Rain Alert: ಮೇ 6 ರಿಂದ ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಭಾರಿ ಮಳೆ ಸಾಧ್ಯತೆ

ಬಾರಿ ಬೇಸಿಗೆ, ಶಾಖದ ಅಲೆಯಿಂದ ಬೆಂದಿರುವ ಬೆಂಗಳೂರು ಸೇರಿ ಹಲವು ಜಿಲ್ಲೆಗಳಲ್ಲಿ ಮಳೆಯ ಆಗಮನಕ್ಕೆ ಕೆಲವು ದಿನಗಳಷ್ಟೇ ಬಾಕಿ ಇದೆ. ಏಪ್ರಿಲ್ 30 ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತದೆ ಎಂದಿದ್ದ ಹವಾಮಾನ ಇಲಾಖೆ ಈಗ ಮೇ 6ರಂದು ರಾಜ್ಯದಲ್ಲಿ ಮಳೆ ಶುರುವಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಮೇ 5ರವರೆಗೆ ರಾಜ್ಯದಲ್ಲಿ ಒಣ ಹವೆ ಇರಲಿದೆ ಎಂದು ಹೇಳಿರುವ ಹವಾಮಾನ ಇಲಾಖೆ ಮೇ 6 ರಂದು ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.

Karnataka Rain Many Districts Including Bengaluru to Receive Heavy Rain on May 6th

ಯಾವ ಜಿಲ್ಲೆಗಳಲ್ಲಿ ಮಳೆ?

ಹವಾಮಾನ ಇಲಾಖೆಯ ಪ್ರಕಾರ ಮೇ 6ರಂದು ಮಂಡ್ಯ, ಕೊಡಗು, ಹಾಸನ, ಮೈಸೂರು, ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಗಳ ಹಲವು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಮೇ 5 ರವರೆಗೆ ಶಾಖದ ಅಲೆ ಎಚ್ಚರಿಕೆ

ಮೇ 5 ರವರೆಗೆ ರಾಜ್ಯದ ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಶಾಖದ ಅಲೆಯ ಎಚ್ಚರಿಕೆ ನೀಡಲಾಗಿದೆ.

ಬೆಳಗಾವಿಯಲ್ಲಿ ಮಳೆ

ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾಗಿದ್ದರೆ ಬೆಳಗಾವಿ ಜಿಲ್ಲೆಯಲ್ಲಿ ಮಾತ್ರ ವರುಣನ ದರ್ಶನ ಮಾಡಿದೆ. ಸೋಮವಾರ ಕೂಡ ನಗರದ ಹಲವು ಭಾಗಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಿದೆ ಎಂದು ವರದಿಯಾಗಿದೆ.

ರಾಜಧಾನಿಗೆ ಮಳೆ ಯಾವಾಗ?

ಬೆಂಗಳೂರು ನಗರದಲ್ಲಿ ಬಿಸಿಲಿನ ಝಳ ಹೆಚ್ಚಾಗುತ್ತಿದ್ದು, ಜನ ಹೈರಾಣಾಗಿದ್ದಾರೆ. ಭಾನುವಾರ ದಶಕದ ಹೆಚ್ಚು ತಾಪಮಾನ ದಾಖಲಾಗಿದೆ. ಮಳೆಯ ವಿಚಾರದಲ್ಲಿ ದಾಖಲೆ ಬರೆಯುತ್ತಿದ್ದ ಬೆಂಗಳೂರು ಈಗ ಬಿಸಿಲಿನ ವಿಚಾರದಲ್ಲಿ ಹಳೆಯ ದಾಖಲೆ ಮುರಿಯುತ್ತಿದೆ. ಭಾರಿ ಮಳೆಯಾದರೆ ನಗರದ ತಾಪಮಾನ ಕಡಿಮೆಯಾಗಲಿದೆ. ಆದರೆ ಮಳೆಯ ದರ್ಶನ ಮಾಡಲು ಬೆಂಗಳೂರು ಜನ ಇನ್ನೂ ಒಂದು ವಾರ ಕಾಯಬೇಕಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+