Karnataka Rain: ಸೆಪ್ಟೆಂಬರ್ ತಿಂಗಳಲ್ಲಿ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ: ಈ ಜಿಲ್ಲೆಗಳಿಗೆ ವಾಡಿಕೆಗಿಂತ ಹೆಚ್ಚು ಮಳೆ!

ಆಗಸ್ಟ್ ತಿಂಗಳಲ್ಲಿ ಮಳೆ ಸಂಪೂರ್ಣವಾಗಿ ಕೈಕೊಟ್ಟ ಬಳಿಕ ಸೆಪ್ಟೆಂಬರ್ ತಿಂಗಳಿನಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆ ಇದೆ. ಆಗಸ್ಟ್ 31ರಂದು ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿತ್ತು. ಸೆಪ್ಟೆಂಬರ್ ಆರಂಭದ ದಿನಗಳಿಂದ ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಈ ತಿಂಗಳು ಉತ್ತಮ ಮಳೆಯಾಗುವ ಸೂಚನೆ ನೀಡಿದೆ.

ಸೆಪ್ಟೆಂಬರ್ ತಿಂಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುತ್ತದೆ ಎಂದು ನಿರೀಕ್ಷೆ ಮಾಡಲಾಗಿದೆ. ಸೆಪ್ಟೆಂಬರ್ ಮೊದಲ ವಾರದಲ್ಲಿ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಸಾಮಾನ್ಯಕ್ಕಿಂತ ಹೆಚ್ಚು ಮಳೆಯಾಗುವ ನಿರೀಕ್ಷೆ ಮಾಡಲಾಗಿದೆ. ಅದಕ್ಕೆ ತಕ್ಕಂತೆ ಈಗಾಗಲೇ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುತ್ತಿದೆ.

Karnataka Rain

ಸೆಪ್ಟೆಂಬರ್ ತಿಂಗಳ ಎರಡನೇ ವಾರದಲ್ಲಿ ರಾಜ್ಯದ ಕರಾವಳಿ ಜಿಲ್ಲೆಗಳು, ಮಲೆನಾಡು ಜಿಲ್ಲೆಗಳು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲೂ ಚದುರಿದಂತೆ ಉತ್ತಮ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಸೆಪ್ಟೆಂಬರ್ ಮೂರನೇ ವಾರದಲ್ಲಿ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇನ್ನು ಕೊನೆಯ ವಾರದಲ್ಲಿ ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.

ಕಾವೇರಿ ಜಲಾನಯನ ಪ್ರದೇಶದಲ್ಲೂ ಉತ್ತಮ ಮಳೆ

ಸದ್ಯ ತಮಿಳುನಾಡಿಗೆ ನೀರು ಹರಿಸುತ್ತಿರುವ ಕಾರಣ ಕೆಆರ್ ಎಸ್ ಜಲಾಶಯದಲ್ಲಿ ನೀರು ಕಡಿಮೆಯಾಗಿದ್ದು, ಮುಂದಿನ ದಿನಗಳಲ್ಲಿ ಕುಡಿಯುವ ನೀರಿಗೂ ತೊಂದರೆಯಾಗುವ ಸಾಧ್ಯತೆ ಇದೆ. ರಾಜ್ಯದ ರೈತರ ಬೆಳೆಗಳಿಗೆ ನೀರು ಬಿಡದ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಹರಿಸುತ್ತಿದೆ ಎಂದು ರೈತರು ವ್ಯಾಪಕ ಹೋರಾಟ ಮಾಡುತ್ತಿದ್ದಾರೆ.

ಸೆಪ್ಟೆಂಬರ್ ತಿಂಗಳಿನಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಕೂಡ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಮುನ್ಸೂಚನೆಯಂತೆ ಈ ಭಾಗದಲ್ಲಿ ಭಾರಿ ಮಳೆಯಾಗುವ ಮೂಲಕ ಕೆಆರ್ ಎಸ್, ಕಬಿನಿ ಜಲಾಶಯಗಳು ಭರ್ತಿಯಾದರೆ ಈ ಭಾಗದ ರೈತರ ಸಂಕಷ್ಟು ತೀರಲಿದ್ದು, ತಮಿಳುನಾಡಿನ ನೀರಿನ ಸಮಸ್ಯೆ ಕೂಡ ಮುಗಿಯಲಿದೆ.

ಬೆಂಗಳೂರು ನಗರದಲ್ಲೂ ಉತ್ತಮ ಮಳೆ

ರಾಜಧಾನಿ ಬೆಂಗಳೂರಿನಲ್ಲಿ ಕೂಡ ಆಗಸ್ಟ್‌ನಲ್ಲಿ ತೀವ್ರ ಮಳೆ ಕೊರತೆ ಆಗಿತ್ತು. ಆಗಸ್ಟ್ 31ರ ರಾತ್ರಿ ನಗರದಲ್ಲಿ ಭಾರಿ ಮಳೆಯಾಗಿದೆ. ಸೆಪ್ಟೆಂಬರ್ 1ರಂದು ನಗರದ ಹಲವು ಕಡೆಗಳಲ್ಲಿ ಉತ್ತಮ ಮಳೆಯಾಗಿದೆ. ಆಗಸ್ಟ್‌ನಲ್ಲಿ ತೀವ್ರ ಮಳೆ ಕೊರತೆಯಾಗಿದ್ದರೂ, ಸೆಪ್ಟೆಂಬರ್ ತಿಂಗಳಲ್ಲಿ ನಗರದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+