Karnataka Rain: ಸೆಪ್ಟೆಂಬರ್‌ 20 ರವರೆಗೂ ರಾಜ್ಯದ ಈ ಭಾಗಗಳಲ್ಲಿ ಮಳೆರಾಯನ ಆರ್ಭಟ ಜೋರು! ಯಾವ ಜಿಲ್ಲೆಯಲ್ಲಿ ಇಲ್ಲಿದೆ ನೋಡಿ

ಬೆಂಗಳೂರು, ಸೆಪ್ಟೆಂಬರ್‌ 14: ರಾಜ್ಯದಲ್ಲಿ ಈ ಬಾರೀ ವಾಡಿಕೆಯಂತೆ ಮಳೆಯಾಗಿಲ್ಲ. ಸೆಪ್ಟೆಂಬರ್‌ ಆರಂಭದಿಂದಲೂ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಸೆಪ್ಟೆಂಬರ್ 20 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಂಡಿದ್ದು ಸೆಪ್ಟೆಂಬರ್ 20ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದಾರೆ.

Karnataka Rain: Rain Very Likely To Occur At Most Places Over Coastal Karnataka Till September 20

ಬುಧವಾರ ಬೆಂಗಳೂರಿನಲ್ಲಿ ಭಾರೀ ಮಳೆಯಾಗಿದ್ದು, ಇಂದು ಸಹ ಬೆಂಗಳೂರಿನಲ್ಲಿ ಭಾರೀ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ರಾಜ್ಯದಲ್ಲಿ ಮಳೆಯಾಗುತ್ತಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.

ಇನ್ನೂ ರಾಜ್ಯದ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಉತ್ತರ ಒಳನಾಡಿನ ಕೆಲವು ಕಡೆಗಳಲ್ಲಿ ಮಳೆಯಾಗಿದೆ. ಅಲ್ಲದೇ ಚನ್ನಪಟ್ಟಣ, ಧರ್ಮಸ್ಥಳ, ಗೇರುಸೊಪ್ಪ, ಸಕಲೇಶಪುರ, ಮದ್ದೂರು, ಮಡಿಕೇರಿ, ಮಂಗಳೂರು, ಮಾಣಿ, ಪುತ್ತೂರು, ಮುಡುಗೋಡ, ಕೊಪ್ಪಳ, ವಿರಾಜಪೇಟೆ, ಲಿಂಗನಮಕ್ಕಿ, ಕಮ್ಮರಡಿಯಲ್ಲಿ ಮಳೆಯಾಗಿದೆ.

ಬೆಂಗಳೂರಿನಲ್ಲಿ ಬಹುತೇಕ ಭಾಗಗಳಲ್ಲಿ ಮೋಡಕವಿದ ವಾತಾವರಣವಿರಲಿದ್ದು, ಕೆಲವು ಕಡೆಗಳಲ್ಲಿ ಹಗುರವಾಗಿ ಮಳೆಯಾಗಲಿದೆ. ಅಲ್ಲದೇ ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ದಕ್ಷಿಣ ಒಳನಾಡಿನ ಕೆಲವು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+