Karnataka Weather: ಆಗಸ್ಟ್ 3ರವರೆಗೂ ಸುರಿಯಲಿದೆ ಭಾರಿ ಮಳೆ: ಈ ಜಿಲ್ಲೆಗಳಲ್ಲಿ ವ್ಯಾಪಕ ಮಳೆ

ರಾಜ್ಯದಲ್ಲಿ ಮಳೆ ಅಬ್ಬರಿಸುತ್ತಿದ್ದು ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದೆ. ಇನ್ನೂ ಒಂದು ವಾರಗಳ ಕಾಲ ಇದೇ ರೀತಿ ಭಾರಿ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡು ಪ್ರದೇಶದಲ್ಲಿ ಹೆಚ್ಚಿನ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ.

ಉತ್ತರ ಆಂದ್ರಪ್ರದೇಶ ಹಾಗೂ ದಕ್ಷಿಣ ಒಡಿಸ್ಸಾ ಕರಾವಳಿ ಪ್ರದೇಶಗಳಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಮತ್ತು ಮೇಲ್ಮೈಸುಳಿಗಾಳಿ ಪರಿಣಾಮದಿಂದ ರಾಜ್ಯದಲ್ಲಿ ಮುಂಗಾರು ಚುರುಕುಗೊಂಡಿದ್ದು, ಮುಂದಿನ 2 ದಿನಗಳವರೆಗೆ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.

karnataka-rain-red-alert-continues

ರಾಜ್ಯದಲ್ಲಿ ಸತತ ಮಳೆಯಾಗುತ್ತಿರುವುದರಿಂದ ಕೆಲವು ತಗ್ಗು ಪ್ರದೇಶಗಳಲ್ಲಿ ನೀರಿನ ಮಟ್ಟ ಹೆಚ್ಚಾಗಲಿದ್ದು, ಜಲಾಶಯಗಳಿಗೆ ಒಳ ಹರಿವು ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿರುವುದರಿಂದ ಹಲವು ಕಡೆಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ.

55 ಕಿಲೋ ಮೀಟರ್ ವೇಗದಲ್ಲಿ ಗಾಳಿ ಬೀಸಲಿದ್ದು ಸಮುದ್ರದಲ್ಲಿ ಭಾರಿ ಅಲೆಗಳು ಏಳುವುದರಿಂದ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಿದೆ. ಸಮುದ್ರ, ನದಿಗಳು ಮತ್ತು ಜಲಪಾತಗಳ ಬಳಿ ತೆರಳದಂತೆ ಸ್ಥಳೀಯರು ಮತ್ತು ಪ್ರವಾಸಿಗರಿಗೆ ಜಿಲ್ಲಾಡಳಿತಗಳು ಸೂಚನೆ ನೀಡಿವೆ.

ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು ಇಂದು ಕೂಡ ರೆಡ್ ಅಲರ್ಟ್ ನೀಡಲಾಗಿದೆ. ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲಿ ಕೂಡ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಜಲಾಶಯಗಳಿಗೆ ಹೆಚ್ಚಿದ ಒಳಹರಿವು

ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿರುವ ಕಾರಣ ಜಲಾಶಯಗಳಿಗೆ ಒಳಹರಿವು ಹೆಚ್ಚಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವ ಕಾರಣ ಕೃಷ್ಣ ರಾಜಸಾಗರ ಜಲಾಶಯಕ್ಕೆ ಅಪಾರ ಪ್ರಮಾಣದ ನೀರು ಹರಿದುಬರುತ್ತಿದೆ.

ತುಂಗಭದ್ರಾ ಜಲಾಶಯಕ್ಕೂ 1 ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಹರಿದುಬರುತ್ತಿದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿರುವ ಕಾರಣ ಜೋಗ ಜಲಪಾತ ಮೈದುಂಬಿಕೊಂಡಿದೆ.

ಉತ್ತರ ಕರ್ನಾಟಕ ಜಿಲ್ಲೆಗಳಲ್ಲಿ ಉತ್ತಮ ಮಳೆ

ಉತ್ತರ ಒಳನಾಡಿನ ಜಿಲ್ಲೆಗಳಾದ ಗದಗ, ಯಾದಗಿರಿ, ಬೆಳಗಾವಿ, ಕೊಪ್ಪಳ, ಬೀದರ್ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ. ಗೋಕಾಕ ಜಲಪಾತ ಭೋರ್ಗರೆದು ಹರಿಯುತ್ತಿದ್ದು ಪ್ರವಾಸಿಗರನ್ನು ಆಕರ್ಷಿಸುತ್ತಿದೆ.

ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಕೂಡ ಉತ್ತಮ ಮಳೆಯಾಗುತ್ತಿದೆ. ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಮೈಸೂರು, ಮಂಡ್ಯ, ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+