Karnataka Rains: ಚಂಡಮಾರುತದ ಎಫೆಕ್ಟ್; ರಾಜ್ಯದ ಈ 25 ಜಿಲ್ಲೆಗಳಲ್ಲಿ ಭಾರೀ ಮಳೆ

ಬೆಂಗಳೂರು, ಏಪ್ರಿಲ್‌ 10: ಕರ್ನಾಟಕದಾದ್ಯಂತ ಇಂದಿನಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಸೃಷ್ಟಿಯಾಗಿರುವ ಹಿನ್ನೆಲೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದ್ದು, ಏಪ್ರಿಲ್‌ 17ರ ವರೆಗೆ ಬೆಂಗಳೂರು ಸೇರಿದಂತೆ ಒಟ್ಟು 25 ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕೆಲ ದಿನಗಳಿಂದ ಬಂಗಾಳಕೊಲ್ಲಿಯಲ್ಲಿ ಸೈಕ್ಲೋನ್ ಸೃಷ್ಟಿಯಾಗಿರುವ ಹಿನ್ನೆಲೆ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ. ಮುಂಗಾರು ಪೂರ್ವ ಮಳೆ ಜೋರಾಗಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ಒಂದು ವಾರಕ್ಕೂ ಹೆಚ್ಚು ಕಾಲ ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

Karnataka Rain Rain In More Than 25 Districts Of The State From Today

ಇನ್ನೂ ಬೆಂಗಳೂರು, ಮೈಸೂರು ಸೇರಿ ಕರ್ನಾಟಕದ 25ಕ್ಕೂ ಅಧಿಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಮುಂದಿನ ಐದು ದಿನಗಳಲ್ಲಿ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆ ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ತುಂತುರು ಮಳೆಯಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಣಹವೆಯ ಜೊತೆ ಮೋಡಕವಿದ ವಾತಾವರಣವಿರಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ.

ಈಗಾಗಲೇ ರಾಜ್ಯಾದ್ಯಂತ ಪೂರ್ವಮುಂಗಾರು ಆರಂಭಕ್ಕೂ ಮೊದಲೇ ಮಳೆಯ ಅಬ್ಬರ ಜೋರಾಗಿದ್ದು, ರಾಜ್ಯದ ಹಲವು ಭಾಗಗಳಲ್ಲಿ ಉತ್ತಮ ಮಳೆಯಾಗ್ತಿದೆ. ಗುಡುಗು ಸಹಿತ ಭಾರೀ ಮಳೆಗೆಯಾಗಿ ಕೆಲವೆಡೆ ಬೆಳೆ ಹಾನಿ ಸಂಭವಿಸಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇನ್ನೂ ಹಲವು ದಿನಗಳಿಂದ ಚಂಡಮಾರುತ ಪರಿಣಾಯದಿಂದಾಗಿ ಬಂಗಾಳಕೊಲ್ಲಿಯ ಮಧ್ಯಭಾಗದಲ್ಲಿ ಕಡಿಮೆ ಒತ್ತಡ ರೂಪುಗೊಂಡಿದೆ. ಇದರ ಪ್ರಭಾವದಿಂದಾಗಿ ಬೆಂಗಳೂರು ಸೇರಿದಂತೆ ಹಲವು ಭಾಗದಲ್ಲಿ ಮುಂದಿನ 7 ದಿನಗಳ ಕಾಲ ಭರ್ಜರಿ ಮಳೆ ಇರಲಿದೆ. ಇಂದಿನಿಂದ ಏಪ್ರಿಲ್17ರ ವರೆಗೆ ಪೂರ್ವ ಮುಂಗಾರು ಮಳೆಯ ಆರ್ಭಟ ಜೋರಾಗಲಿದೆ. ಕರಾವಳಿ ಜಿಲ್ಲೆಗಳಾದ ದ.ಕನ್ನಡ, ಉ.ಕನ್ನಡ, ಉಡುಪಿಯಲ್ಲಿ ಮಳೆಯಾಗಲಿದೆ ಎಂದು ಐಎಂಡಿ ತಿಳಿಸಿದೆ.

ಇನ್ನೂ ಕರ್ನಾಟಕ ಸೇರಿದಂತೆ ದೇಶದ ಹಲವು ರಾಜ್ಯಗಳಲ್ಲಿ ಇಂದಿನಿಂದ ಮೂರು ದಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಜಮ್ಮು ಮತ್ತು ಕಾಶ್ಮೀರ ಮತ್ತು ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದ ಕೆಲವು ಸ್ಥಳಗಳಲ್ಲಿ ಹಗುರದಿಂದ ಮಧ್ಯಮ ಮಳೆ ಮತ್ತು ಹಿಮಪಾತವಾಗುವ ಸಾಧ್ಯತೆಯಿದೆ. ಸಿಕ್ಕಿಂ, ಅರುಣಾಚಲ ಪ್ರದೇಶ, ಪಶ್ಚಿಮ ಬಂಗಾಳ, ಈಶಾನ್ಯ ಭಾರತ, ಉತ್ತರ ಬಿಹಾರ, ಅಂಡಮಾನ್-ನಿಕೋಬಾರ್ ದ್ವೀಪಗಳು, ತಮಿಳುನಾಡು, ಕೇರಳ, ಕರ್ನಾಟಕ ಮತ್ತು ಆಂಧ್ರಪ್ರದೇಶದ ಕೆಲವು ಭಾಗಗಳಲ್ಲಿ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+