Karnataka Rain Update: ಚಂಡಮಾರುತ ಪ್ರಸರಣ ಪ್ರಭಾವ: ಕರ್ನಾಟಕದ ಈ ಭಾಗಗಳಲ್ಲಿ ಭಾರೀ ಮಳೆ: ಐಎಂಡಿ ಮುನ್ಸೂಚನೆ ಏನಿದೆ
Karnataka Rain Update: ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ತಾಪಮಾನ ಇಳಿಕೆಯಾಗಿದೆ. ದಕ್ಷಿಣ ಕರಾವಳಿ ಆಂಧ್ರಪ್ರದೇಶ ಮತ್ತು ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದವರೆಗೆ ಇದ್ದ ಮೇಲ್ಮ ಸುಳಿಗಾಳಿ ದುರ್ಬಲಗೊಂಡಿದೆ. ಆದರೆ, ಕರ್ನಾಟಕವೂ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ದೇಶದಾದ್ಯಂತ ಚಂಡಮಾರುತ ಪರಿಚಲನೆ ಹಾಗೂ ಚಂಡಮಾರುತ ಪ್ರಸರಣದ ಪ್ರಭಾವದಿಂದ ಮಳೆ ಆಗುತ್ತಿದೆ. ಕರ್ನಾಟಕದಲ್ಲಿ ಅಕ್ಟೋಬರ್ 9ರ ವರೆಗೆ ಮಲೆನಾಡು ಹಾಗೂ ಕರಾವಳಿ ಭಾಗಗಳಲ್ಲಿ ಭಾರೀ ಮಳೆ ಆಗಲಿದೆ. ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿಯೂ ಮಳೆ ಆಗುವ ಸಾಧ್ಯತೆ ಇದೆ. ಆದರೆ, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯುವ ಸಾಧ್ಯತೆ ಇದೆ.
ನೈಋತ್ಯ ಮುಂಗಾರು ಹಿಮ್ಮೆಟ್ಟುವಿಕಯು ಸುಪೌಲ್, ರಾಂಚಿ, ರಾಯ್‌ಪುರ, ಬ್ರಹ್ಮಪುರಿ, ಪರಭಣಿ, ಬಾರಾಮತಿ, ಹರ್ನ್ಸ್ ಮತ್ತು 17.5°N/71.8°E ಮೂಲಕ ಹಾದುಹೋಗುವುದನ್ನು ಮುಂದುವರಿಸಿದೆ. ಮುಂದಿನ 2-3 ದಿನಗಳಲ್ಲಿ ಮರಾಠವಾಡ ಮತ್ತು ವಿದರ್ಭದ ಬಹುತೇಕ ಭಾಗಗಳು, ಮಹಾರಾಷ್ಟ್ರ ಹಾಗೂ ಛತ್ತೀಸ್‌ಗಢದ ಇನ್ನೂ ಕೆಲವು ಭಾಗಗಳು ಮತ್ತು ತೆಲಂಗಾಣ ಹಾಗೂ ಉತ್ತರ ಒಳನಾಡು ಕರ್ನಾಟಕದ ಕೆಲವು ಭಾಗಗಳಿಂದ ನೈಋತ್ಯ ಮುಂಗಾರು ಮತ್ತಷ್ಟು ಹಿಮ್ಮೆಟ್ಟಲು ಅನುಕೂಲಕರ ಪರಿಸ್ಥಿತಿಗಳು ನಿರ್ಮಾಣವಾಗುವ ಸಾಧ್ಯತೆಯಿದೆ.

ಮನ್ನಾರ್ ಕೊಲ್ಲಿ ಮತ್ತು ಅದನ್ನು ಹೊಂದಿಕೊಂಡಿರುವ ದಕ್ಷಿಣ ತಮಿಳುನಾಡು ಕರಾವಳಿಯ ಮೇಲೆ, ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ಮೇಲ್ಮ ವಾಯುಭಾರ ಕುಸಿತದ ಸುಳಿಗಾಳಿ (upper air cyclonic circulation) ಕಂಡುಬಂದಿದೆ. ಮನ್ನಾರ್ ಕೊಲ್ಲಿ ಮತ್ತು ಅದನ್ನು ಹೊಂದಿಕೊಂಡಿರುವ ದಕ್ಷಿಣ ತಮಿಳುನಾಡು ಕರಾವಳಿಯ ಮೇಲಿನ ಸುಳಿಗಾಳಿಯಿಂದ, ಉತ್ತರ ಒಳನಾಡು ತಮಿಳುನಾಡು ಮತ್ತು ಉತ್ತರ ಕೇರಳದ ಮೂಲಕ ಪೂರ್ವ-ಮಧ್ಯ ಅರೇಬಿಯನ್ ಸಮುದ್ರದವರೆಗೆ, ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿ ವಾಯುಭಾರ ಕುಸಿತದ ಹಾದಿ (trough) ವ್ಯಾಪಿಸಿದೆ.
