Karnataka Rain: ರಾಜ್ಯದ ಈ ಜಿಲ್ಲೆಗಳಲ್ಲೇ ಇಂದು ಹೆಚ್ಚು ಮಳೆ ಬೀಳುವ ಮುನ್ಸೂಚನೆ, ಇಲ್ಲಿದೆ ವಿವರ

ಕರ್ನಾಟಕ, ಜೂನ್‌, 01: ರಾಜ್ಯದ ಹಲವೆಡೆ ಈಗಾಗಲೇ ಮುಂಗಾರು ಪೂರ್ವ ಮಳೆ ಸಾಕಷ್ಟು ಅನಾಹುತಗಳನ್ನು ಸೃಷ್ಟಿಸಿದೆ. ಮುಂಗಾರು ಪೂರ್ವ ಮಳೆಗೇ ಹೀಗೆ ಅನಾಹುತಗಳು ಸಂಭವಿಸಿದರೆ, ಇನ್ನು ಮುಂಗಾರು ಸನಿಹಿತವಾಗಿದ್ದು ಇದರಿಂದ ಇನ್ನೆಷ್ಟು ಹಾನಿ ಸಂಭವಿಸಬಹುದು ಎನ್ನುವ ಚಿಂತೆ ರಾಜ್ಯದ ಜನರದ್ದಾಗಿದೆ. ಹಾಗೆಯೆ ಇಂದು ಕೂಡ ರಾಜ್ಯದ ಹಲವೆಡೆ ಗುಡುಗು, ಬಿರುಗಾಳಿ ಸಹಿತ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಗರುವಾರವೂ (ಮೇ 01) ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಬ್ಬರದ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಗೆ ಸಂದೇಶವನ್ನು ರವಾನಿಸಿದೆ. ಹಾಗಾದರೆ ಯಾವ ಜಿಲ್ಲೆಗಳಲ್ಲಿ ಅತೀ ಹೆಚ್ಚು ಮಳೆಯಾಗಲಿದೆ ಅನ್ನುವ ವಿವರವನ್ನು ಇಲ್ಲಿ ತಿಳಿಯಿರಿ. ಈಗಾಗಲೇ ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮೊನ್ನೆ ಮಳೆರಾಯ ಅಬ್ಬರಿಸಿ ಬೊಬ್ಬೆರೆದು ನಗರದ ಹಲವೆಡೆ ಅನಾಹುತಗಳನ್ನೇ ಸೃಷ್ಟಿಸಿದ್ದ. ಇನ್ನು ನಿನ್ನೆ ಮೋಡ ಕವಿದ ವಾತಾವರಣ ಇದ್ದರೂ ವರುಣದೇವ ಮಾತ್ರ ಧರೆಗಿಳಿದಿರಲಿಲ್ಲ.

Karnataka Rain

ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್​ ಘೋಷಣೆ

ಮತ್ತೊಂದೆಡೆ ಇಂದು ರಾಜ್ಯದ ದಕ್ಷಿಣ ಒಳನಾಡಿನ ಆರು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುವ ಸಾಧ್ಯತೆಯಿದ್ದು, ಈ ಜಿಲ್ಲೆಗಳಿಗೆ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಅನ್ನು ಸಹ​ ಘೋಷಣೆ ಮಾಡಲಾಗಿದೆ. ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದ ಜಿಲ್ಲೆಗಳಲ್ಲಿ ಅಬ್ಬರದ ಮಳೆ ಬೀಳಲಿದೆ. ಆದ್ದರಿಂದ ಈ ಭಾಗಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಸಾಧಾರಣ ಮಳೆ ಪಡೆಯಲಿರುವ ಜಿಲ್ಲೆಗಳು
ಮತ್ತೊಂದೆಡೆ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಭಾರೀ ಮಳೆ ಬೀಳಲಿದೆ ಎಂದು ಸೂಚನೆ ನೀಡಿದ್ದು, ಈ ಭಾಗಗಳಲ್ಲಿ ಯೆಲ್ಲೋ ಅಲರ್ಟ್ ಸಹ ಘೋಷಣೆ ಮಾಡಲಾಗಿದೆ. ಹಾಗೆಯೇ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರಗಿಯಲ್ಲಿ ಸಾಧಾರಣ ಮಳೆ ಬೀಳುವ ಸಾಧ್ಯೆತೆ ಇದೆ ಎಂದು ತಿಳಿಸಿದೆ.

ಅಲ್ಲದೆ ಬಳ್ಳಾರಿ, ಬೆಂಗಳೂರು, ಚಿಕ್ಕಬಳ್ಳಾಪುರ, ದಾವಣಗೆರೆ, ತುಮಕೂರು, ವಿಜಯನಗರ, ಕೋಲಾರ, ಮಂಡ್ಯ, ಮೈಸೂರಿನಲ್ಲಿಯೂ ಕೂಡ ಸಾಧಾರಣ ಮಳೆ ಸುರಿಯಲಿದೆ. ಮತ್ತೊಂದೆಡೆ ಮಾಗಡಿ, ವಿರಾಜಪೇಟೆ, ಚಿಂತಾಮಣಿ, ದೇವನಹಳ್ಳಿ, ಶಿಡ್ಲಘಟ್ಟ, ಚಂದೂರಾಯನಹಳ್ಳಿ, ಬೆಂಗಳೂರು ಎಚ್​ಎಎಲ್​, ಗೋಪಾಲ್​ನಗರ, ಮಧುಗಿರಿ, ಗೋಣಿಕೊಪ್ಪಲ್, ಹರದನಹಳ್ಳಿ, ತೊಂಡೆಭಾವಿ, ಬೈಲಹೊಂಗಲ, ದೊಡ್ಡಬಳ್ಳಾಪುರ, ಹೊಸಕೋಟೆ, ಕುಣಿಗಲ್, ಚಾಮರಾಜನಗರ, ಹೆಸರಘಟ್ಟ, ಬುಕ್ಕಾಪಟ್ಟಣ, ಮಲವಳ್ಳಿ, ಶ್ರವಣಬೆಳಗೊಳ, ಹಾರಂಗಿ, ಗೌರಿಬಿದನೂರಿನಲ್ಲಿ ಮಳೆ ಆಗಲಿದೆ ಎಂದು ತಿಳಿಸಿದೆ.

