Rain Alert: ಮಳೆ ಗ್ಯಾರಂಟಿ: ಏಪ್ರಿಲ್‌ 17 ರವರೆಗೆ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ- ಹವಾಮಾನ ಇಲಾಖೆ ಹೇಳಿದ್ದೇನು?

ಬೆಂಗಳೂರು, ಏಪ್ರಿಲ್‌ 11: ರಾಜ್ಯದಲ್ಲಿ ಕಳೆದ ವರ್ಷ ಮಳೆಯಾಗದ ಹಿನ್ನೆಲೆ ಕೆರೆ, ಕಟ್ಟೆ, ಡ್ಯಾಂ ಸೇರಿದಂತೆ ನೀರಿನ ಮೂಲಗಳಾದ ನದಿಗಳು ಬತ್ತಿವೆ. ಈ ವರ್ಷ ಯುಗಾದಿಯ ಬಳಿಕ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗುತ್ತಿದ್ದು, ರಾಜ್ಯದ ಜನತೆ ಸಂತಸವನ್ನ ವ್ಯಕ್ತಪಡಿಸಿದ್ದಾರೆ.

ಹೌದು, ಯುಗಾದಿ ಹಬ್ಬದ ಶುಭ ದಿನವೇ ಕರ್ನಾಟಕದ ವಿವಿಧ ಭಾಗದಲ್ಲಿ ಭಾರಿ ಮಳೆ ಬಿದ್ದಿದೆ. ನೀರಿಗಾಗಿ ಹಾಹಾಕಾರ ಶುರುವಾಗಿದ್ದು, ಎಲ್ಲರೂ ಮಳೆಗಾಗಿ ಪ್ರಾರ್ಥಿಸುತ್ತಿರುವ ಸಂದರ್ಭದಲ್ಲಿ ಧಾರವಾಡ ಜಿಲ್ಲೆಯ ಹುಬ್ಬಳ್ಳಿ ನಗರದಲ್ಲಿ ಧಾರಾಕಾರ ಮಳೆ ಬಂದಿದ್ದು, ಬಿಸಿಲಿನ ಝಳದಿಂದ ಕಂಗೆಟ್ಟಿದ್ದ ಜನರಿಗೆ ವರುಣ ತಂಪೆರೆದಿದ್ದು, ವರ್ಷದ ಮೊದಲ ಮಳೆ ಆಗಮನದಿಂದ ಜನ ಸಂತಸಗೊಂಡಿದ್ದಾರೆ.

Karnataka Rain Most Of The Districts Will Receive Rainfall From Today

ಇಂದಿನಿಂದ ಏಪ್ರಿಲ್​ 17ರವರೆಗೆ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮೂರು ದಿನ ಒಣಹವೆ ಮುಂದುವರೆಯಲಿದ್ದು, ಏಪ್ರಿಲ್​ 15ರಿಂದ ಎರಡು ದಿನಗಳ ಕಾಲ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನೂ ಏಪ್ರಿಲ್‌ 12 ರಂದು ಚಾಮರಾಜನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ವಿಜಯನಗರ, ಬೀದರ್‌, ಕಲಬುರಗಿ, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಯಾದಗಿರಿ, ರಾಯಚೂರು, ಗದಗ, ಕೊಪ್ಪಳ, ಕೊಡಗು, ಮೈಸೂರು, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ದಾವಣಗೆರೆ, ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ ಎಂದು ತಿಳಿದು ಬಂದಿದೆ.

ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಾದ ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲೂ ಮಳೆಯಾಗಲಿದ್ದು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ಶಿವಮೊಗ್ಗ, ತುಮಕೂರು, ರಾಮನಗರ, ವಿಜಯನಗರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇಂದಿನಿಂದ ಉತ್ತರ ಒಳನಾಡಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಕೊಡಗು, ಬೀದರ್‌, ಕಲಬುರಗಿ, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಯಾದಗಿರಿ, ರಾಯಚೂರು, ಗದಗ, ಹಾವೇರಿ, ಕೊಡಗು, ಚಿಕ್ಕಮಗಳೂರು, ಮೈಸೂರು, ಮಂಡ್ಯ ಮತ್ತು ಹಾಸನ ಜಿಲ್ಲೆಗಳ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಏಪ್ರಿಲ್‌ 13, 14 ಎಲ್ಲೆಲ್ಲಿ ಮಳೆ ಸಾಧ್ಯತೆ

ಏಪ್ರಿಲ್‌ 13 ರಂದು ದಕ್ಷಿಣ ಕನ್ನಡ, ಉಡುಪಿ, ಬೀದರ್‌, ಕಲಬುರಗಿ, ಯಾದಗಿರಿ, ರಾಯಚೂರು, ವಿಜಯಪುರ, ಕೊಪ್ಪಳ, ಬಾಗಲಕೋಟೆ, ಗದಗ, ಕೊಡಗು, ಮೈಸೂರು, ತುಮಕೂರು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಚಿತ್ರದುರ್ಗ, ದಾವಣಗೆರೆ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ವಿಜಯನಗರ ಮತ್ತು ಮಂಡ್ಯ ಮಳೆಯಾಗಲಿದ್ದು, ಮಾರ್ಚ್‌ 14ರಂದು ದಕ್ಷಿಣ ಕನ್ನಡ, ಉಡುಪಿ, ಕಲಬುರಗಿ, ರಾಯಚೂರು, ವಿಜಯಪುರ, ಕೊಪ್ಪಳ, ಗದಗ, ಧಾರವಾಡ, ಬೆಳಗಾವಿ, ಕೊಡಗು, ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.

ಇಂದಿನಿಂದ ಒಂದು ವಾರಗಳ ಕಾಲ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗಲಿದ್ದು, ಏಪ್ರಿಲ್‌ 15 ರಂದು ಕೊಡಗು, ಹಾಸನ, ಚಿತ್ರದುರ್ಗ, ಶಿವಮೊಗ್ಗ, ದಾವಣಗೆರೆ ಮತ್ತು ಮೈಸೂರು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಗದಗ, ಧಾರವಾಡ, ಚಿಕ್ಕಮಗಳೂರು, ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+