Karnataka Rain: ಕರ್ನಾಟಕ ಸೇರಿ ಈ ರಾಜ್ಯಗಳಲ್ಲಿ ಭಾರಿ ಮಳೆ: ರಾಜ್ಯದಲ್ಲಿ ಎಲ್ಲೆಲ್ಲಿ ಮಳೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಿಂಗಾರು ಕೃಪೆ ತೋರಿದ್ದು ಉತ್ತಮ ಮಳೆಯಾಗಿದೆ. ಹಲವು ಕಡೆಗಳಲ್ಲಿ ಕೆರೆ - ಕಟ್ಟೆಗಳಲ್ಲಿ ನೀರು ನಿಲ್ಲುವಂತೆ ಮಳೆಯಾಗಿದ್ದು, ರೈತರ ಆತಂಕ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದೆ. 4-5 ದಿನಗಳಿಂದ ಅಬ್ಬರಿಸಿದ್ದ ಮಳೆ ಶುಕ್ರವಾರದಿಂದ ಕಡಿಮೆಯಾಗಲಿದ್ದು, ವಾರಾಂತ್ಯದಲ್ಲಿ ಒಣ ಹವೆ ಇರಲಿದೆ.

ಶುಕ್ರವಾರ ರಾಜ್ಯದ ಹಲವು ಕಡೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನವೆಂಬರ್ 11 ಶನಿವಾರದಿಂದ ರಾಜ್ಯದಲ್ಲಿ ಮಳೆ ಸಂಪೂರ್ಣವಾಗಿ ಕಡಿಮೆಯಾಗಲಿದ್ದು ಒಣ ಹವೆ ಇರಲಿದೆ, ನವೆಂಬರ್ 15ರ ಬಳಿಕ ದಕ್ಷಿಣ ಒಳನಾಡಿನಲ್ಲಿ ಚದುರಿದಂತೆ ಮತ್ತೆ ಮಳೆ ಶುರುವಾಗುವ ಸಾಧ್ಯತೆ ಇದೆ.

Karnataka Rain : Moderate rain Over Many Districts On Nov 10

ಕಳೆದ ನಾಲ್ಕೈದು ದಿನಗಳಿಂದ ರಾಜ್ಯದ ಮೈಸೂರು, ಮಂಡ್ಯ, ಬೆಳಗಾವಿ, ಕಲಬುರಗಿ, ಹಾವೇರಿ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ.

ಇಂದು ಎಲ್ಲೆಲ್ಲಿ ಮಳೆ?

ಕೊಂಕಣ-ಗೋವಾ ಮತ್ತು ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಚದುರಿದ ಮಳೆ ಮತ್ತು ಗುಡುಗು ಸಹಿತ ಮಳೆಯಾಗಬಹುದು. ರಾಜ್ಯದ ದಕ್ಷಿಣ ಕನ್ನಡ, ಚಾಮರಾಜನಗರ ಮತ್ತು ಕೊಡಗು ಜಿಲ್ಲೆಗಳಲ್ಲಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆ ಇದೆ. ತುಮಕೂರು, ಬೆಂಗಳೂರು ನಗರ, ಕೋಲಾರ, ಬೆಂಗಳೂರು ಗ್ರಾಮಾಂತರ, ಮೈಸೂರು, ಶಿವಮೊಗ್ಗ, ದಾವಣಗೆರೆ, ಚಿಕ್ಕಮಗಳೂರು, ಹಾಸನ, ರಾಮನಗರ ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬಳ್ಳಾರಿ, ಯಾದಗಿರಿ, ಹಾವೇರಿ, ಬೆಳಗಾವಿ, ವಿಜಯಪುರ, ಕಲಬುರಗಿ, ಧಾರವಾಡ ಜಿಲ್ಲೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಒಣಹವೆ ಇರಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ಮಾಹಿತಿ ನೀಡಿದೆ.

ಬೆಂಗಳೂರಿನ ಹವಾಮಾನ ವರದಿ?

