Rain alert Karnataka : ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ರಾಜ್ಯದ 14 ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು, ಜನವರಿ 20: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಕರ್ನಾಟಕದ 14 ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಮಂಡ್ಯ, ಮೈಸೂರು, ಹಾಸನ, ರಾಮನಗರ, ಚಿಕ್ಕಮಗಳೂರು, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಕೋಲಾರ, ಕೊಡಗು, ಶಿವಮೊಗ್ಗ, ಚಾಮರಾಜನಗರದಲ್ಲಿ ಮಳೆಯಾಗಲಿದೆ.

ಇಂದು ಬೆಂಗಳೂರು ಸೇರಿ ರಾಜ್ಯದ ವಿವಿಧ ಭಾಗದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಎರಡು ದಿನ ಮಳೆ ಇರಲಿದ್ದು, ಉತ್ತರ ಒಳನಾಡು ಜಿಲ್ಲೆಗಳ ಕೆಲ ಕಡೆ ಮೋಡ ಕವಿದ ವಾತಾವರಣ ಹಾಗೂ ಒಣ ಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

Karnataka Rain South Interior Karnataka Will Witness rainfall Today

ಬೆಂಗಳೂರಿನಲ್ಲಿ ಸಾಮಾನ್ಯವಾಗಿ ಮೋಡಕವಿದ ವಾತಾವರಣವಿರಲಿದೆ, ಹಗುರ ಮಳೆಯಾಗುವ ಸಾಧ್ಯತೆ ಇದೆ. ಕೆಲವು ಪ್ರದೇಶಗಳಲ್ಲಿ ಬೆಳಗಿನ ಜಾವದಲ್ಲಿ ಕೆಲವೆಡೆ ಮಂಜು ಕವಿದ ವಾತಾವರಣವಿತ್ತು. ವಿಜಯನಗರ, ಶಿವಮೊಗ್ಗ, ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ಉಡುಪಿಯಲ್ಲಿ ಒಣಹವೆ ಮುಂದುವರೆಯಲಿದೆ. ರಾಜ್ಯಾದ್ಯಂತ ಮೋಡಕವಿದ ವಾತಾವರಣವಿದ್ದ ಕಾರಣ ಚಳಿಯ ಪ್ರಮಾಣ ಕಡಿಮೆಯಾಗಿದೆ.

ಕಳೆದ ತಿಂಗಳು ಸೈಕ್ಲೋನ್‌ ನಿಂದಾಗಿ ಜನ ರೋಸಿ ಹೋಗಿದ್ರು. ಇದೀಗ ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ಅಪ್ಪಳಿಸುತ್ತಿದ್ದು ಅದರ ಪರಿಣಾಮ ತಮಿಳುನಾಡು, ಕರ್ನಾಟಕದ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗುತ್ತಿದೆ. ಇಂದು ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ.

ಕರ್ನಾಟಕದ ಬಹುತೇಕ ಕಡೆ ಇಂದು ಮಳೆಯಾಗುವ ಸಾಧ್ಯತೆ ಇದೆ, ಇಂದು ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇನ್ನೂ ಜನವರಿ 21ರಿಂದ ಜನವರಿ 25ರವರೆಗೆ ರಾಜ್ಯಾದ್ಯಂತ ಒಣಹವೆ ಇರುವ ಸಾಧ್ಯತೆ ಇದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಮಂಜು ಇರುವ ಸಾಧ್ಯತೆ ಇದೆ.

ಮುಂದಿನ 5 ದಿನಗಳ ಕಾಲ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳಲ್ಲಿ ಒಣ ಹವೆಯಿರುವ ಸಾಧ್ಯತೆಯಿದೆ. ನಿನ್ನೆ ರಾಜ್ಯದ ದಕ್ಷಿಣ ಒಳನಾಡು, ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಚದುರಿದಂತೆ ಸಾಧಾರಣ ಮಳೆಯಾಗಿತ್ತು.

ಈಗಾಗಲೇ ರಾಜ್ಯದಲ್ಲಿ ಮೈಕೊರೆಯುವ ಚಳಿಗೆ ಜನರು ಸುಸ್ತಾಗಿದ್ದಾರೆ. ಅದರ ಜೊತೆ ಮಳೆಯೂ ಬರುತ್ತಿದ್ದು, ರಾಜ್ಯದ ಜನತೆ ರೋಸಿ ಹೋಗಿದ್ದಾರೆ. ಮತ್ತೆ ಮುಂದಿನ ಐದು ದಿನ ಮಳೆ ಮುನ್ಸೂಚನೆಗೆ ಜನರು ಹೈರಾಣಾಗಿದ್ದಾರೆ. ಜನವರಿ 20ರಿಂದ ಜನವರಿ 25ರವರೆಗೂ ರಾಜ್ಯದ ದಕ್ಷಿಣ ಒಳನಾಡು,ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ಸಾಧಾರಣ ಮಳೆ ಸುರಿಯುವ ಸಾಧ್ಯತೆಯಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+