Rain News: ಡಿಸೆಂಬರ್ 11ರವರೆಗೆ ಈ ಜಿಲ್ಲೆಗಳಿಗೆ ಭಾರಿ ಮಳೆ ಮುನ್ಸೂಚನೆ

ಮಿಚಾಂಗ್ ಚಂಡಮಾರುತ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ ತಾಪಮಾನ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗಿದೆ. ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇದ್ದರೂ, ಕೆಲವು ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುತ್ತಿದೆ. ಡಿಸೆಂಬರ್ 8 ರಿಂದ 11ರವರೆಗೆ ರಾಜ್ಯದ ಹಲವು ಜಿಲ್ಲೆಗಳು ಉತ್ತಮ ಮಳೆ ಪಡೆಯಬಹುದು ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.

ಇಂದು (ಬುಧವಾರ) ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ರಾಯಚೂರು, ಬೀದರ್, ಕಲಬುರಗಿ, ವಿಜಯಪುರ, ಬೆಳಗಾವಿ, ಧಾರವಾಡ, ಯಾದಗಿರಿ, ಬಾಗಲಕೋಟೆ, ದಾವಣಗೆರೆ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

 Karnataka Rain: These Districts Will Receive Heavy Rain Until December 11th

ಡಿಸೆಂಬರ್ 7ರಂದು ಮಳೆ ಪ್ರಮಾಣ ಮತ್ತಷ್ಟು ಕಡಿಮೆಯಾಗಲಿದ್ದು, ಬಳ್ಳಾರಿ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣದಿಂದ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಡಿಸೆಂಬರ್ 8ರಂದು ವ್ಯಾಪಕ ಮಳೆ

ಡಿಸೆಂಬರ್ 8ರಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಶಿವಮೊಗ್ಗ, ಮೈಸೂರು, ಮಂಡ್ಯ ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ. ತುಮಕೂರು, ಬೆಂಗಳೂರು ನಗರ, ಕೋಲಾರ, ಬೆಳಗಾವಿ, ಧಾರವಾಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಚಾಮರಾಜನಗರ ಜಿಲ್ಲೆಗಳಲ್ಲಿ ಚದುರಿದಂತೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಡಿಸೆಂಬರ್ 9ರಂದು ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಾವಣಗೆರೆ ಜಿಲ್ಲೆಗಳಲ್ಲಿ ವ್ಯಾಪಕ ಮಳೆ ಬೀಳುವ ಸಾಧ್ಯತೆ ಇದ್ದು, ವಿಜಯಪುರ, ಬೆಳಗಾವಿ, ಧಾರವಾಡ, ಮೈಸೂರು, ಮಂಡ್ಯ, ಹಾಸನ, ತುಮಕೂರು, ಕೋಲಾರ, ಹಾವೇರಿ ಜಿಲ್ಲೆಗಳಲ್ಲಿ ಚದುರಿದಂತೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹೇಳಿದೆ.

ಡಿಸೆಂಬರ್ 10 ರಂದು ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ದಾವಣಗೆರೆ, ಹಾವೇರಿ, ಮೈಸೂರು, ಮಂಡ್ಯ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಬಳ್ಳಾರಿ, ಹಾವೇರಿ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಮಡಿಕೇರಿ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಡಿಸೆಂಬರ್ 11ರಂದು ವಿಜಯಪುರ, ರಾಯಚೂರು, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ದಾವಣಗೆರೆ, ಹಾವೇರಿ ಜಿಲ್ಲೆಗಳಲ್ಲಿ ಚದುರಿದಂತೆ ವ್ಯಾಪಕ ಮಳೆಯಾಗುವ ನಿರೀಕ್ಷೆ ಇದೆ.

ಡಿಸೆಂಬರ್ 12ರಿಂದ ರಾಜ್ಯದಲ್ಲಿ ಮಳೆ ಕಡಿಮೆಯಾಗಲಿದ್ದು, ಅಲ್ಲಲ್ಲಿ ಚದುರಿದಂತೆ ಸಾಧಾರಣದಿಂದ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+