Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮಳೆರಾಯನ ಆರ್ಭಟ; ಹವಾಮಾನ ಇಲಾಖೆ ಕೊಟ್ಟ ಎಚ್ಚರಿಕೆ ಏನು?
ಬೆಂಗಳೂರು, ಜುಲೈ 20: ಕರ್ನಾಟಕದ ಕರಾವಳಿ ಹಾಗೂ ಮಲೆನಾಡು ಭಾಗದಲ್ಲಿ ಭರ್ಜರಿ ಮಳೆಯಿಂದಾಗಿ ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿ ಹೋಗಿವೆ. ಬಿಟ್ಟು ಬಿಡದೇ ಹಲವು ನದಿ ಜಲಾಶಯಗಳು ಉಕ್ಕಿ ಹರಿಯುತ್ತಿದ್ದು, ರಾಜ್ಯದಲ್ಲಿ ಮಳೆಯ ಅರ್ಭಟ ಜುಲೈ 24ರವರೆಗೂ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮುಂದಿನ 5 ದಿನಗಳ ರಾಜ್ಯದ ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಅತ್ಯಧಿಕ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಿಗೆ ನಾಳೆ (ಜುಲೈ 21) ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಿಗೆ ಜುಲೈ 22 ರಿಂದ 24 ರವರೆಗೆ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಜುಲೈ 21 ಮತ್ತು 22 ರಂದು ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡು ಜಿಲ್ಲೆಗಳಿಗೆ, ಜುಲೈ 20 ರಿಂದ 22 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ಮುಂಗಾರು ಮಳೆ ವ್ಯಾಪಕವಾಗಿದ್ದು, ಇಂದು (ಜುಲೈ 20) ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಭಾರಿ ಮಳೆ ಸುರಿಯುತ್ತಿರುವ ಹಾಸನದಲ್ಲಿ ಆರೆಂಜ್ ಅಲರ್ಟ್ ಅನ್ನು ಹವಾಮಾನ ಇಲಾಖೆ ಘೋಷಿಸಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಇಂದಿನಿಂದ ಮೂರು ದಿನ ಯೆಲ್ಲೋ ಅಲರ್ಟ್ ಘೋಷಣೆಯಾಗಿದೆ. ಈ ಮೂರು ದಿನಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಅದಾಗಿ ಎರಡು ದಿನ ಸಾಧಾರಣ ಮಳೆ ಬೀಳಬಹುದು ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.
ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರಿ ಮಳೆ ಮುಂದುವರೆದಿದ್ದು, ಜುಲೈ 24ರವರೆಗೆ ಇದೇ ಪರಿಸ್ಥಿತಿ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗಕ್ಕೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ಬೆಳಗಾವಿಗೆ ಆರೆಂಜ್ ಅಲರ್ಟ್ ಇದೆ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಉತ್ತರ ಒಳನಾಡು ಜಿಲ್ಲೆಗಳಿಗೆ, ಜುಲೈ 20 ರಿಂದ 22 ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹೇಳಿದ್ದು, ಶಿರಾಲಿ, ಬೆಳ್ತಂಗಡಿ, ಕುಂದಾಪುರ, ಬನವಾಸಿ, ಸಿದ್ದಾಪುರ, ಜಯಪುರ, ಸೋಮವಾರಪೇಟೆ, ಕಾರವಾರ, ಮುಲ್ಕಿ, ಉಪ್ಪಿನಂಗಡಿ, ಸುಳ್ಯ, ಪುತ್ತೂರು, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.
-
ಏಪ್ರಿಲ್ 14ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಬನಶಂಕರಿ ಜಾತ್ರೆಯ ಭಕ್ತರಿಗೆ ಶುಭ ಸುದ್ದಿ: ಎಕ್ಸ್ಪ್ರೆಸ್ ರೈಲುಗಳ ನಿಲುಗಡೆಗೆ ಆದೇಶ -
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ












Click it and Unblock the Notifications