Karnataka Rain: ರಾಜ್ಯದ 18ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಎರಡು ದಿನಗಳ ಕಾಲ ಅಬ್ಬರಿಸಲಿದ್ದಾನೆ ವರುಣದೇವ?
ಬೆಂಗಳೂರು,ಡಿಸೆಂಬರ್ 16: ಕರ್ನಾಟಕದ ಹಲವು ಜಿಲ್ಲೆಯಲ್ಲಿ ಕಳೆದ ತಿಂಗಳ ಆರಂಭದಿಂದಲೂ ಹಿಂಗಾರು ಶುರುವಾಗಿದೆ. ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆಯಿಂದ ಮುನ್ಸೂಚನೆ ನೀಡಿದೆ.
ಕರ್ನಾಟಕದ 18ಕ್ಕೂ ಅಧಿಕ ಜಿಲ್ಲೆಗಳಲ್ಲಿ ಡಿಸೆಂಬರ್ 17 ರಿಂದ ಎರಡು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯಾದ್ಯಂತ ಈಗಾಗಲೇ ಚಳಿ ಆರಂಭವಾಗಿದೆ ಅಲ್ಲದೆ ಬೆಳಗ್ಗೆಯಿಂದಲೇ ಮೋಡಕವಿದ ವಾತಾವರಣವೂ ಇದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ರಾಯಚೂರು, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯು ಮುಂದಿನ ಎರಡ್ಮೂರು ದಿನಗಳಲ್ಲಿ ಚಂಡಮಾರುತವಾಗಿ ಉಂಟಾಗಲಿದೆಯೋ ಅಥವಾ ಇಲ್ಲವೋ ಎಂಬುದರ ಬಗ್ಗೆ ಇನ್ನೂ ಸ್ಪಷ್ಟತೆ ಇಲ್ಲ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾಸನ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಂಗಳೂರು, ಬೆಂಗಳೂರು.ಗ್ರಾಮಾಂತರ, ಕೋಲಾರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ ಮತ್ತು ಬಳ್ಳಾರಿಯಲ್ಲಿ ಡಿಸೆಂಬರ್ 17 ರಿಂದ 19 ರವರೆಗೆ ಮಳೆ ಸುರಿಯಲಿದೆ ಎಂದು ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಚಳಿಯ ಪ್ರಮಾಣವೂ ಹೆಚ್ಚಾಗಿದೆ. ಹಲವು ಭಾಗಗಳಲ್ಲಿ ಕನಿಷ್ಠ ಉಷ್ಣಾಂಶದಲ್ಲಿ ಕುಸಿದಿದ್ದು, ಉತ್ತರ ಕರ್ನಾಟಕ ಭಾಗದ ಹಲವು ಜಿಲ್ಲೆಗಳಲ್ಲಿ ಚಳಿ ಹೆಚ್ಚಾಗಿದೆ. ಶನಿವಾರ ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಹಗುರವಾಗಿ ಮಳೆಯಾಗುವ ಸಾಧ್ಯತೆಗಳು ಹೆಚ್ಚಾಗಿವೆ. ಮಲೆನಾಡಿನ ಚಿಕ್ಕಮಗಳೂರು, ಹಾಸನ ಭಾಗದಲ್ಲಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾನುವಾರದಂದು ಕರಾವಳಿಯ ಒಂದೆರಡು ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಒಳನಾಡಿನ ಜಿಲ್ಲೆಗಳಾದ ಬೆಂಗಳೂರು, ಮಲೆನಾಡು ಭಾಗದಲ್ಲೂ ಮಳೆಯಾಗಬಹುದು. ಡಿಸೆಂಬರ್ 18 ರಂದು ಗುಡುಗು ಸಹಿತ ಮಳೆಯಾಗುವ ಸೂಚನೆ ಇದೆ. ಮಲೆನಾಡು ಭಾಗದಲ್ಲಿ ಗುಡುಗಿನಿಂದ ಕೂಡಿದ ಮಳೆ ಅಲ್ಲಲ್ಲಿ ಆಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.












Click it and Unblock the Notifications