Karnataka Weather: ರಾಜ್ಯದ ಈ ಜಿಲ್ಲೆಗಳಲ್ಲಿ ಮಾತ್ರ ಮಳೆ ಸಾಧ್ಯತೆ

ದೇಶದ ಹಲವು ಭಾಗಗಳಲ್ಲಿ ಮಳೆ ಅಬ್ಬರಿಸುತ್ತಿದ್ದರೂ, ರಾಜ್ಯದ ಪಾಲಿಗೆ ಮಾತ್ರ ದೂರವಾಗಿದೆ. ಅಕ್ಟೋಬರ್ 9ರವರೆಗೆ ರಾಜ್ಯದಲ್ಲಿ ಒಣಹವೆ ಇರಲಿದ್ದು ಕೆಲವೇ ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬುಧವಾರ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಮಾತ್ರ ಸಾಧಾರಣ ಮಳೆಯಾಗಿದೆ. ಅಕ್ಟೋಬರ್ 5ರ ಬೆಳಗ್ಗೆ 8.30ಕ್ಕೆ ಕೊನೆಯಾದಂತೆ ಕಳೆದ 24 ಗಂಟೆಗಳಲ್ಲಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಟ್ನಿ ಎನ್ನುವಲ್ಲಿ 52.5 ಮಿಮೀ ಮಳೆಯಾಗಿದ್ದು ರಾಜ್ಯದಲ್ಲಿ ಅತಿ ಹೆಚ್ಚು ಮಳೆಯಾದ ಪ್ರದೇಶ ಎನಿಸಿಕೊಂಡಿದೆ.

 Karnataka Rain: Light Rain Expected Over Many Districts

ಕೊಪ್ಪಳ, ಗದಗ, ತುಮಕೂರು, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಹೇಳಿದೆ. ಗುರುವಾರ ಕೂಡ ಕೆಲವು ಜಿಲ್ಲೆಗಳಲ್ಲಿ ಮಾತ್ರ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ !

ಅಕ್ಟೋಬರ್ 5 ಮತ್ತು 6ರಂದು ಬೆಳಗಾವಿ, ಉತ್ತರ ಕನ್ನಡ, ಧಾರವಾಡ, ಹಾವೇರಿ, ದಾವಣಗೆರೆ, ಶಿವಮೊಗ್ಗ, ಚಿತ್ರದುರ್ಗ, ತುಮಕೂರು, ಚಿಕ್ಕಮಗಳೂರು, ದಾವಣಗೆರೆ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮೈಸೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ದಕ್ಷಿಣ ಕನ್ನಡ, ಉಡುಪಿ, ಮೈಸೂರು, ಗದಗ, ಬಳ್ಳಾರಿ, ಕೊಪ್ಪಳ, ಬಾಗಲಕೋಟೆ ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಈ ಜಿಲ್ಲೆಗಳನ್ನು ಹೊರತುಪಡಿಸಿ ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ.

ಅಕ್ಟೋಬರ್ 10 ರಿಂದ ಮಳೆಚುರುಕು

ಅಕ್ಟೋಬರ್ 9ರವರೆಗೆ ರಾಜ್ಯದಲ್ಲಿ ಸಾಧಾರಣ ಮಳೆಯಾಗಲಿದ್ದು, ಅಕ್ಟೋಬರ್ 10ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಚುರುಕಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಅಕ್ಟೋಬರ್ 10ರಿಂದ ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಭಾಗದಲ್ಲಿ ವ್ಯಾಪಕ ಮಳೆಯಾಗಲಿದ್ದು, ಉತ್ತರ ಒಳನಾಡಿನಲ್ಲಿ ಕೂಡ ಮಳೆಯಾಗಲಿದೆ ಎಂದು ಹೇಳಿದೆ.

ಕಾವೇರಿ ಜಲಾನಯನದ ಪ್ರದೇಶದಲ್ಲಿ ಕೂಡ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಈ ಭಾಗದ ಜನರಿಗೆ ಸ್ವಲ್ಪ ನೆಮ್ಮದಿ ತರಿಸಿದೆ. ಕೇರಳದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೃಷ್ಣ ರಾಜಸಾಗರಕ್ಕೆ ಒಳಹರಿವಿನಲ್ಲಿ ಏರಿಕೆಯಾಗಿದೆ, ಈ ಸಮಯದಲ್ಲೇ ರಾಜ್ಯದ ಕಾವೇರಿ ಜಲಾನಯನದಲ್ಲಿ ಉತ್ತಮ ಮಳೆಯಾದರೆ ಒಳಹರಿವು ಮತ್ತಷ್ಟು ಹೆಚ್ಚಲಿದ್ದು ಸಂಕಷ್ಟ ಸ್ವಲ್ಪ ಕಡಿಮೆಯಾಗಲಿದೆ. ಬೆಂಗಳೂರಿನಲ್ಲಿ ಕೂಡ ಅಕ್ಟೋಬರ್ 10ರಿಂದ ಉತ್ತಮ ಮಳೆಯಾಗುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+