Karnataka Rain: ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ: ಹವಾಮಾನ ಇಲಾಖೆ ಹೇಳಿದ್ದೇನು?

ಬೆಂಗಳೂರು, ಫೆಬ್ರವರಿ 25: ಕರ್ನಾಟಕದಾದ್ಯಂತ ಒಣಹವೆ ಮುಂದುವರೆದಿದ್ದು, ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ದಿನದಿಂದ ದಿನಕ್ಕೆ ಬಿಸಿಲಿನ ತಾಪ ಹೆಚ್ಚಾಗುತ್ತಿದೆ. ಬಂಗಾಳಕೊಲ್ಲಿಯಲ್ಲಿ ರೂಪುಗೊಂಡಿರುವ ಚಂಡಮಾರುತದ ಪ್ರಭಾವ ಕರ್ನಾಟಕದ ಮೇಲೆ ಹೆಚ್ಚಾಗಿ ಆಗದಿದ್ದರೂ ಕೆಲವೆಡೆ ಸಾಧಾರಣ ಮಳೆಯಾಗಿದೆ.ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರ ತಾಲೂಕಿನ ಗೇರುಸೊಪ್ಪದಲ್ಲಿ ಸೋಮವಾರ ಸಂಜೆ ಸಾಧಾರಣ ಮಳೆಯಾಗಿದೆ.

ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಣ ಹಣೆ ಹೆಚ್ಚಾಗುತ್ತಿದೆ. ಇನ್ನೂ ಮಂಡ್ಯ, ಹಾಸನ , ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಹಾಸನ, ಶಿವಮೊಗ್ಗ ಹಾಗೂ ಉಡುಪಿ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ವಿಶೇಷವಾಗಿ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ವರದಿಯಿಂದ ತಿಳಿದು ಬಂದಿದೆ. ಇನ್ನೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಒಣ ಹವೆ, ಬಿಸಿಲಿನ ವಾತಾವರಣ ಮುಂದುವರಿಯಲಿದೆ. ಬೆಂಗಳೂರಿನಲ್ಲೂ ಬಿಸಿಲಿನ ತಾಪಮಾನ ಹೆಚ್ಚಾಗಿದೆ.

Karnataka Rain Rain in Uttara Kannada district

ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ತಮಿಳು ನಾಡು ಸೇರಿದಂತೆ ನಾಲ್ಕು ರಾಜ್ಯಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಇನ್ನು ತಮಿಳುನಾಡು, ಹಿಮಾಚಲ ಪ್ರದೇಶ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರದಲ್ಲಿಯೂ ಮಳೆಯಾಗಿದೆ. ಇನ್ನೂ ತಮಿಳುನಾಡಿನಲ್ಲಿ ಅಲ್ಲಿಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಫೆಬ್ರವರಿ 28 ಮತ್ತು ಮಾರ್ಚ್ 1ರಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ.

ತಂಜಾವೂರು, ತಿರುವರೂರು, ನಾಗಪಟ್ಟಣಂ, ಮೈಲಾಡುತುರೈ, ಪುದುಕೊಟ್ಟೆ, ರಾಮನಾಥಪುರಂ, ತೂತುಕುಡಿ, ತಿರುನಲ್ವೇಲಿ, ತೆಂಕಶಿ ಮತ್ತು ಕನ್ನಿಯಾಕುಮಾರಿ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಿಮಾಚಲ ಪ್ರದೇಶದಲ್ಲಿಯೂ ಭಾರಿ ಮಳೆ ಮತ್ತು ಹಿಮಪಾತವಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಹೇಳಿದೆ. ಫೆಬ್ರವರಿ 26ರಿಂದ ಎತ್ತರದ ಪ್ರದೇಶಗಳಲ್ಲಿ ಭಾರೀ ಹಿಮಪಾತವಾಗುವ ನಿರೀಕ್ಷೆಯಿದೆ. ಗುಡ್ಡಗಾಡು ಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ತಿಳಿಸಿದೆ.

ಹಿಮಾಚಲ ಪ್ರದೇಶ, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರದಂತೆ, ಈಶಾನ್ಯ ರಾಜ್ಯಗಳಲ್ಲಿಯೂ ಮಳೆಯಾಗುತ್ತಿದೆ. ಇನ್ನೂ ಹವಾಮಾನ ಇಲಾಖೆ ಹೇಳಿರುವಂತೆ, ದೆಹಲಿಯಲ್ಲಿ ಮೋಡ ಕವಿದ ವಾತಾವರಣ ಇದೆ. ಸೂರ್ಯ ಮತ್ತು ನೆರಳಿನ ನಡುವಿನ ಕಣ್ಣಾಮುಚ್ಚಾಲೆ ಆಟ ದಿನವಿಡೀ ಮುಂದುವರಿಯುತ್ತದೆ ಎಂದು ಐಎಂಡಿ ಹೇಳಿದೆ. ಇತ್ತ ಬಿಹಾರ ಸೇರಿದಂತೆ 12 ರಾಜ್ಯಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಪಶ್ಚಿಮ ಬಂಗಾಳ ಮತ್ತು ಒಡಿಶಾದ ಕರಾವಳಿ ಪ್ರದೇಶಗಳಲ್ಲಿ ಭಾರೀ ಮಳೆ ಮತ್ತು ಬಲವಾದ ಬಿರುಗಾಳಿಗಳು ಜನರ ಜೀವನವನ್ನು ಅಸ್ತವ್ಯಸ್ತಗೊಳಿಸಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+