Rain Alert: ರಾಜ್ಯದಲ್ಲಿ ಗುಡುಗು ಸಹಿತ ಭಾರೀ ಮಳೆ: ಬಹುತೇಕ ಜಿಲ್ಲೆಗಳಲ್ಲಿ ವರುಣಾರ್ಭಟ

ಬೆಂಗಳೂರು, ಮಾರ್ಚ್‌ 20: ಸದ್ಯ ರಾಜ್ಯದಲ್ಲಿ ಬಿಸಿಲಿನ ಬೇಗೆಗೆ ಜನರು ತತ್ತರಿಸಿ ಹೋಗಿದ್ದಾರೆ. ಈ ನಡುವೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಹಗುರದಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯಿಂದ ಮಾಹಿತಿ ನೀಡಿದ್ದು, ಕರುನಾಡ ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಈಗಾಗಲೇ ಕರ್ನಾಟಕದಾದ್ಯಂತ ಗರಿಷ್ಠ ತಾಪಮಾನದಲ್ಲಿ ಭಾರಿ ಏರಿಕೆ ಕಂಡುಬಂದಿದೆ. ಅಲ್ಲದೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ವರುಣನ ಆಗಮನವಾಗಿದ್ದು, ಜನರು ಸಂತಸಗೊಂಡಿದ್ದಾರೆ. ಇಂದು ದಕ್ಷಿಣ ಕನ್ನಡ, ಹಾಸನ, ಕೊಡಗು, ಮೈಸೂರು, ಶಿವಮೊಗ್ಗ ಜಿಲ್ಲೆಗಳ ಕೆಲವು ಕಡೆ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದ್ದು, ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

Karnataka Rain Rain Likely in more than 20 districts of Karnataka IMD Predicts

ಮಾ.22 ರಿಂದ 26ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾರ್ಚ್ 22 ರಂದು ದಕ್ಷಿಣ ಕನ್ನಡ, ಚಿಕ್ಕಮಗಳೂರು, ಮೈಸೂರು, ಕೊಡಗು, ಹಾಸನ, ಬೆಂಗಳೂರು ಗ್ರಾಮಾಂತರ,ಬೆಂಗಳೂರು ನಗರ, ಚಾಮರಾಜನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ ಮತ್ತು ರಾಯಚೂರು ಜಿಲ್ಲೆಗಳ ಕೆಲವು ಕಡೆ ಗುಡುಗುಸಹಿತ ಲಘು ಮಳೆಯಾಗಲಿದೆ ಎಂದು ತಿಳಿಸಿದೆ.

ಮಾರ್ಚ್ 23ರಿಂದ ಒಂದು ವಾರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ. ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ,ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ ಎಂದು ಸೂಚನೆ ನೀಡಿದೆ.

ರಾಜ್ಯದ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿಇಂದು ಹಾಗೂ ರಾಜ್ಯದಾದ್ಯಂತ ಮಾರ್ಚ್ 22 ರಂದು ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಗಾಳಿಯ ವೇಗ ಗಂಟೆಗೆ 30-40 ಕಿಮೀ ತಲುಪುವ ಸಾದ್ಯತೆಯಿದ್ದು, ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಲಿದೆ. ಇನ್ನುಳಿದ ದಿನಗಳಲ್ಲಿ ಒಣ ಹವೆಯಿರುವ ನಿರೀಕ್ಷೆಯಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಬಿಸಿಲು ಜಳ ಹೆಚ್ಚಾಗಿರುವ ಸಾಧ್ಯತೆಯಿದೆ. ಹೀಗಾಗಿ ಜನರು ಮುನ್ನೆಚ್ಚರಿಕೆ ವಹಿಸಲು ಸೂಚನೆಯನ್ನ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+