Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಜೂನ್ 7ರವರೆಗೂ ಭಾರೀ ಮಳೆ ಮುನ್ಸೂಚನೆ
ಕರ್ನಾಟಕ, ಜೂನ್, 04: ಈಗಾಗಲೇ ಮುಂಗಾರು ಪೂರ್ವ ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಪಾ ಹಾನಿಗಳು ಸಂಭವಿಸಿವೆ. ಮತ್ತೊಂದೆಡೆ ಇದೀಗ ಮುಂಗಾರು ಮಳೆ ಪ್ರವೇಶ ಮಾಡಲಿದ್ದು, ಇದರಿಂದ ಇನ್ನೆಷ್ಟು ಅನಾಹುತಗಳು ಆಗುತ್ತವೆಯೋ ಎನ್ನುವ ಚಿಂತೆ ರಾಜ್ಯದ ಜನರದ್ದಾಗಿದೆ. ಹಾಗೆಯೆ ಇಂದಿನಿಂದ ಜೂನ್ 7ರವರೆಗೆ ಮಳೆ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಾಗಾದರೆ ಯಾವ ಜಿಲ್ಲೆಗಳಲ್ಲಿ ಎಷ್ಟು ಮಳೆಯಾಗಲಿಗೆ ಎಂದು ಇಲ್ಲಿ ತಿಳಿಯಿರಿ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ಮೂರು ದಿನಗಳಿಂದ ಮಳೆರಾಯ ಬಿಡುವು ನೀಡಿದ್ದಾನೆ. ಅಲ್ಲದೆ ನಗರದಲ್ಲಿ ಬೆಳಗ್ಗೆಯಿಂದ ಮಧ್ಯಾಹ್ನದವರೆಗೆ ಮೋಡ ಮುಚ್ಚಿದ ವಾತಾವರಣ ಇದ್ದು, ಬಳಿಕ ಸಂಜೆಯವರೆಗೆ ಬಿಸಿನ ಧಗೆ ಹೆಚ್ಚಾಗುತ್ತು. ಇನ್ನು ಸಂಜೆ ಸಮಯದಲ್ಲಿ ಸ್ವಲ್ಪ ಗಡುಗು ಸಹಿತ ಹಗುರವಾಗಿ ಜಿನುಗು ಮಳೆ ಬೀಳುತ್ತಿತ್ತು. ಆದರೆ ಇಂದಿನಿಂದ ಜೂನ್ 7ರವರೆಗೂ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ಜಿಲ್ಲೆಗಳಲ್ಲಿ ಜೂನ್ 7ರ ವರೆಗೆ ಮಳೆ
ಇನ್ನು ರಾಜ್ಯಕ್ಕೆ ಮುಂಗಾರು ಪ್ರವೇಶಕ್ಕೆ ಕ್ಷಣಗಣನೆ ಆರಂಭವಾಗಿದೆ. ಈಗಾಗಲೇ ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಮೋಡಕವಿದ ವಾತಾವರಣ ನಿರ್ಮಾಣ ಆಗಿದ್ದು, ಭಾರೀ ಮಳೆ ಸುರಿಯುವ ಮುನ್ಸೂಚನೆಯೂ ಎದ್ದು ಕಾಣುತ್ತಿದೆ. ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಇಂದಿನಿಂದ ಜೂನ್ 7 ರವರೆಗೆ ಭಾರೀ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.
ಮತ್ತೊಂದೆಡೆ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು,ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲೂ ಕೂಡ ಸಾಧಾರಣ ಮಳೆ ಸುರಿಯುವ ಸಂಭವ ಇದೆ ಎಂದಿ ಹವಾಮಾನ ಇಲಾಖೆ ಮಾಹಿತಿ ರವಾನಿಸಿದೆ.
ಈಗಾಗಲೇ ಪೊನ್ನಂಪೇಟೆಯಲ್ಲಿ ಮಳೆ ಆಗಿದ್ದು, ಹಾಗೆಯೆ ರಾಜ್ಯಾದ್ಯಂತ ಗರಿಷ್ಠ ಉಷ್ಣಾಂಶವು ಒಂದೆರಡು ಕಡೆಗಳಲ್ಲಿ ಸಾಮಾನ್ಯಕ್ಕಿಂತ 2ರಿಂದ 3 ಡಿಗ್ರಿ ಸೆಲ್ಸಿಯಸ್ನಷ್ಟು ಹೆಚ್ಚಾಗುವ ಸಾಧ್ಯತೆಯಿದೆ. ಅಲ್ಲದೆ ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಭಾಗದಲ್ಲಿ ಬಿರುಗಾಳಿಯು ಗಂಟೆಗೆ 40ರಿಂದ 50 ಕಿಲೋ ಮೀಟರ್ ವೇಗದಲ್ಲಿ ಬೀಸುವ ಸಾಧ್ಯತೆಯಿದೆ. ಇನ್ನು ಕಲಬುರಗಿಯಲ್ಲಿ 42.6 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ದಾಖಲಾಗಿದೆ ಎನ್ನುವ ಮಾಹಿತಿ ಇದೆ.
