Karnataka Rain: ರಾಜ್ಯದ ಈ ಜಿಲ್ಲೆಗಳಲ್ಲಿ ಭಾರಿ ಮಳೆ! ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದಲ್ಲಿ ಮುಂಗಾರು ಕೈಕೊಟ್ಟ ಸಂಪೂರ್ಣವಾಗಿ ಕೈಕೊಟ್ಟ ಬಳಿಕ ಹಿಂಗಾರು ಸ್ವಲ್ಪ ಭರವಸೆ ಮೂಡಿಸಿದೆ. ಸೋಮವಾರ ರಾಜ್ಯದ 18 ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಿದ್ದು, ಜನರಲ್ಲಿ ಸ್ವಲ್ಪ ನೆಮ್ಮದಿ ತರಿಸಿದೆ.

ಅದರಲ್ಲೂ ರಾಜ್ಯದ ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗಿದ್ದು, ಇನ್ನೂ ಎರಡು ದಿನ ವ್ಯಾಪಕ ಮಳೆ ಸುರಿಯುವ ನಿರೀಕ್ಷೆ ಇದ್ದು, ಹಲವು ಜಿಲ್ಲೆಗಳಿಗೆ ಹಳದಿ ಎಚ್ಚರಿಕೆ ನೀಡಲಾಗಿದೆ.

 Karnataka Rain: The IMD issues a Yellow Alert in these districts as heavy rain is expected

ಹವಾಮಾನ ಇಲಾಖೆ ಬುಧವಾರದವರೆಗೆ ದಕ್ಷಿಣ ಒಳನಾಡಿನ ಭಾಗದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಮಂಗಳವಾರ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, 6 ಸೆಂ. ಮೀ. ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ.

ಕರಾವಳಿ ಕರ್ನಾಟಕಕ್ಕೆ ಮಂಗಳವಾರ ಹಳದಿ ಎಚ್ಚರಿಕೆ ನೀಡಲಾಗಿದೆ. ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಪ್ರಕಾರ ಗುರುವಾರದವರೆಗೆ ಇಡೀ ರಾಜ್ಯದಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

ಆಗ್ನೇಯ ಅರೇಬಿಯನ್ ಸಮುದ್ರದ ಮೇಲಿನ ಗಾಳಿಯ ಚಂಡಮಾರುತವು ತೊಟ್ಟಿಯಾಗಿ (ಸಮುದ್ರದಲ್ಲಿ ಎರಡು ಅಲೆಗಳ ನಡುವಿನ ತಗ್ಗು ಪ್ರದೇಶ) ಮಾರ್ಪಟ್ಟಿದೆ ಎಂದು ಬೆಂಗಳೂರಿನ ಐಎಂಡಿ ಹವಾಮಾನ ಕೇಂದ್ರದ ಮುಖ್ಯಸ್ಥ ಎ ಪ್ರಸಾದ್ ತಿಳಿಸಿದ್ದಾರೆ.

ಈ ಜಿಲ್ಲೆಗಳಲ್ಲಿ ಭಾರಿ ಮಳೆ

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಚಿಕ್ಕಬಳ್ಳಾಪುರ, ಶಿವಮೊಗ್ಗ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಹಳದಿ ಎಚ್ಚರಿಕೆ ನೀಡಲಾಗಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಕೂಡ ಭಾರಿ ಮಳೆ ಸುರಿಯಲಿದ್ದು ಹಳದಿ ಎಚ್ಚರಿಕೆ ನೀಡಲಾಗಿದೆ.

ಸೋಮವಾರ ತುಮಕೂರು, ಬೆಂಗಳೂರು, ಮೈಸೂರು, ಮಂಡ್ಯ, ಚಾಮರಾಜನಗರ, ಹಾಸನ, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕಲಬುರಗಿ, ಹಾವೇರಿ, ಹುಬ್ಬಳ್ಳಿ, ಯಾದಗಿರಿ, ಚಿತ್ರದುರ್ಗ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗಿದೆ.

ಬೆಂಗಳೂರಿನಲ್ಲಿ ಇಂದು ಕೂಡ ಭಾರಿ ಮಳೆ

ಮಂಗಳವಾರ ಬೆಂಗಳೂರು ನಗರದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಬೆಂಗಳೂರಿನಲ್ಲಿ ಬೆಳಗ್ಗೆಯಿಂದಲೇ ಮೋದ ಕವಿದ ವಾತಾವರಣ ಇದ್ದು ಸಂಜೆ ವೇಳೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಬೆಂಗಳೂರಿನಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಭಾರೀ ಮಳೆ, ಸಂಜೆ ಗುಡುಗು ಸಹಿತ ಮಳೆ ಮತ್ತು ಹಗಲಿನಲ್ಲಿ ತುಂತುರು ಮಳೆ ಬೀಳಲಿದೆ. ರಾಜ್ಯದಲ್ಲಿ 54% ಮತ್ತು ದಕ್ಷಿಣ ಒಳನಾಡಿನ ಕರ್ನಾಟಕವು 43% ನಷ್ಟು ಮಳೆಯ ಕೊರತೆಯಾಗಿದ್ದರೂ ಸಹ, ಮುಂದಿನ 3-5 ದಿನಗಳಲ್ಲಿ ಭಾರೀ ಮಳೆಯು ಸ್ವಲ್ಪ ಚೇತರಿಕೆ ನೀಡುವ ನಿರೀಕ್ಷೆಯಿದೆ.

ಸೋಮವಾರ ಸುರಿದ ಮಳೆಗೆ ನಗರದ ಹಲವು ಅಂಡರ್‌ಪಾಸ್‌ಗಳು ಜಲಾವೃತಗೊಂಡಿವೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ತಡರಾತ್ರಿ ಬಿಬಿಎಂಪಿ ಕೇಂದ್ರ ನಿಯಂತ್ರಣ ಕೊಠಡಿಗೆ ಭೇಟಿ ನೀಡಿ ಹಾನಿಯ ಅಂದಾಜಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+