Karnataka Rain: ಮುಂದಿನ ಕೆಲವು ದಿನ ಕಾಲ ರಾಜ್ಯದಲ್ಲಿ ಭಾರಿ ಮಳೆ: ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು, ಸೆಪ್ಟೆಂಬರ್ 28: ಮುಂದಿನ ಐದು ದಿನಗಳ ಕಾಲ ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ವ್ಯಾಪಕವಾಗಿ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿಯನ್ನ ನೀಡಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ತುಂತುರು ಮಳೆ ಮತ್ತು ಸೆಪ್ಟೆಂಬರ್ 29 ಮತ್ತು 30 ರಂದು ಗುಡುಗು ಸಹಿತ ಮಳೆಯಾಗಲಿದೆ.
ಕಳೆದ ಎರಡು ವಾರಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಉತ್ತಮ ಮಳೆಯಾಗುತ್ತಿದೆ. ಇಂದು ರಾಜಧಾನಿ ಬೆಂಗಳೂರು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಹಾಗೂ ತುಂತುರು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆಯಾಗಲಿದ್ದು,ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ
ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗುತ್ತಿದೆ. ಇನ್ನು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಇನ್ನು ರಾಜ್ಯದಲ್ಲಿ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದ್ದು, ಕೆಲ ಜಿಲ್ಲೆಯಲ್ಲಿ ಇನ್ನೂ ಸಹ ಮಳೆಯ ಅಬ್ಬರ ಮುಂದುವರೆದಿದೆ. ಇತ್ತ ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಕೂಡ ಮಳೆಯಾಗುವ ಸಾಧ್ಯತೆ ಇದೆ.
ರಾಜ್ಯದ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕವಾಗಿ ಮಳೆಯಾಗಲಿದ್ದು, ಮಲೆನಾಡು ಜಿಲ್ಲೆಗಳಿಗೆ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗಲಿದೆ. ಕಳೆದ ವರ್ಷಕ್ಕಿಂತ ಈ ವರ್ಷ ಕರ್ನಾಟಕದಲ್ಲಿ ಮುಂಗಾರು ಮಳೆ ಉತ್ತಮವಾಗಿದ್ದು, ಈ ನಡುವೆ ಕೆಲವು ದಿನಗಳ ಕಾಲ ಬಿಡುವು ಪಡೆದುಕೊಂಡಿತ್ತು. ಇದೀಗ ಮತ್ತೆ ರಾಜ್ಯದಲ್ಲಿ ಮಳೆ ಜೋರಾಗಲಿದೆ. 17 ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.












Click it and Unblock the Notifications