Karnataka Weather: ಯಾವ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ ತಿಳಿಯಿರಿ

ಆಗಸ್ಟ್ ಮೊದಲ ವಾರ ಮುಗಿಯುತ್ತಾ ಬಂದರೂ ರಾಜ್ಯದ ಮುಂಗಾರು ಚುರುಕುಗೊಳ್ಳುವ ಲಕ್ಷಣ ಕಾಣುತ್ತಿಲ್ಲ. ಕರಾವಳಿ ಜಿಲ್ಲೆಗಳಲ್ಲಿ ಕೂಡ ಮಳೆ ಪ್ರಮಾಣ ಕಡಿಮೆಯಾಗಿದ್ದು ಸಾಧಾರಣ ಮಳೆಯಾಗುತ್ತಿದೆ. ಮುಂದಿನ ಮೂರು ದಿನಗಳ ಕಾಲ ರಾಜ್ಯದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಾತ್ರ ಚದುರಿದಂತೆ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದ್ದು ಉಳಿದ ಜಿಲ್ಲೆಗಳಲ್ಲಿ ಸಾಧಾರಣದಿಂದ ಹಗುರ ಮಳೆಯಾಗುತ್ತದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.

 Karnataka Rain : Likelihood of Rain with Isolated Thunderstorms and Lightning Across the State

ಆಗಸ್ಟ್ 7ರಂದು ಬೆಳಗ್ಗೆ 8.30ಕ್ಕೆ ಕೊನೆಗೊಂಡಂತೆ ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನ ನೆಲ್ಲೂರು ಕೆಮ್ರಾಜೆಯಲ್ಲಿ 41 ಮಿಮೀ ಮಳೆಯಾಗಿದ್ದು ರಾಜ್ಯದಲ್ಲಿ ಹೆಚ್ಚು ಮಳೆಯಾದ ಪ್ರದೇಶ ಎನಿಸಿಕೊಂಡಿದೆ. ಮುಂಗಾರು ದುರ್ಬಲವಾಗಿದ್ದು ಮಳೆ ಪ್ರಮಾಣ ಕಡಿಮೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಜಿಲ್ಲಾವಾರು ಹವಾಮಾನ ವರದಿ

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಚದುರಿದಂತೆ ಉತ್ತಮ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಕೊಡಗಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಸುರಿಯುವ ಸಾಧ್ಯತೆ ಇದೆ. ಚಿಕ್ಕಮಗಳೂರು, ತುಮಕೂರು, ಶಿವಮೊಗ್ಗ, ಹಾಸನ, ಬಾಗಲಕೋಟೆ, ಕೋಲಾರ, ಮೈಸೂರು, ವಿಜಯನಗರ, ದಾವಣಗೆರೆ, ರಾಮನಗರ, ಕಲಬುರಗಿ, ಕೊಪ್ಪಳ, ಚಿಕ್ಕಬಳ್ಳಾಪುರ, ಧಾರವಾಡ, ಗದಗ, ಚಿತ್ರದುರ್ಗ, ಮಂಡ್ಯ ಮತ್ತು ವಿಜಯಪುರ ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದ್ದು, ಯಾದಗಗಿರಿ, ರಾಯಚೂರು, ಚಾಮರಾಜನಗರ, ಬಳ್ಳಾರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ ಎಂದು ತಿಳಿಸಿದೆ.

ಈ ಜಿಲ್ಲೆಗಳಲ್ಲಿ ಸುರಿದ ಮಳೆ

ದಕ್ಷಿಣ ಕನ್ನಡ, ಕೊಡಗು, ಉತ್ತರ ಕನ್ನಡ, ಚಿಕ್ಕಮಗಳೂರು, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಹಲವು ಕಡೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ನೆಲ್ಲೂರು ಕೆಮ್ರಾಜೆ, ಕೊಂಬಾರು, ಮಾದಪ್ಪಾಡಿ, ಕೆಪು, ಸಂಪಾಜೆ, ಅರಂತೋಡು, ಕನಕಮಜಲು, ಕೊಳ್ತಿಗೆ, ಮರೋಡಿಯಲ್ಲಿ ಉತ್ತಮ ಮಳೆಯಾಗಿದೆ.

ಕೊಡಗು ಜಿಲ್ಲೆಯ ಚೆಂಬು, ಪೆರಾಜೆ, ಮಡೆ, ಗೋಣಿಕೊಪ್ಪಲು, ಕಾಕೋತುಪರಂಬು, ಮಾಯಮುಡಿ, ನಾಪೊಕ್ಲು, ಬಿರುನಾಣಿಯಲ್ಲಿ ಉತ್ತಮ ಮಳೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ನೀಲಕುಂದ, ಕದ್ರ, ಬೆಂಗರೆ, ಸಾಲ್ಕಣಿ, ಕೊಡ್ಕಣಿ, ಕೆರವಾಡಿ, ಮರುಕೇರಿಯಲ್ಲಿ ಮಳೆಯಾದರೆ, ಚಿಕ್ಕಮಗಳೂರು ಜಿಲ್ಲೆಯ ತುಳುವಿನಕೊಪ್ಪ, ಮರಿತೊಟ್ಲು, ಧಾರೆಕೊಪ್ಪ, ಬೆಗಾರ್, ಮೆಣಸೆ, ಚೀರನಗಳ್ಳಿಯಲ್ಲಿ ಮಳೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸಕ್ಕರೆ ಗೊಲ್ಲಹಳ್ಳಿ, ದೊಡ್ಡಬೆಲವಂಗಲ, ನರಸೀಪುರದಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+