ನವೆಂಬರ್ 17ರಿಂದ ಮೂರು ದಿನ ಕರಾವಳಿ ಭಾಗದ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳ ವಿವಿಧ ಪ್ರದೇಶಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕ ಮಳೆ ನಿರೀಕ್ಷೆ ಇದೆ. ಆದರೆ ಉತ್ತರ ಕರ್ನಾಟಕ ಯಾವ ಜಿಲ್ಲೆಗಳಿಗೂ ಮಳೆ ಮುನ್ಸೂಚನೆ ಇಲ್ಲ ಎನ್ನಲಾಗಿದೆ.

ರಾಜ್ಯದ ಗರಿಷ್ಠ ತಾಪಮಾನ ಮಾಹಿತಿ

ಹೌದು, ಕರ್ನಾಟಕದಲ್ಲಿ ಮಳೆಯ ಪ್ರಮಾಣ ಕಡಿಮೆಯಾಗಿದ್ದು, ಒಣಹವೆ ಇದೆ. ವಿಜಯಪುರದಲ್ಲಿ 15.5 ಅತ್ಯಂತ ಕನಿಷ್ಠ ಉಷ್ಣಾಂಶ ದಾಖಲಾಗಿದೆ, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಕನಿಷ್ಠ ತಾಪಮಾನವು 2 ರಿಂದ 3 ಡಿಗ್ರಿ ಸೆಲ್ಸಿಯಸ್​ನಷ್ಟು ಹೆಚ್ಚಾಗುವ ಸಾಧ್ಯತೆ ಇದೆ.ನಗರದಲ್ಲಿ 28.2 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 27.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.5 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+