Karnataka Rains: ಕರ್ನಾಟಕದಲ್ಲಿ ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ: 12ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
ಬೆಂಗಳೂರು, ಮೇ 12: ಕರ್ನಾಟಕದಲ್ಲಿ ಜನತೆ ಬಿಸಿಲಿಗೆ ರೋಸಿ ಹೋಗಿದ್ದಾರೆ. ರಾಜ್ಯದಲ್ಲಿ ಕಳೆದ ಒಂದು ವಾರದಿಂದ ದುರ್ಬಲಗೊಂಡಿದ್ದ ಪೂರ್ವ ಮುಂಗಾರು ಚೇತರಿಕೆ ಕಂಡಿದ್ದು, ವಾರಾಂತ್ಯವರೆಗೆ ಮಳೆಯಾಗುವ ಮುನ್ಸೂಚನೆಗಳಿವೆ. ಮುಂದಿನ 3 ಗಂಟೆಗಳಲ್ಲಿ ಚಿತ್ರದುರ್ಗ, ಧಾರವಾಡ, ಕಲಬುರಗಿ, ಕೊಡಗು, ಶಿವಮೊಗ್ಗ, ಉಡುಪಿ, ಯಾದಗಿರಿಯಲ್ಲಿ ಗಾಳಿಯೊಂದಿಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ. ಮಲೆನಾಡು ಜಿಲ್ಲೆಗಳಲ್ಲಿ ವ್ಯಾಪಕವಾಗಿ ಸಾಧಾರಣ ಮಳೆ. ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ತುಂತುರು ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಬೆಂಗಳೂರು ವ್ಯಾಪ್ತಿ ಪ್ರದೇಶಗಳಲ್ಲಿ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕವಾಗಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದಾದ್ಯಂತ ಮುಂದಿನ ಒಂದು ವಾರಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, 12ಕ್ಕೂ ಅಧಿಕ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದು ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
ಕರ್ನಾಟಕದಾದ್ಯಂತ ಮೇ 16ರಿಂದ ಮಳೆಯ ಪ್ರಮಾಣ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಪುತ್ತೂರು, ಶಿವಮೊಗ್ಗದ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ. ಇನ್ನೂ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ನಾಳೆಯಿಂದ ಹೆಚ್ಚಾಗಲಿದೆ. ಆದರೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದ್ದು, ಕೆಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ತಿಳಿಸಿದೆ.
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಾರ ಮುಂದಿನ ನಾಲ್ಕು ದಿನಗಳ ಕಾಲ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ತುಮಕೂರು, ವಿಜಯನಗರ, ಚಿತ್ರದುರ್ಗ, ದಾವಣಗೆರೆ, ಹಾಸನ. ಕೊಡಗು. ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಯಾದಗಿರಿ ಜಿಲ್ಲೆಗಳಲ್ಲಿ ಚದುರಿದಂತೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.
ರಾಜ್ಯದಲ್ಲಿ ವಾತಾವರಣದಲ್ಲಿ ಆಗಿರುವ ಕೆಲವು ಬದಲಾವಣೆಗಳಿಂದಾಗಿ ಭಾಗಶಃ ಮೋಡ ಕವಿದ ವಾತಾವರಣ ಕಂಡು ಬರಲಿದ್ದು, ಇನ್ನೂ ಬೆಂಗಳೂರಿನಲ್ಲಿ ಸಂಜೆ ಹಾಗೂ ರಾತ್ರಿ ವೇಳೆ ಗುಡುಗು, ಮಿಂಚು ಹಾಗೂ ಬಿರುಗಾಳಿ ಸಹಿತ ಮಳೆ ಕೆಲವೆಡೆ ಬೀಳಲಿದೆ. ಇದೇ ಪರಿಸ್ಥಿತಿ ಇಂದಿನಿಂದ ಐದು ದಿನಗಳ ಕಾಲ ಮುಂದುವರೆಯುವ ಮುನ್ಸೂಚನೆಗಳಿವೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications