Karnataka Rain: ಬೆಳಗಾವಿ ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಆರಂಭ

ರಾಜ್ಯಾದ್ಯಂತ ಶೀಘ್ರದಲ್ಲೇ ಮಳೆ ಆರಂಭವಾಗುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿವೆ. ಶುಕ್ರವಾರ ಬೆಳ್ಳಂಬೆಳಗ್ಗೆ ಕರಾವಳಿ ಭಾಗದಲ್ಲಿ ಉತ್ತಮ ಮಳೆಯಾಗಿದ್ದು, ಸಂಜೆ ಕುಂದಾನಗರಿ ಬೆಳಗಾವಿಯಲ್ಲಿ ಮಳೆ ದರ್ಶನ ನೀಡಿದೆ. ಗುರುವಾರ ಶೃಂಗೇರಿ ಸೇರಿದಂತೆ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿತ್ತು.

ಶುಕ್ರವಾರ ಬೆಳಗ್ಗೆಯೇ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೊಟೆಕರ್ ಪ್ರದೇಶದಲ್ಲಿ 100 ಮಿಮೀ ಮಳೆಯಾಗಿದೆ. ಮೊದಲ ಬಾರಿಗೆ ರಾಜ್ಯದಲ್ಲಿ ಈ ವರ್ಷ 100 ಮಿಮೀ ಮಳೆ ಸುರಿದಿದೆ, ಅದೂ ಕೂಡ ಮಳೆಗಾಲಕ್ಕೆ ಮುನ್ನವೇ!

Karnataka Rain Rainfall Reported in Belgavi City and Across Various Regions of Karnataka

ದಕ್ಷಿಣ ಕನ್ನಡ ಜಿಲ್ಲೆಯ ತಲಪಾಡಿ 53 ಮಿಮೀ, ಕಿಣ್ಯಾ 42.5 ಮಿಮೀ ಮಳೆಯಾಗಿದೆ. ಉಡುಪಿ ಜಿಲ್ಲೆಯ ಮಲ್ಲಾರುವಿನಲ್ಲಿ 54.5 ಮಿಮೀ, ಉಳಿಯರಗೋಳಿಯಲ್ಲಿ 22 ಮಿ.ಮೀ ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರದ ವರದಿಯಲ್ಲಿ ತಿಳಿಸಿದೆ.

ಬೆಳಗಾವಿಯಲ್ಲಿ ಮಳೆ ಆರಂಭ!

ಸಂಜೆ ವೇಳೆಗೆ ಬೆಳಗಾವಿ ಜಿಲ್ಲೆಯ ಹಲವು ಕಡೆಗಳಲ್ಲಿ ಮಳೆ ಆರಂಭವಾಗಿದೆ. ಬೆಳಗಾವಿ ನಗರದಲ್ಲಿ ಗುಡುಗು ಸಹಿತ ಮಳೆಯಾಗುತ್ತಿದೆ. ರಾತ್ರಿ ಮಳೆ ಮತ್ತಷ್ಟು ಜೋರಾಗುವ ಸಾಧ್ಯತೆ ಕೂಡ ಇದೆ. ಭೂತರಾಮನಹಟ್ಟಿ, ಬೆಳಗುಂಡಿ, ಶಿನೋಳಿ ಸೇರಿದಂತೆ ಹಲುವ ಕಡೆಗಳಲ್ಲಿ ಸಂಜೆ ಮಳೆಯಾಗಿದೆ.

ರಾಜ್ಯದ ಹಲವು ಕಡೆ ಮಳೆ ಸಾಧ್ಯತೆ

ಬೆಳಗಾವಿ ಹೊರತು ಪಡಿಸಿ ಧಾರವಾಡ ಜಿಲ್ಲೆಯಲ್ಲಿ ಮೋಡ ಕವಿದ ವಾತಾವರಣ ಇದ್ದು ರಾತ್ರಿ ಮಳೆಯಾಗುವ ಸಾಧ್ಯತೆ ಇದೆ. ಚಿಕ್ಕಮಗಳೂರು ಜಿಲ್ಲೆಯ ಕುದುರೆಮುಖ ಪ್ರದೇಶದಲ್ಲಿ ಕೂಡ ಮೋಡ ಕವಿದ ವಾತಾವರಣ ಇದ್ದು, ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕೊಡಗು ಜಿಲ್ಲೆಯ ಭಾಗಮಂಡಲದಲ್ಲಿ ಕೂಡ ಮೋಡ ಕವಿದಂತಾಗಿದ್ದು ಮಳೆಯ ಮುನ್ಸೂಚನೆ ಇದೆ.

ಬೆಂಗಳೂರಿನಲ್ಲಿ ಮಳೆ ಯಾವಾಗ?

ರಾಜ್ಯದಲ್ಲಿ ಅಲ್ಲಲ್ಲಿ ಮಳೆ ದರ್ಶನ ಕೊಡುತ್ತಿದ್ದರೂ ಬೆಂಗಳೂರಿನಲ್ಲಿ ಯಾವಾಗ ಬರುತ್ತದೆ ಎನ್ನುವ ಕುತೂಹಲ ಇದೆ. ಶುಕ್ರವಾರ ಬೆಳಗ್ಗೆಯಿಂದಲೇ ನಗರದ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣ ಇದ್ದು, ಮಾರ್ಚ್ ಅಂತ್ಯದ ವೇಳೆಗೆ ನಗರದಲ್ಲಿ ಸಾಧಾರಣ ಮಳೆಯ ಸಾಧ್ಯತೆ ಇದೆ.

ಏಪ್ರಿಲ್ ಮೊದಲ ಮತ್ತು ಎರಡನೇ ವಾರ ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+