Rain Alert: ರಾಜ್ಯದ ಜನತೆಗೆ ಸಿಹಿ ಸುದ್ದಿ: ಈ ಜಿಲ್ಲೆಗಳಲ್ಲಿ ಮೂರು ದಿನ ಮಳೆ ಗ್ಯಾರಂಟಿ

ಬೆಂಗಳೂರು, ಏಪ್ರಿಲ್‌ 09: ಬೀಸಿಗೆ ರೋಸಿ ರಾಜ್ಯದ ಜನತೆ ಹೈರಾಣಾಗಿದ್ದಾರೆ. ಜನತೆಗೆ ಯುಗಾದಿ ಹಬ್ಬದ ದಿನದಂದು ರಾಜ್ಯದ ಹಲವು ಜಿಲ್ಲೆಗಳಿಗೆ ಮಳೆಯಾಗುವ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದ್ದು, ರಾಜ್ಯದ ಜನತೆ ಸಿಹಿ ಸುದ್ದಿ ಸಿಕ್ಕಂತಾಗಿದೆ.

ಹೌದು, ಮಳೆಗಾಗಿ ಕಾಯುತ್ತಿರುವ ರಾಜ್ಯದ ಜನತೆಗೆ ಕೊನೆಗೂ ನೆಮ್ಮದಿಯ ಸುದ್ದಿಯನ್ನ ಹವಾಮಾನ ಇಲಾಖೆ ನೀಡಿದೆ. ರಾಜ್ಯಾದ್ಯಂತ ತೀವ್ರ ಉಷ್ಣಾಂಶ ಹೆಚ್ಚಾಗಿದ್ದು, ಹಲವು ಜಿಲ್ಲೆಗಳಲ್ಲಿ ಉಷ್ಟಾಂಶ ಗರಿಷ್ಠ ಮಟ್ಟ ತಲುಪಿದೆ. ಬೆಂಗಳೂರು, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ಹಾಸನ ಮುಂತಾದ ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮಳೆ ಸುರಿಯುವ ಸಾಧ್ಯತೆ ಹೆಚ್ಚಾಗಿದ್ದು, ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆಯನ್ನ ನೀಡಿದೆ.

Karnataka Rain Many More districts Will Witness Heavy Rainfall Today

ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಭೂಮಿಗೆ ತಂಪೆರೆಯಲು ವರುಣ ದೇವನ ಆಗಮನವಾಗುತ್ತಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇಂದಿನಿಂದ ಐದು ದಿನಗಳ ಕಾಲ ರಾಜ್ಯದಲ್ಲಿ ಮಳೆಯಾಗಲಿದ್ದು, ಐದು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಇಂದು ಉತ್ತರ ಕನ್ನಡ, ಚಿಕ್ಕಮಗಳೂರು ಸೇರಿದಂತೆ ಕರ್ನಾಟಕದ 9ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡಕ್ಕೆ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದ್ದು, ಬಳ್ಳಾರಿ, ಯಾದಗಿರಿ, ರಾಯಚೂರು, ಕಲಬುರಗಿ, ಬಾಗಲಕೋಟೆಗೆ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

ರಾಜ್ಯದ ಹಲವು ಏಪ್ರಿಲ್ 13ರಿಂದ ಮಳೆ ಆರಂಭವಾಗಲಿದ್ದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಯಾದಗಿರಿ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ವಿಜಯನಗರದಲ್ಲಿ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿಯೂ ಸತತ 37 ಡಿಗ್ರಿ ಉಷ್ಣಾಂಶಕ್ಕೂ ಅಧಿಕ ತಾಪಮಾನ ದಾಖಲಾಗುತ್ತಿದ್ದು ಜನರು ಹೈರಾಣಾಗಿದ್ದಾರೆ. ಈ ವಾರಾಂತ್ಯಕ್ಕೆ ರಾಜ್ಯಾದ್ಯಂತ ಮಳೆ ಸುರಿಯುವ ಲಕ್ಷಣವೂ ಕಂಡು ಬಂದಿದೆ. ಸದ್ಯದ ವಾತಾವರಣದ ಪ್ರಕಾರ ಎಪ್ರಿಲ್‌ 13 ರಿಂದ ಎಪ್ರಿಲ್‌ 15 ರವರೆಗೆ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ತಜ್ಞರು ತಿಳಿಸಿದ್ದಾರೆ. ಇನ್ನೂ ಉತ್ತರ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲೂ ಮಳೆ ನಿರೀಕ್ಷಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+