ಮತ್ತೊಂದೆಡೆ ನೋಡುವುದಾದರೆ ಈ ಬಿಸಿಲಿನ ಧಗೆಯೂ ಕೂಡ ಕೆಲವೆಡೆ ಏರಿಕೆಯಾಗುತ್ತಲೇ ಇದೆ. ಹಲವೆಡೆ ಬೆಳಗ್ಗೆಯಿಂದ ಬಿರುಬಿಸಿಲಿನ ವಾತಾವರಣ ಮುಂದುವರೆದು ಸಂಜೆಯ ವೇಳೆ ಜಿನುಗು ಮಳೆ ಆಗುತ್ತಿದೆ. ಅದೇ ರೀತಿ ಕಲಬುರಗಿಯಲ್ಲಿ 39.2 ಡಿಗ್ರಿ ಸೆಲ್ಸಿಯಸ್​ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲು ಆಗಿದ್ದರೆ, ಇನ್ನು ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣ ಇರಲಿದೆ. ಹಾಗರಯೆ ನಗರದಲ್ಲಿ ಸಂಜೆ ವೇಳೆಗೆ ಅಬ್ಬರದ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

ಸಿಲಿಕಾನ್‌ ಸಿಟಿ ಬೆಂಗಳೂರಿನ ಸಮೀಪ ಇರುವ ಎಚ್​ಎಎಲ್​ನಲ್ಲಿ 31.0 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 18.0 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಬೆಂಗಳೂರು ನಗರದಲ್ಲಿ 31.3 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 19.6 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ, ಕೆಐಎಎಲ್​ನಲ್ಲಿ 32.1 ಡಿಗ್ರಿ ಸೆಲ್ಸಿಯಸ್​ ಗರಿಷ್ಠ ಉಷ್ಣಾಂಶ, 20.1 ಡಿಗ್ರಿ ಸೆಲ್ಸಿಯಸ್​ ಕನಿಷ್ಠ ಉಷ್ಣಾಂಶ ದಾಖಲಿ ಆಗಲಿದೆ ಎನ್ನುವ ಮಾಹಿತಿ ತಿಳಿದುಬಂದಿದೆ.

ಈಗಾಗಲೇ ಭಾರೀ ಮಳೆ ಹಿನ್ನೆಲೆ ಕೊಡಗು, ಮೈಸೂರು, ಶಿವಮೊಗ್ಗ, ಚಿತ್ರದುರ್ಗ, ಹಾಸನ, ಗುಲ್ಬರ್ಗ, ಉಡುಪಿ, ಚಾಮರಾಜನಗರ, ದಕ್ಷಿಣ ಕನ್ನಡ, ಚಿಕ್ಕಮಗಳೂರು ಸೇರಿದಂತೆ ಇತರೆ 10 ಜಿಲ್ಲೆಗಳಲ್ಲಿ ಮುಂಜಾಗ್ರತಾ ಕ್ರಮವಾಗಿ ಯೆಲ್ಲೋ ಅಲರ್ಟ್ ಕೂಡ ಘೋಷಣೆ ಮಾಡಲಾಗಿತ್ತು. ಒಟ್ಟಾರೆಯಾಗಿ ರಾಜ್ಯದಲ್ಲಿ ಮುಂಗಾರು ಆರಂಭಕ್ಕೂ ಮುನ್ನವೇ ಸುರಿದ ಮಳೆಯಿಂದ ಎಷ್ಟೋ ಜನರು ಮನೆ, ಮಠಗಳನ್ನು ಕಳೆದುಕೊಂಡರೆ, ಮತ್ತೊಂದು ಕಡೆ ಕೃಷಿ ಭೂಮಿಯಲ್ಲಿ ಬೆಳೆಗಳನ್ನು ನಾಶವಾಗಿ ಅನ್ನದಾತರು ಕಂಗಾಲಾಗಿದ್ದಾರೆ. ಇದಕ್ಕೆ ಪರಿಹಾರವನ್ನು ಒದಗಿಸುವುದಾಗಿ ಸರ್ಕಾರ ಭರವಸೆಯನ್ನೂ ಕೂಡ ನೀಡಿದೆ. ಹಾಗಾದರೆ ಎಷ್ಟರ ಮಟ್ಟಿಗೆ ರೈತರಗಾದ ಸಮಸ್ಯೆಗಳನ್ನು ಬಗೆಹರಿಸುತ್ತಾರೋ ಅನ್ನುವುದನ್ನು ಕಾದುನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+