Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಗುಡುಗು, ಮಿಂಚು, ಬಿರುಗಾಳಿ ಸಹಿತ ಮಳೆ ಮುನ್ಸೂಚನೆ
ಬೆಂಗಳೂರು, ಮೇ, 12: ಮೋಚಾ ಚಂಡಮಾರುತ ಹಿನ್ನೆಲೆ ಮೇ 11ರಂದು ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸಿ ಬೊಬ್ಬೆರೆದಿದ್ದಾರೆ. ಕೆಲವೆಡೆ ಸಾಧರಣ ಮಳೆಯಾಗಿದ್ದು, ಇನ್ನು ಕೆಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಿದೆ. ಹಾಗಾದರೆ ಹವಾಮಾನ ಇಲಾಖೆ ವರದಿ ಪ್ರಕಾರ ಇಂದು ರಾಜ್ಯದ ಯಾವ ಜಿಲ್ಲೆಗಳಲ್ಲಿ ಹೆಚ್ಚು ಮಳೆ, ಮತ್ತು ಒಣಹವೆ ಮುಂದುವರೆಯಲಿದೆ ಅನ್ನುವ ಮಾಹಿತಿಯನ್ನು ಇಲ್ಲಿ ತಿಳಿಯಿರಿ.
ರಾಜಧಾನಿ ಬೆಂಗಳೂರಿನಲ್ಲಿ ನಾಲ್ಕು ದಿನಗಳಿಂದ ಬಿಡುವು ಕೊಟ್ಟಿದ್ದ ಮಳೆರಾಯ, ನಿನ್ನೆ ರಾತ್ರಿ ಮತ್ತೆ ಅಬ್ಬರಿಸಿದ್ದಾನೆ. ನಿನ್ನೆ ಬೆಳಗ್ಗೆಯಿಂದಲೂ ಇಲ್ಲಿ ಬಿಸಿಲಿನ ವಾತಾವರಣ ಇತ್ತು, ಆದರೆ ಸಂಜೆಯಾಗುತ್ತಿದ್ದಂತೆ ಮಳೆ ಸುರಿದಿದೆ. ಮೇ 11ರಂದು ರಾಜ್ಯದ ಹಲವು ಭಾಗಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆ ಬಿದ್ದಿದ್ದು, ಕೆಲವೆಡೆ ಅನಾಹುತಗಳೇ ಸಂಭವಿಸಿವೆ. ಹಲವು ಜಿಲ್ಲೆಗಳಲ್ಲಿ ಅಬ್ಬರದ ಮಳೆಗೆ ಬೃಹತ್ ಮರಗಳು ರಸ್ತೆಗೆ ಬಿದ್ದಿದ್ದರೆ, ಇನ್ನು ಕೆಲವೆಡೆ ಮನೆಗಳು ಕುಸಿದ ಘಟನೆಗಳೂ ನಡೆದಿವೆ.

ಮಳೆ ಪಡೆಯಲಿರುವ ಜಿಲ್ಲೆಗಳಿವು
ಹಾಗೆಯೆ ದಕ್ಷಿಣ ಕನ್ನಡ, ಉತ್ತರ ಕನ್ನಡ ಸೇರಿದಂತೆ ಹಲವು ಲ್ಲೆಗಳಲ್ಲಿ ನಿನ್ನೆ ಭಾರಿ ಮಳೆ ಸುರಿದಿದೆ. ಬೆಂಗಳೂರಿನಲ್ಲಿ ತಡರಾತ್ರಿ ಗುಡುಗು ಸಹಿತ ಮಳೆಯಾಗಿದೆ. ಅಲ್ಲದೆ ಇಂದು ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 48 ಗಂಟೆಗಳಲ್ಲಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ನೀಡಿದೆ.
ಅದರಲ್ಲೂ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಸುರಿಯುವ ಸಾಧ್ಯತೆ ಇದೆ. ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲೂ ಮಳೆ ಸುರಿಯುವ ಸಾಧ್ಯೆತ ಇದೆ ಎಂದು ತಿಳಿಸಿದೆ.
ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ ಇನ್ನೂ ಎರಡು ದಿನಗಳ ಕಾಲ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಕೂಡಿದ ಭಾರಿ ಮಳೆ ಆಗಲಿದೆ. ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದ ಎಂದು ಸೂಚನೆ ನೀಡಿದೆ.
ನಿನ್ನೆ ಸಂಜೆ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆಯಾಗಿತ್ತು. ಇಂದು ಕೂಡ ಕರಾವಳಿಯ ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ಮಳೆ ಮುಂದುವರಿಯುವ ಸಾಧ್ಯತೆ ಇದೆ. ಹಾಗೂ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಯಲ್ಲಿ ಸಾಧಾರಣ ಮಳೆ ಸುರಿಯಲಿದೆ ಎಂದು ತಿಳಿಸಿದೆ.
ಇನ್ನು ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಇಂದು ಒಣಹವೆ ಮುಂದುವರಿಯಲಿದ್ದು, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳಲಿದೆ. ಹಾಗೆಯೆ ಬಾಗಲಕೋಟೆ, ಬೀದರ್, ಗದಗ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ಮಾಹಿತಿ ನೀಡಿದೆ.
ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಕೂಡ ಗುಡುಗು, ಮಿಂಚು ಸಹಿತ ಮಳೆ ಆರ್ಭಟಿಸುವ ಸಾಧ್ಯೆತೆ ಇದೆ. ಮತ್ತೊಂದೆಡೆ ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಮತ್ತೊಂದೆಡೆ ಬಳ್ಳಾರಿ, ಚಿತ್ರದುರ್ಗ, ವಿಜಯನಗರ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ ಎಂದು ತಿಳಿಸಿದೆ.
ಬಂಗಾಳಕೊಲ್ಲಿಯಲ್ಲಿ ಮೋಚಾ ಚಂಡಮಾಡುತ ಪರಿಣಾಮ ರಾಜ್ಯದ ವಿವಿಧ ಭಾಗಗಗಳಲ್ಲಿ ಭಾರಿ ಮಳೆ ಬೀಳುವ ನಿರೀಕ್ಷೆಯಿದೆ. ಅದರಲ್ಲೂ ದಕ್ಷಿಣ ಒಳನಾಡು ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚು ಮಳೆಯಾಗುವ ಸಂಭವವಿದೆ ಎಂದು ಎಂದು ಮಾಹಿತಿ ನೀಡಿದೆ.
ಒಟ್ಟಾರೆಯಾಗಿ ನಾಲ್ಕು ದಿನಗಳ ಕಾಲ ರಾಜಧಾನಿ ಬೆಂಗಳೂರಿನಲ್ಲಿ ಮಳೆರಾಯ ಬಿಡುವು ನೀಡಿದ್ದ. ಆದರೆ ನಿನ್ನೆ ತಡರಾತ್ರಿ ನಗರದಲ್ಲಿ ಗುಡುಗು, ಮಿಂಚು ಸಹಿತ ಮಳೆ ಬಿದ್ದಿದೆ. ಹಾಗೆಯೆ ಇಂದು ಬೆಳಗ್ಗೆ ಬಿಸಿಲಿನ ವಾತಾವರಣ ಇದ್ದು, ಮತ್ತೆ ಸಂಜೆ ಮಳೆರಾಯನ ಅಟ್ಟಹಾಸ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.












Click it and Unblock the Notifications