Karnataka rain: ರಾಜ್ಯದ ಈ ಜಿಲ್ಲೆಗಳಲ್ಲಿ ಕಲವೇ ಕ್ಷಣಗಳಲ್ಲಿ ಮಳೆ ಮುನ್ಸೂಚನೆ

ಕರ್ನಾಟಕ, ಆಗಸ್ಟ್‌. 31: ರಾಜ್ಯದಲ್ಲಿ ಜುಲೈ ತಿಂಗಳಿನಲ್ಲಿ ಅಬ್ಬರಿಸಿ ಬೊಬ್ಬರೆದ ಮಳೆರಾಯ ಇದೀಗ ಸದ್ದಡಗಿಬಿಟ್ಟಿದ್ದಾನೆ. ಆಗಾಗ ಕೆಲವೆಡೆ ಮಾತ್ರ ಜಿನುಗು ಮಳೆಯಾಗುವುದನ್ನು ಬಿಟ್ಟರೆ ಇನ್ನುಳಿದ ಬಹುತೇಕ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದೆ. ಮತ್ತೊಂದೆಡೆ ಇಂದು ಸಂಜೆ ವೇಳೆಗೆ ದಾವಣಗೆರೆ ಜಿಲ್ಲೆಯ ಹಲವೆಡೆ ಉತ್ತಮ ಮಳೆಯಾಗಿದೆ. ಆದರೂ ಬೆಳೆಯಲ್ಲ ಒಣಗಿದ ಮೇಲೆ ಹೀಗೆ ಮಳೆಯಾದರೆ ಏನು ಪ್ರಯೋಜನಾ. ಸ್ವಲ್ಪ ಮಟ್ಟಿಗೆ ಧಗೆಯನ್ನು ತಣಿಸಿದಂತಾಗಿದೆ ಅಷ್ಟೇ.

ಇನ್ನು ಸತತ ನಾಲ್ಲು ವಾರಗಳಿಂದ ಬಿಸಿಲಿನ ಬೇಗೆ ಬೆಂದಿರುವ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಕೆಲವೇ ಗಂಟೆಗಳಲ್ಲಿ ಮಳೆರಾಯ ಎಂಟ್ರಿ ಕೊಡುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ. ಅದರಲ್ಲೂ ರಾಜ್ಯದ ರಾಜಧಾನಿ ಬೆಂಗಳೂರು, ಬೆಂಗಳೂರು ಗ್ರಾಮಾಂತರ ಸೇರಿದಂತೆ ರಾಜ್ಯದ ಹಲವೆಡೆ ಕೆಲವೇ ಕ್ಷಣಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

karnataka-rain

ಈಗಾಗಲೇ ಮಳೆಯಿಲ್ಲದೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಬರದ ಛಾಯೆ ಆವರಿಸಿದ್ದು, ಜನರು ಮೋಡದ ಕಡೆ ಮುಖ ಮಾಡಿ ಕುಳಿತುಕೊಳ್ಳುವಂತಹ ವಾತಾವರಣ ನಿರ್ಮಾಣವಾಗಿದೆ. ಮತ್ತೊಂದೆಡೆ ಹವಾಮಾನ ಇಲಾಖೆ ಇನ್ನು ಕೆಲವೇ ಕ್ಷಣಗಳಲ್ಲಿ ಮಾಳೆಯಾಗುವ ಮಿನ್ಸೂಚನೆ ನೀಡಿದೆ. ಈಗಾಗಲೇ ಸಂಜೆ 6:30ರ ವೇಳೆಗೆ ದಾವಣಗೆರೆ ಜಿಲ್ಲೆಯ ಹಲವೆಡೆ ಮಳೆಯಾಗಿದೆ. ಅದೇ ರೀತಿ ರಾಜ್ಯದ ಹಲವು ಜಿಲ್ಲೆಗಳಲ್ಲೂ ಮಳೆಯಾಗುವ ನಿರೀಕ್ಷೆಯಿದೆ.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಗದಗ, ಕೋಲಾರ, ಕೊಪ್ಪಳ, ರಾಯಚೂರು, ವಿಜಯನಗರ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆ ಸುರಿಯುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆಯಾಗಲೂಬಹುದು. ಉತ್ತರ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆ ಇದೆ.

