ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್: ಯಾವ ಜಿಲ್ಲೆಗಳಿಗೆ ಯಾವ ಅಲರ್ಟ್ ನೋಡಿ

ಕರ್ನಾಟಕದಲ್ಲಿ ಉತ್ತಮ ಮಳೆ ಮುಂದುವರೆದಿದೆ, ಉತ್ತರ ಒಳನಾಡಿನ ಜಿಲ್ಲೆಗಳಲ್ಲೂ ಮುಂಗಾರು ಚುರುಕುಗೊಂಡಿದ್ದು ವ್ಯಾಪಕ ಮಳೆಯಾಗುತ್ತಿದೆ. ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯ ಕಾರಣ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಜುಲೈ 27 ಮತ್ತು 28ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬಾಗಲಕೋಟೆ, ಬೆಳಗಾವಿ, ರಾಯಚೂರು, ವಿಜಯಪುರ, ಯಾದಗಿರಿ, ಚಿಕ್ಕಮಗಳೂರು, ಕೊಡಗು ಮತ್ತು ಶಿವಮೊಗ್ಗದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಆರೆಂಜ್ ಅಲರ್ಟ್ ನೀಡಲಾಗಿರುವ ಜಿಲ್ಲೆಗಳಲ್ಲಿ 115.6 ರಿಂದ 204.4 ಮಿಮೀ ವರೆಗೆ ಭಾರಿ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಹೇಳಿದೆ. ಯೆಲ್ಲೋ ಅಲರ್ಟ್ ನೀಡಿದ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ.

karnataka-rain-orange-and-yellow-alerts

ಬೀದರ್ ಮತ್ತು ಕಲಬುರಗಿಯಲ್ಲಿ ಭಾರಿ ಮಳೆಯಾಗುತ್ತಿದೆ. ಮುಂಜಾಗ್ರತಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಕೊಪ್ಪಳ ಮತ್ತು ವಿಜಯನಗರ ಜಿಲ್ಲೆಗಳಲ್ಲಿ ಕೂಡ ಉತ್ತಮ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಲಾಗಿದೆ. ಗುರುವಾರ ಈ ಜಿಲ್ಲೆಗಳಲ್ಲಿ ಕೂಡ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಭಾರಿ ಮಳೆಯಿಂದಾಗಿ ಮಲಪ್ರಭಾ, ಘಟಪ್ರಭಾ, ದೂಧಗಂಗಾ ಮತ್ತು ವೇದಗಂಗಾ ಸೇರಿದಂತೆ ಕೃಷ್ಣಾ ನದಿ ಮತ್ತು ಅದರ ಉಪನದಿಗಳು ಉಕ್ಕಿ ಹರಿಯುತ್ತಿವೆ. ಆಲಮಟ್ಟಿ, ಘಟಪ್ರಭಾ ಮತ್ತು ಮಲಪ್ರಭಾ ಜಲಾಶಯಗಳಿಗೆ ಭಾರಿ ಒಳಹರಿವು ಇದ್ದು, ಭರ್ತಿಯಾಗುವ ಹಂತಕ್ಕೆ ತಲುಪಿವೆ.

ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಮಳೆ ಅಬ್ಬರ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಕರಾವಳಿ ಜಿಲ್ಲೆಗಳ ನದಿಗಳಾದ ನೇತ್ರವಾತಿ, ಕಾಳಿ, ಅಘನಾಶಿನಿ ನದಿಗಳು ಉಕ್ಕಿಹರಿಯುತ್ತಿವೆ.

55 ಕಿಮೀ ವೇಗದಲ್ಲಿ ಬಿರುಗಾಳಿ ಬೀಸುವ ಕಾರಣ ಸಮುದ್ರಕ್ಕೆ ಇಳಿಯದಂತೆ ಮೀನುಗಾರರಿಗೆ ಸೂಚನೆ ನೀಡಲಾಗಿದೆ. ಸಮುದ್ರ ತೀರಕ್ಕೆ ತೆರಳದಂತೆ ಪ್ರವಾಸಿಗರು ಮತ್ತು ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.

ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಸೇತುವೆ ಕುಸಿತ, ರಸ್ತೆಗಳ ಕುಸಿತದಿಂದ ಈ ಭಾಗದ ಹಲವು ಗ್ರಾಮಗಳು ಸಂಪರ್ಕ ಕಳೆದುಕೊಂಡಿವೆ.

ಈ 21 ಜಿಲ್ಲೆಗಳಲ್ಲಿ ವ್ಯಾಪಕ ಮಳೆ

ಬೆಳಗಾವಿ, ಬಾಗಲಕೋಟೆ, ವಿಜಯಪುರ, ಗದಗ, ಹಾವೇರಿ, ಧಾರವಾಡ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ದಾವಣೆಗೆರೆ, ಶಿವಮೊಗ್ಗ, ಕೊಪ್ಪಳ, ರಾಯಚೂರು, ಕಲಬುರಗಿ, ಬೀದರ್, ಯಾದಗಿರಿ, ಹಾಸನ, ಚಿಕ್ಕಮಗಳೂರು, ಕೊಡಗು, ದಕ್ಷಿಣ ಕನ್ನಡ, ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಬೆಂಗಳೂರು ನಗರ, ಬಳ್ಳಾರಿ, ವಿಜಯನಗರ, ಚಾಮರಾಜನಗರ, ಮೈಸೂರು, ಮಂಡ್ಯ, ಚಿತ್ರದುರ್ಗ ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+