Karnataka Rain: ಮುಂಗಾರು ಆರ್ಭಟ; ಈ ಜಿಲ್ಲೆಗಳಲ್ಲಿ ಒಂದು ವಾರ ಭರ್ಜರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ಬೆಂಗಳೂರು, ಮೇ 14: ರಾಜ್ಯಕ್ಕೆ ಜೂನ್‌ 05 ರಿಂದ ಮುಂಗಾರು ಮಳೆ ಸಂಪೂರ್ಣವಾಗಿ ಪ್ರವೇಶಿಸಲಿದೆ. ಕರ್ನಾಕಟದಲ್ಲಿ ರೈತರು ಮುಂಗಾರು ಮಳೆ ಯಾವಾಗ ಆಗಮನವನ್ನು ಎದುರು ನೋಡುತ್ತಿದ್ದು, ನಿನ್ನೆ(ಮಂಗಳವಾರ) ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗಿದೆ. ಅಲ್ಲದೇ ಇಂದು ಸಂಜೆ 15 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಕೆ ಮುನ್ಸೂಚನೆಯನ್ನ ನೀಡಿದೆ.

ರಾಜ್ಯದಲ್ಲಿ ಮುಂದಿನ 3 ಗಂಟೆಗಳಲ್ಲಿ ಉತ್ತರ ಕನ್ನಡ ಭಾಗದ ಜಿಲ್ಲೆಗಳಲ್ಲಿ ಹೆಚ್ಚು ಗುಡುಗು, ಸಿಡಿಲು ಹಾಗೂ ಗಾಳಿಯೊಂದಿಗೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಾದ್ಯಂತ ಅಲ್ಲಲ್ಲಿ ಗುಡುಗು, ಮಿಂಚು ಸಹಿತ ಉತ್ತಮ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

Karnataka Rain There Will Be More Rain In The State For 7 Days

ಭಾರತದಾದ್ಯಂತ ಈ ನೈಋತ್ಯ ಮಾನ್ಸೂನ್‌ನಲ್ಲಿ ಸಾಮಾನ್ಯಕ್ಕಿಂತ ಶೇ.5 ರಷ್ಟು ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದ್ದಾರೆ. ಆದರೆ ಕರ್ನಾಟಕಕ್ಕೆ, ವಿಶೇಷವಾಗಿ ಬೆಂಗಳೂರಿನಂತಹ ನಗರ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗುವ ಬಗ್ಗೆ ಹವಾಮಾನ ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರಿಗಳು, ಪೂರ್ವ ಮಾನ್ಸೂನ್ ಮಳೆ ಈಗಾಗಲೇ ಪ್ರಾರಂಭವಾಗಿದೆ ಎಂದು ಹೇಳಿದರು.

ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿಯೂ ಸಹ ಭಾರೀ ಮಳೆಯಾಗಲಿದೆ ಎಂದು ಅಧಿಕಾರಿಯೊಬ್ಬರು ಹೇಳಿದ್ದು, ಜೂನ್ 1 ರಂದು ಮುಂಗಾರು ಪ್ರವೇಶಿಸಬೇಕಿತ್ತು, ಆದರೆ ಐದು ದಿನ ಮುಂಚಿತವಾಗಿ, ಮೇ 27 ರಂದು ಕೇರಳ ಕರಾವಳಿಯನ್ನು ಮಾನ್ಸೂನ್ ಅಪ್ಪಳಿಸುವ ಸಾಧ್ಯತೆಯಿದೆ. ಜಾಗತಿಕ ಹವಾಮಾನ ಅಂಶಗಳ ಆಧಾರದ ಮೇಲೆ ಇಡೀ ದೇಶಕ್ಕೆ ಹೆಚ್ಚಿನ ಮಳೆಯ ಮುನ್ಸೂಚನೆ ನೀಡಲಾಗಿದೆ ಎಂದು ಐಎಂಡಿ-ಬೆಂಗಳೂರಿನ ನಿರ್ದೇಶಕ ಎನ್. ಪುವಿಯರಸನ್ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿದ್ದಾರೆ.

ಇನ್ನು ಕಳೆದ ಮೂರು ದಿನಗಳಿಂದ ಬೆಂಗಳೂರು ಸೇರಿಂದತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಉತ್ತರ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಶಿವಮೊಗ್‌, ಚಿತ್ರದುರ್ಗ ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಉಡುಪಿ, ದಕ್ಷಿಣ ಕನ್ನಡ, ತುಮಕೂರು, ಮಂಡ್ಯ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಚಿಕ್ಕಮಗಳೂರು ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನೂ ಮೇ 15 ರಂದು ದಕ್ಷಿಣ ಕನ್ನಡ,ಉಡುಪಿ, ಬೆಳಗಾವಿ ಧಾರವಾಡ, ಗದಗ,ಹಾವೇರಿ ಚಾಮರಾಜನಗರ, ಹಾಗೂ ಹಾಸನ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಯೆಲ್ಲೂ ಅಲರ್ಟ್‌ ಘೋಷಿಸಿಲಾಗಿದೆ. ಮುಂದಾರು ಮಳೆಯೊಂದಿಗೆ ಗಾಳಿ, ಮಿಂಚು ಹಾಗೂ ಗುಡುಗು ಸಹಿತ ರಾಜ್ಯದ ವಿವಿಧ ಭಾಗಗಳಲ್ಲಿ ಮಳೆಯಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+