Karnataka Rains: ಕರ್ನಾಟಕದ ಈ 5 ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ; ಇಲ್ಲಿದೆ ಸಂಪೂರ್ಣ ಮಾಹಿತಿ

ಬೆಂಗಳೂರು, ಜುಲೈ 27: ದೇಶದ ಹಲವೆಡೆ ಅತಿ ಹೆಚ್ಚು ಮಳೆಯಾಗುತ್ತಿದೆ. ಕರ್ನಾಟಕದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹವಾಮಾನ ಇಲಾಖೆ ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಐದು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಕರಾವಳಿ ಹಾಗೂ ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಐದು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಇಂದು ಜೋರಾದ ಗಾಳಿಯೊಂದಿಗೆ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಜುಲೈ 28 ರಿಂದ 31 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಉತ್ತರ ಒಳನಾಡು ಜಿಲ್ಲೆಗಳಿಗೆ, ಜುಲೈ 27 ರಿಂದ 31 ರವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

Karnataka Rain Rainfall Forecast Red Alert In 5 Districts In Karnataka

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಹಾಸನ, ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದೆ. ಭಾರಿ ಗಾಳಿ ಮಳೆ ಹಿನ್ನೆಲೆಯಲ್ಲಿ ಸಕಲೇಶಪುರ ತಾಲೂಕಿನ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಇನ್ನು ಬೆಂಗಳೂರಿನಲ್ಲಿ ಕೂಡ ಮೋಡ ಮುಸುಕಿದ ವಾತಾವರಣ ಇದ್ದು, ಮಧ್ಯಾಹ್ನ ವೇಳೆಗೆ ಮಳೆಯಾಗುವ ಸಾಧ್ಯತೆ ಇದೆ. ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ, ಹೀಗಾಗಿ ಈ ಜಿಲ್ಲೆಗೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಜೊತೆಗೆ ಜನರು ಎಚ್ಚರದಿಂದ ಇರಬೇಕು ಎಂದು ತಿಳಿಸಿದೆ.

ಶುಕ್ರವಾರ ಎಲ್ಲೆಲ್ಲಿ ಎಷ್ಟೆಷ್ಟು ಮಳೆಯಾಗಿದೆ?

* ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ- 18 ಸೆಂ.ಮೀ.

* ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ- 16 ಸೆಂ.ಮೀ.

* ಉತ್ತರ ಕನ್ನಡ ಜಿಲ್ಲೆಯ ಕ್ಯಾಸಲ್‌ರಾಕ್‌ನಲ್ಲಿ- 15 ಸೆಂ.ಮೀ.

* ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ- 14 ಸೆಂ.ಮೀ.

* ಕೊಡಗು ಜಿಲ್ಲೆಯ ಸೋಮವಾರಪೇಟೆಯಲ್ಲಿ- 12 ಸೆಂ. ಮೀ.

* ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಕಳಸದಲ್ಲಿ ತಲಾ- 11 ಸೆಂ.ಮೀ. ಮಳೆಯಾಗಿದೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+