ಬೆಂಗಳೂರಿನಲ್ಲಿ ಮೋದಕವಿದ ವಾತಾವರಣ ನಿರ್ಮಾಣ ಆಗಿದೆ. ಮತ್ತೊಂದೆಡೆ ಈಗಾಗಲೇ ಜೂನ್ 3ರಂದು ಎಚ್ಎಎಲ್ನಲ್ಲಿ 32.0 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 22.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ನಗರದಲ್ಲಿ 32.4 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ, 23.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ, ಕೆಐಎಎಲ್ನಲ್ಲಿ 32.6 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲು ಆಗಿದೆ. ಹಾಗೆಯೆ ಇಂದು ಈ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
ಹಾಗೆಯೆ ಹವಾಮಾನದಲ್ಲಿ ವೈಪರಿತ್ಯಗಳು ಉಂಟಾದರೆ ಮತ್ತೆ ಕೆಲವು ದಿನಗಳ ಮುಂಗಾರು ವಿಳಂಬ ಆಗಲುಬಹುದು ಎಂದು ಅಂದಾಜು ಮಾಡಲಾಗಿದೆ. ಪ್ರತಿಭಾರಿಯೂ ವಾಡಿಕೆಯಂತೆ ನೈಋತ್ಯ ಮುಂಗಾರು ಮಾರುತುಗಳು ಜೂನ್ 1ರಿಂದ ಕೇರಳ ಪ್ರವೇಶ ಮಾಡುತ್ತಿತ್ತು. ಈ ಮೂಲಕ ಕೆಲವು ದಿನಗಳಲ್ಲಿ ಕರ್ನಾಟಕವನ್ನೂ ಕೂಡ ಪ್ರವೇಶ ಮಾಡುತ್ತಿತ್ತು. ಆದರೆ ಈ ಬಾರಿ ನಾಲ್ಕು ದಿನ ವಿಳಂಬ ಎನ್ನುವಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.
2022 ಮೇ 29ರಂದು ಮುಂಗಾರು ಆರಂಭ ಆಗಿತ್ತು. ಕಳೆದ 18 ವರ್ಷಗಳಲ್ಲಿ ಕೇರಳದ ಮೇಲೆ ನೈಋತ್ಯ ಮುಂಗಾರು ಆರಂಭ ಆಗುವ ದಿನಾಂಕದ ಕಾರ್ಯಾಚರಣೆಯ ಮುನ್ಸೂಚನೆಗಳು 2015 ಅನ್ನು ಹೊರತುಪಡಿಸಿ ಸರಿಯಾಗಿವೆ ಎಂದು ಭಾರತ ಹವಾಮಾನ ಇಲಾಖೆ ತಿಳಿಸಿದೆ.
ಇನ್ನು ಕರಾವಳಿ ಜಿಲ್ಲೆಗಳಲ್ಲಿ ಇಂದಿನಿಂದ ಸಾಧಾರಣ ಮಳೆ ಆಗಲಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಕೂಡ ಭಾನುವಾರ ಸಾಧಾರಣ ಮಳೆ ಆಗಲಿದೆ. ಹಾಗೆಯೇ ಜೂನ್5 ರಿಂದ ಜೂನ್7ರವರೆಗೆ ಈ ಭಾಗಗಲ್ಲಿ ವ್ಯಾಪಕ ಮಳೆ ಸುರಿಯಲಿದೆ. ಇನ್ನು ಉತ್ತರ ಒಳನಾಡಿನಲ್ಲಿ 5 ದಿನ ಸಾಧಾರಣ ಮಳೆ ಬೀಳಲಿದೆ ಎಂದು ತಿಳಿಸಿದೆ.
ಒಟ್ಟಾರೆಯಾಗಿ ಹೇಳುವುದಾದರೆ ಈಗಾಗಲೇ ಮುಂಗಾರು ಪೂರ್ವ ಮಳೆ ಅಬ್ಬರಿಂದ ರಾಜ್ಯದ ಹಲವೆಡೆ ಸಾಕಷ್ಟು ಅನಾಹುತಗಳು ಸಂಭವಿಸಿವೆ. ಹಾಗೆಯೆ ಮತ್ತೊಂದೆಡೆ ಈ ಬಾರಿಯ ಮುಂಗಾರು ಮಳೆಯ ವಿಕೋಪಗಳನ್ನು ಎದುರಿಸಲು ಜಿಲ್ಲಾವಾರು ಅಧಿಕಾರಿಗಳು ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದ್ದಾರೆ. ಹಾಗಾದರೆ ಅಧಿಕಾರಿಗಳು ಯಾವ ರೀತಿ ಪ್ರಕೃತಿ ವಿಕೋಪಗಳನ್ನು ನಿಭಾಯಿಸುತ್ತಾರೋ ಎಂದು ಕಾದುನೋಡಬೇಕಿದೆ.












Click it and Unblock the Notifications