Karnataka Rain: ಕರ್ನಾಟಕದಾದ್ಯಂತ ಮುಂಗಾರು ದುರ್ಬಲ; ಆದರೆ ಈ ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ
ಬೆಂಗಳೂರು, ಆಗಸ್ಟ್ 25: ರಾಜ್ಯದಲ್ಲಿ ಈ ಬಾರೀ ಆರಂಭದಿಂದಲೇ ಮುಂಗಾರು ದುರ್ಬಲವಾಗಿದ್ದು, ಆಗಸ್ಟ್ ಮೊದಲನಿಂದಲೂ ರಾಜ್ಯದಲ್ಲಿ ಮಳೆಯ ಕೊರತೆ ಉಂಟಾಗಿದ್ದು, ಕರ್ನಾಟಕದಾದ್ಯಂತ ಬಿಸಿಲ ಝಳ ಹೆಚ್ಚಾಗಿದೆ, ಆದರೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಹೌದು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬಾಗಲಕೋಟೆ, ಬೆಳಗಾವಿ, ಗದಗ, ಹಾವೇರಿ, ಕಲಬುರಗಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ದಾವಣಗೆರೆ, ಹಾಸನ,ಮಂಡ್ಯ, ಶಿವಮೊಗ್ಗದಲ್ಲಿ ಮಳೆಯಾಗಲಿದೆ. ಗೋಕರ್ಣ, ಶಿರಾಲಿಯಲ್ಲಿ ಮಳೆಯಾಗಿದೆ.

ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಮುಂದಿನ ವಾರದವರೆಗೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ಸೇರಿ ರಾಜ್ಯದ ಹಲವೆಡೆ ವರುಣ ಆರ್ಭಟಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ಇನ್ನೂ ಆಗಸ್ಟ್ 28ರವರೆಗೆ ಹಲವು ಜಿಲ್ಲೆಗಳಲ್ಲಿ ವರುಣ ಆರ್ಭಟಿಸಲಿದ್ದಾನೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಮುನ್ಸೂಚನೆ ನೀಡಿದೆ.
ರಾಜ್ಯದಲ್ಲಿ ಜೂನ್ ನ ಆರಂಭದಲ್ಲೇ ವರುಣಾನ ಆಗಮನ ತಡವಾಗಿದ್ದು, ಆಗಸ್ಟ್ ಮೊದಲ ವಾರದಲ್ಲೇ ರಾಜ್ಯದಲ್ಲಿ ಮಳೆಯ ಕೊರತೆ ಎದುರಾಗಿದ್ದು,ಜಲಾಶಯಗಳಲ್ಲಿಯೂ ನೀರಿನ ಮಟ್ಟ ಕಡಿಮೆಯಾಗಿದೆ. ಇನ್ನೂ ಕರಾವಳಿಯ ಕೆಲವು ಕಡೆಗಳಲ್ಲಿ ಮತ್ತು ಒಳನಾಡಿನ ಹಲವೆಡೆ ಮಳೆಯಾಗುವ ಸಾಧ್ಯತೆ ಇದ್ದು, ನೈಋತ್ಯ ಮುಂಗಾರು ರಾಜ್ಯದಲ್ಲಿ ದುರ್ಬಲವಾಗಿತ್ತು. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ನಿರ್ಮಾಣವಾಗಲಿದೆ, ಅಲ್ಲದೇ ಸಂಜೆ ವೇಳೆ ಹಗುರ ಮಳೆಯಾಗುವ ನಿರೀಕ್ಷೆ ಇದೆ.
ಇನ್ನೂ ಮಳೆಗಾಲದಲ್ಲಿ ಸರಿಯಾದ ಪ್ರಮಾಣದಲ್ಲಿ ಮಳೆಯಾಗದೇ ಉಷ್ಣಾಂಶ ಮಟ್ಟ ದಿನೇ ದಿನೇ ಹೆಚ್ಚಾಗುತ್ತಿದೆ. ಈಗಾಗಲೇ ಎಚ್ಎಎಲ್ನಲ್ಲಿ 31.5 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 20.2 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 31.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 21.6 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ.












Click it and Unblock the Notifications