Karnataka rain: ರಾಜ್ಯದ ಈ ಜಿಲ್ಲೆಗಳಲ್ಲಿ ಮಾತ್ರ ಮಳೆ ಮುನ್ಸೂಚನೆ, ಇಲ್ಲಿದೆ ವಿವರ

ಕರ್ನಾಟಕ, ಆಗಸ್ಟ್‌, 22: ಜುಲೈ ತಿಂಗಳಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಆರ್ಭಟಿಸಿ ಅವಾಂತರ ಸೃಷ್ಟಿಸಿದ್ದ ಮಳೆರಾಯ ಆಗಸ್ಟ್‌ ತಿಂಗಳ ಬರುತ್ತಿದ್ದಂತೆಯೇ ಸದ್ದಡಗಿದ್ದ. ಆದರೆ ಆಗಸ್ಟ್‌ 19ರ ನಂತರ ಮತ್ತೆ ಮುಂಗಾರು ಚುರುಕಾಗಿದ್ದು, ಆಗಸ್ಟ್‌ 20ರ ಬಳಿಕ ಅದೇ ಆಡಿದ್ದೇ ಆಟ ಎನ್ನುವ ಹಾಗೆ ಮಳೆರಾಯನ ಆರ್ಭಟ ಸಂಪೂರ್ಣವಾಗಿ ನಿಂತುಹೋಗಿದ್ದು, ಬಹುತೇಕ ಭಾಗಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆದಿದೆ. ಆದರೆ ಹವಾಮಾನ ಇಲಾಖೆಯ ಪ್ರಕಾರ, ಇಂದು ಈ ಭಾಗಗಳಲ್ಲಿ ಅಬ್ಬರದ ಮಳೆಯಾಗಲಿದೆ.

ಈ ಬಾರಿ ರಾಜ್ಯಕ್ಕೆ ಮುಂಗಾರು ಆಗಮನ ಕೊಟ್ಟಿದ್ದೇ ವಿಳಂಬವಾಗಿ. ಜುಲೈ ತಿಂಗಳ ಮಧ್ಯದಲ್ಲಿ ಆರ್ಭಟಿಸಿದ ಮಳೆರಾಯ ಹಲವೆಡೆ ಸಾಕಷ್ಟು ಅನಾಹುತಗಳನ್ನು ಸೃಷ್ಟಿಸಿದ್ದ. ಆದರೆ ಆಗಸ್ಟ್ ತಿಂಗಳಲ್ಲಿ ಒಂದೆರಡು ದಿನ ಮಾತ್ರ ಮಳೆ ಬಂದಹಾಗೆ ಮಾಡಿ ಇದೀಗ ಸಂಪೂರ್ಣವಾಗಿ ನಿಂತು ಹೋಗಿದೆ. ನಿನ್ನೆ (ಆಗಸ್ಟ್‌ 22) ಹಲವೆಡೆ ಮಾತ್ರ ಜಿನುಗು ಮಳೆಯಾದರೆ, ಇನ್ನು ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ವಾತಾರವಣವೇ ಮುಂದುವರೆದಿತ್ತು.

Karnataka Rain: Moderate rainfall forecast in only these districts of state: IMD

ಇಂದು (ಆಗಸ್ಟ್‌ 22) ರಾಜ್ಯದ ಕರಾವಳಿ ಭಾಗದ ಎಲ್ಲಾ ಜಿಲ್ಲೆಗಳಲ್ಲೂ ಅಬ್ಬರದ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನು ದಕ್ಷಿಣ ಹಾಗೂ ಉತ್ತರ ಒಳನಾಡಿನಲ್ಲಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳಿದೆ ಅಂತಲೂ ತಿಳಿಸಿದೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎನ್ನುವ ಮಾಹಿತಿಯನ್ನು ರವಾನಿಸಿದೆ.

ಇನ್ನು ನಿನ್ನೆ (ಆಗಸ್ಟ್‌ 21) ಅಜ್ಜಂಪುರ, ಉಡುಪಿ, ಕಾರ್ಕಳ, ಕೋಟ, ಕೊಲ್ಲೂರು, ಮಂಗಳೂರು, ಮುಲ್ಕಿ, ಬಸವನ ಬಾಗೇವಾಡಿ, ಕ್ಯಾಸಲ್​ರಾಕ್, ದೇವರಹಿಪ್ಪರಗಿ, ಶಿರಾಲಿ, ಬೆಳ್ಳೂರು, ಸೇಡಂ ಸೇರಿದಂತೆ ಹಲವೆಡೆ ಸಾಧಾರಣ ಮಳೆ ಬಿದ್ದಿದೆ ಎಂದು ತಿಳಿದುಬಂದಿದೆ.

ಮತ್ತೊಂದೆಡೆ ಕರಾವಳಿಯ ಬಹುತೇಕ ಕಡೆಗಳಲ್ಲಿ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಮತ್ತು ಉತ್ತರ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಸಾಧಾರಣ ಮಳೆಯಾಗಿದೆ ಎಂದು ತಿಳಿಸಿದೆ.

ಇಂದು ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಇಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯತೆ ಇದೆ.

ಹಾಗೆಯೇ ನಿನ್ನೆ (ಸೋಮವಾರ) ಎಚ್​ಎಎಲ್​ನಲ್ಲಿ 29.6 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ನಗರದಲ್ಲಿ 29.5 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.9 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 30.4 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ತಿಳಿದುಬಂದಿದೆ.

ಒಟ್ಟಿನಲ್ಲಿ ಹವಾಮಾನ ಇಲಾಖೆಯು ಆಗಸ್ಟ್‌ ತಿಂಗಳ ಅಂತ್ಯದಲ್ಲಿ ರಾಜ್ಯದ ಬಹುತೇಕ ಭಾಗಗಳಲ್ಲಿ ಅಬ್ಬರದ ಮಳೆಯಾಗಲಿದೆ ಎನ್ನುವ ಮಾಹಿತಿಯನ್ನು ಈಗಾಗಲೇ ನೀಡಿದೆ. ಈ ಪ್ರಕಾರ ಮಳೆಯಾದರೆ ಜಲಾಶಯಗಳು ಸೇರಿದಂತೆ ನೀರಿನ ಮೂಲಗಳಿಗೆ ಮತ್ತೆ ಜೀವಕಳೆ ಬಂದಂತಾಗುತ್ತದೆ. ಜೊತೆಗೆ ಜನರು, ಅನ್ನದಾತರ ಮುಖದಲ್ಲಿ ಮಂದಹಾಸ ಮೂಡಿದಂತಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+