karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ನವೆಂಬರ್ 22 ರವರೆಗೂ ಮಳೆ ; ಹವಾಮಾನ ಇಲಾಖೆ ಕೊಟ್ಟ ಸೂಚನೆ ಏನು?
ಬೆಂಗಳೂರು, ನವೆಂಬರ್ 16: ರಾಜ್ಯದಲ್ಲಿ ಹಲವು ದಿನಗಳ ಹಿಂದೆ ಉತ್ತಮ ಮಳೆಯಾಗಿದ್ದು, ಕರ್ನಾಟಕದ ದಕ್ಷಿಣ ಒಳನಾಡಿನ ಬಹುತೇಕ ಕಡೆಗಳಲ್ಲಿ ಇನ್ನೂ ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದುಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಹೌದು, ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ (ಗುರುವಾರ) ನವೆಂಬರ್ 22ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ನವೆಂಬರ್ 19 ರಿಂದ 3 ದಿನಗಳ ಕಾಲ ಮಳೆಯಾಗಲಿದೆ ಎಂದು ಮಾಹಿತಿ ನೀಡಿದೆ.

ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಸಾಧಾರಣ ಮಳೆಯಾಗಲಿದೆ.
ನವೆಂಬರ್ 19 ರಿಂದ 22 ರವರೆಗೂ ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದ ಗರಿಷ್ಠ ತಾಪಮಾನ ಮಾಹಿತಿ
ಇನ್ನೂ ರಾಜ್ಯದಲ್ಲಿ ಹಿಂಗಾರು ಚುರುಕುಗೊಂಡಿದ್ದು, ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ದಾವಣಗೆರೆ ಹಾಗೂ ವಿಜಯಪುರದಲ್ಲಿ 15.5 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಿನಲ್ಲಿ ಸಂಜೆ ವೇಳೆಗೆ ಮೋಡಕವಿದ ವಾತಾವರಣ ನಿರ್ಮಾಣವಾಗಿ ಮಳೆಯಾಗುವ ಸಾಧ್ಯತೆ ಇದೆ.ನಗರದಲ್ಲಿ 24.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 19.4 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 24.7 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, ಎಚ್ಎಎಲ್ನಲ್ಲಿ 24.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 17.9 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.












Click it and Unblock the Notifications