Karnataka Rain: ಬೆಂಗಳೂರು ಸೇರಿ ರಾಜ್ಯದ ಈ ಭಾಗದಲ್ಲಿ ನ.9 ರ ವರೆಗೆ ಮಳೆ!?

ಬೆಂಗಳೂರು, ನವೆಂಬರ್‌ 04: ಬದಲಾದ ಹವಾಮಾನ ವೈಪರಿತ್ಯಗಳ ಪ್ರಭಾವದಿಂದಾಗಿ ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿದೆಡೆ ಭಾರೀ ಮಳೆಯಾಗುವ ಸಾಧ್ಯೆತೆಯಿದೆ ಎಂದು ಎಂದು ಹವಾಮಾನ ಇಲಾಖೆ ಹೇಳಿದೆ.

ಹೌದು, ದಿಕ್ಕಿನಿಂದ ಬೀಸುವ ಗಾಳಿಯಲ್ಲಿ ಹೆಚ್ಚು ತೇವಾಂಶದ ಪ್ರಮಾಣವಿರಲಿದ್ದು ಮಂಡ್ಯ, ಮೈಸೂರು, ಚಾಮರಾಜನಗರ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಇಂದಿನಿಂದ ನವೆಂಬರ್‌ 9ರ ವರೆಗೂ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rain: Karnatakas Many Districts Will Witness Heavy Rainfall Till November 9

ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಬಹಳಷ್ಟು ಸಾಧ್ಯತೆ ಇದ್ದು, ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ, ಮಂಗಳೂರು, ಶಿವಮೊಗ್ಗ, ಬೆಳಗಾವಿ, ಉಡುಪಿ, ದಾವಣಗೆರೆ, ಚಿತ್ರದುರ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ಇಂದಿನಿಂದ ಕರಾವಳಿ, ಪಶ್ಚಿಮ ಘಟ್ಟದ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಹೇಳಲಾಗಿದೆ.

ಇನ್ನೂ ಶುಕ್ರವಾರ ಬೆಂಗಳೂರಿನ ವಿವಿಧ ಭಾಗದಲ್ಲಿ ಮಳೆಯಾಗಿದ್ದು, ಇಡೀ ರಾಜ್ಯದಲ್ಲಿ 3 ವಾರಗಳಿಗೆ ವಾಡಿಕೆಯಷ್ಟು ಮಳೆಯಾಗುವ ನಿರೀಕ್ಷೆ ಇದೆ. ಬೆಂಗಳೂರು ಸುತ್ತಮುತ್ತ ಮೂರು ದಿನ ಸಾಧಾರಣ ಮಳೆಯಾಗಲಿದೆ. ಇನ್ನೂ ದಕ್ಷಿಣ ಒಳನಾಡಿನಲ್ಲಿ ನವೆಂಬರ್ 4ರಿಂದ ಐದು ದಿನಗಳ ಕಾಲ ಮಳೆಯಾಗೋ ಸಾಧ್ಯತೆ ಇದೆ. ಕೆಲ ಜಿಲ್ಲೆಗಳಿಗೆ ಎಲ್ಲೋ ಅಲರ್ಟ್ ಘೋಷಣೆ ಮಾಡಲಾಗುವುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಶುಕ್ರವಾರ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಯಲ್ಲಿ ಮಳೆಯಾಗಿದ್ದು, ನವೆಂಬರ್ 5ರಂದು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಇನ್ನೂ ಹಲವು ಭಾಗಗಳಲ್ಲಿ ಸಂಜೆ ವೇಳೆಗೆ ಹಗುರ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಕೆಲವು ಕಡೆಗಳಲ್ಲಿ ಬೆಳಗಿನ ಜಾವ ಮಂಜು ಮುಸುಕುವ ಬಹಳಷ್ಟು ಸಾಧ್ಯತೆ ಇರುತ್ತದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+