ಮಳೆ ಕೊರತೆ ಎದುರಿಸುತ್ತಿರುವ ಜಿಲ್ಲೆಗಳು

ಮತ್ತೊಂದೆಡೆ ಆಗಸ್ಟ್‌ ತಿಂಗಳ ಆರಂಭದಿಂದ ಇಲ್ಲಿಯವರೆಗೂ ಮಳೆಯಿಲ್ಲದೇ ಬರೀ ಬಿಸಿಲಿನ ವಾತಾರಣವೇ ಮುಂದುವರೆದ ಪರಿಣಾಮ ರೈತರು ಬೆಳೆದ ಬೆಳೆಗಳೆಲ್ಲ ನೆಲಕಚ್ಚುತ್ತಿವೆ. ಅಲ್ಲದೆ ಆಗಸ್ಟ್‌ ತಿಂಗಳಿನಲ್ಲಿ ವಾಡಿಕೆಗಿಂತಲೂ ಅಧಿಕ ಮಲೆ ಕೊರತೆ ಎದುರಿಸಿರುವ ಜಿಲ್ಲೆಗಳ ವಿವರವನ್ನು ಅಂಅಂಶಗಳ ಸಹಿತ ಇಲ್ಲಿ ನೀಡಲಾಗಿದೆ ಗಮನಿಸಿ.

ಎಷ್ಟು ಪ್ರಮಾಣದಲ್ಲಿ ಮಳೆ ಕೊರತೆ?

1. ಬೀದರ್‌ ಜಿಲ್ಲೆಯಲ್ಲಿ ಆಗಸ್ಟ್‌ ತಿಂಗಳಿನಲ್ಲಿ 185 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ 21 ಮಿ.ಮೀ. ಮಾತ್ರ ಮಳೆಯಾಗಿದ್ದು, ಶೇಕಡಾ 89ರಷ್ಟು ಮಳೆ ಕೊರತೆಯಾಗಿದೆ.

2. ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 106 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ 16 ಮಿ.ಮೀ. ಮಾತ್ರ ಮಳೆಯಾಗಿದ್ದು, ಶೇಕಡಾ 85ರಷ್ಟು ಮಳೆ ಕೊರತೆಯಾಗಿದೆ.

3. ಚಿತ್ರದುರ್ಗ ಜಿಲ್ಲೆಯಲ್ಲಿ 65 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ 11 ಮಿ.ಮೀ. ಮಾತ್ರ ಮಳೆಯಾಗಿದ್ದು, ಶೇಕಡಾ 83ರಷ್ಟು ಮಳೆ ಕೊರತೆಯಾಗಿದೆ.

4. ಕೊಡಗು ಜಿಲ್ಲೆಯಲ್ಲಿ 560 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ 100 ಮಿ.ಮೀ. ಮಾತ್ರ ಮಳೆಯಾಗಿದ್ದು, ಶೇಕಡಾ 82ರಷ್ಟು ಮಳೆ ಕೊರತೆಯಾಗಿದೆ.

5. ಶಿವಮೊಗ್ಗ ಜಿಲ್ಲೆಯಲ್ಲಿ 545 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ 106 ಮಿ.ಮೀ. ಮಾತ್ರ ಮಳೆಯಾಗಿದ್ದು, ಶೇಕಡಾ 81ರಷ್ಟು ಮಳೆ ಕೊರತೆಯಾಗಿದೆ.

6. ಬೆಂಗಳೂರು ನಗರ 120 ಮಿ.ಮೀ. ವಾಡಿಕೆ ಮಳೆಯಾಗಬೇಕಿತ್ತು. ಆದರೆ 24 ಮಿ.ಮೀ. ಮಾತ್ರ ಮಳೆಯಾಗಿದ್ದು, ಶೇಕಡಾ 80ರಷ್ಟು ಮಳೆ ಕೊರತೆಯಾಗಿದೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+