ಸೋಮವಾರದಿಂದ ಬುಧವಾರದವರೆಗೆ ಬೆಂಗಳೂರು ನಗರದಲ್ಲಿ ಉತ್ತಮ ಮಳೆಯಾಗಿದ್ದರೆ, ಗುರುವಾರ ಮಳೆ ಬಿಡುವು ನೀಡಿತ್ತು. ಶುಕ್ರವಾರ ಬೆಳಗ್ಗೆಯಿಂದಲೇ ನಗರದಲ್ಲಿ ಬಹುತೇಕ ಮೋಡ ಕವಿದ ವಾತಾವರಣ ಇದ್ದು, ಮಧ್ಯಾಹ್ನದ ವೇಳೆಗೆ ಬಿಸಿಲು ಬರುವ ಸಾಧ್ಯತದೆ ಇದೆ. ಸಂಜೆ ವೇಳೆಗೆ ನಗರದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಕಾವೇರಿ ಜಲಾನಯನ ಪ್ರದೇಶದಲ್ಲಿ ಹಿಂಗಾರು ಉತ್ತಮ ಮಳೆಗೆ ಕಾರಣವಾಗಿದ್ದು ಸ್ವಲ್ಪ ಸಮಾಧಾನ ತರಿಸಿದೆ. ಜಲಾಶಯಗಳಿಗೆ ಒಳಹರಿವಿನ ಪ್ರಮಾಣ ಗಣನೀಯವಾಗಿ ಏರಿಕೆಯಾಗದಿದ್ದರೂ, ಅಲ್ಪ ಪ್ರಮಾಣದಲ್ಲಿಯಾದರೂ ಒಳಹರಿವು ನೋಡಲಾಗಿತ್ತು.

ನವೆಂಬರ್ 15ರಿಂದ ದಕ್ಷಿಣ ಒಳನಾಡಿನಲ್ಲಿ ಉತ್ತಮ ಮಳೆಯಾದರೆ ಕೆಆರ್ ಎಸ್, ಕಬಿನಿ ಜಲಾಶಯಗಳಲ್ಲಿ ನೀರಿನ ಒಳಹರಿವು ಹೆಚ್ಚಾಗುವ ಸಾಧ್ಯತೆ ಇದೆ.

ಈ ರಾಜ್ಯಗಳಲ್ಲಿ ಭಾರಿ ಮಳೆ ಸಾಧ್ಯತೆ

ಕೇರಳ - ಮಾಹೆಯಲ್ಲಿ ವ್ಯಾಪಕ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ನಿರೀಕ್ಷೆಯಿದೆ. ಅಂಡಮಾನ್-ನಿಕೋಬಾರ್ ದ್ವೀಪಗಳು, ತಮಿಳುನಾಡು, ಪುದುಚೇರಿ, ಕಾರೈಕಲ್, ಕರ್ನಾಟಕ ಮತ್ತು ಲಕ್ಷ ದ್ವೀಪಗಳಲ್ಲಿ ಕೂಡ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಜಮ್ಮು-ಕಾಶ್ಮೀರ ಮತ್ತು ಲಡಾಖ್‌ನಲ್ಲಿ ಅಲ್ಲಲ್ಲಿ ಮಳೆ / ಹಿಮ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದಲ್ಲಿ ಹಿಮ ಮಳೆಯಾಗುವ ಸಾಧ್ಯತೆ ಇದೆ.

ಅರುಣಾಚಲ ಪ್ರದೇಶ, ಸಿಕ್ಕಿಂ, ಹರಿಯಾಣ, ಚಂಡೀಗಢ, ದೆಹಲಿ, ಮಧ್ಯ ಮಹಾರಾಷ್ಟ್ರ, ಕರಾವಳಿ ಆಂಧ್ರಪ್ರದೇಶ, ಯಾನಂ, ಯಲಸೀಮಾ, ತೆಲಂಗಾಣ ಮತ್ತು ಉತ್ತರ ಆಂತರಿಕ ಕರ್ನಾಟಕದಲ್ಲಿ ಕೂಡ ಮಳೆ ಬೀಳುವ ಸಾಧ್ಯತೆ ಇದೆ. ಶನಿವಾರದ ನಂತರ ಕರ್ನಾಟಕ ಸೇರಿ ಹಲವು ಪ್ರದೇಶಗಳಲ್ಲಿ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆಯಲ್ಲಿ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+