Karnataka Rains: ಕರ್ನಾಟಕದ ಈ ಜಿಲ್ಲೆಗಳಲ್ಲಿ ಮತ್ತೆ ಹೆಚ್ಚಲಿದೆ ಮಳೆಯ ಅಬ್ಬರ: ಇಲ್ಲಿದೆ ಸಂಪೂರ್ಣ ಮಾಹಿತಿ
ಬೆಂಗಳೂರು, ಸೆಪ್ಟೆಂಬರ್ 24: ಕಳೆದ ವರ್ಷಕ್ಕಿಂತ ಈ ವರ್ಷ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ. ಆರಂಭದಲ್ಲಿ ಮುಂಗಾರು ಅಬ್ಬರ ಜೋರಾಗಿದ್ದು, ಕರ್ನಾಟಕದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರ್ನಾಟಕದ ಹಲವೆಡೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದ್ದು, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.

ಕರ್ನಾಟಕದ ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಭಾರಿ ಮಳೆಯಾಗುವ ಮುನ್ಸೂಚನೆ ದೊರೆತಿದ್ದು, ತುಮಕೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ವಿಜಯಪುರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ. ತುಮಕೂರು, ಶಿವಮೊಗ್ಗ, ಕೊಡಗು, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ವಿಜಯಪುರ, ಕೊಪ್ಪಳ, ಹಾವೇರಿ, ಗದಗ, ಧಾರವಾಡ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ವಿಜಯನಗರದಲ್ಲಿ ಕೂಡ ಮಳೆಯಾಗಲಿದೆ.
ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಇಂದು ಗುಡುಗು ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಅತ್ಯಧಿಕ ಮಳೆಯಾಗುವ ಸಾಧ್ಯತೆಯಿದ್ದು, ರೆಡ್ ಅಲರ್ಟ್ ನೀಡಲಾಗಿದೆ. ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ ಇದೆ ಎಂದು ಹೇಳಿದರು. ಹುಕ್ಕೇರಿ, ಹೊನ್ನಾವರ, ಅಂಕೋಲಾ, ಕಲಘಟಗಿ, ಬೆಳಗಾವಿ, ಶಿರಹಟ್ಟಿ, ನೆಲೋಗಿ, ಮಹಾಲಿಂಗಪುರ, ಮುಂಡಗೋಡು, ಮಂಗಳೂರು, ಜೇವರ್ಗಿ, ಮೂಲ್ಕಿ, ಸಿಂದಗಿ, ಆಲಮಟ್ಟಿ, ಗದಗ, ಗಬ್ಬೂರು, ಹುಂಚದಕಟ್ಟೆ, ಕಳಸ, ಕೆಆರ್ನಗರ, ಕೊಟ್ಟಿಗೆಹಾರದಲ್ಲಿ ಮಳೆಯಾಗಿದೆ.
ಉತ್ತರ ಒಳನಾಡು ಜಿಲ್ಲೆಗಳಲ್ಲಿ ಇಂದು ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹವಾಮಾನ ಇಲಾಖೆ ಆರೆಂಜ್ಅಲರ್ಟ್ ನೀಡಲಾಗಿದೆ, ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ, ನಂತರ ಮಳೆ ತೀವ್ರತೆ ಕಡಿಮೆಯಾಗುವ ಸಾಧ್ಯತೆಯಿದೆ. ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ವ್ಯಾಪಕವಾಗಿ ಸಾಧಾರಣದಿಂದ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.












Click it and Unblock the Notifications