ದಕ್ಷಿಣ ಒಳನಾಡು ಕರ್ನಾಟಕ ಮತ್ತು ಅದನ್ನು ಹೊಂದಿಕೊಂಡಿರುವ ಉತ್ತರ ಕೇರಳದ ಮೇಲೆ ಸಮುದ್ರ ಮಟ್ಟದಿಂದ 0.9 ಕಿ.ಮೀ ಎತ್ತರದಲ್ಲಿದ್ದ ವಾಯುಭಾರ ಕುಸಿತದ ಸುಳಿಗಾಳಿಯು, ಮೇಲೆ ತಿಳಿಸಲಾದ ವಾಯುಭಾರ ಕುಸಿತದ ಹಾದಿಯೊಂದಿಗೆ (trough) ವಿಲೀನಗೊಂಡಿದೆ.
ಪಶ್ಚಿಮ-ಮಧ್ಯ ಅರೇಬಿಯನ್ ಸಮುದ್ರದ ಮೇಲೆ ಸಮುದ್ರ ಮಟ್ಟದಿಂದ 3.1 ರಿಂದ 7.6 ಕಿ.ಮೀ ಎತ್ತರದವರೆಗೆ ಇದ್ದ ಮೇಲೆ ಸುಳಿಗಾಳಿ (cycloni circulation) ದುರ್ಬಲಗೊಂಡಿದೆ. ದಕ್ಷಿಣ ಕರಾವಳಿ ಅಂಧ್ರಪ್ರದೇಶ ಮತ್ತು ಅದರ ಸುತ್ತಮುತ್ತಲ ಪ್ರದೇಶಗಳಲ್ಲಿ ಸಮುದ್ರ ಮಟ್ಟದಿಂದ 1.5 ಕಿ.ಮೀ ಎತ್ತರದವರೆಗೆ ಇದ್ದ ಮೇಲ್ಮ ಸುಳಿಗಾಳಿ ದುರ್ಬಲಗೊಂಡಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಬಂಗಾಳಕೊಲ್ಲಿ ಮತ್ತು ಅರೇಬಿಯನ್ ಸಮುದ್ರದಲ್ಲಿ ವಾಯುಭಾರ ವೈಪರೀತ್ಯದ ಪ್ರಭಾವದಿಂದ ಕರ್ನಾಟಕದ ವಿವಿಧ ಭಾಗಗಳಲ್ಲಿ ಅಕ್ಟೋಬರ್ 5 ಮತ್ತು 6ರಂದು ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಅಕ್ಟೋಬರ್ 5 ರಂದು ಕರ್ನಾಟಕದ ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಕಾರವಾರ ಭಾಗದಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಗಾಳಿಯ ವೇಗವು 40 ರಿಂದ 60 ಕಿ.ಮೀ ವೇಗದಲ್ಲಿ ಬಿರುಗಾಳಿ ಬೀಸಲಿದೆ. ಹೀಗಾಗಿ, ಮೀನುಗಾರರು ಕಡಲಿಗೆ ಇಳಿಯದಂತೆ ಎಚ್ಚರಿಕೆ ಕೊಡಲಾಗಿದೆ.
ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಮಳೆ ಆರ್ಭಟ
ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಆರ್ಭಟ ಮುಂದುವರಿದಿದೆ. ಕೊಡಗು, ಚಿಕ್ಕಮಗಳೂರು ಮತ್ತು ಶಿವಮೊಗ್ಗದ ಕೆಲವು ಭಾಗಗಳಲ್ಲಿ ಭಾರೀ ಮಳೆ ಆಗಲಿದೆ. ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಭಾಗಶಃ ಮೋಡಕವಿದ ವಾತಾವರಣವಿರಲಿದ್ದು, ಸಂಜೆ ಅಥವಾ ರಾತ್ರಿಯ ವೇಳೆ ಹಗುರದಿಂದ ಕೂಡಿದ ಸಾಧರಣ ಮಳೆ ಆಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಬೆಂಗಳೂರಿನಲ್ಲಿ ಹವಾಮಾನ ಹೇಗಿದೆ ?
ಬೆಂಗಳೂರಿನಲ್ಲಿ ಈ ವಾರ ಸಾಧಾರಣ ಮಳೆ ಆಗುವ ಸಾಧ್ಯತೆ ಇದೆ. ಮುಂದಿನ 48 ಗಂಟೆ ಅವಧಿಯಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದೆ. ಕೆಲವು ಪ್ರದೇಶಗಳಲ್ಲಿ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಡಿಗ್ರಿ ಸೆಲ್ಸಿಯಸ್ ಹಾಗೂ 21 ಡಿಗ್ರಿ ಸೆಲ್ಸಿಯಸ್ ಅನುಪಾತದಲ್ಲಿ ಇರುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.


Click it and Unblock the Notifications
