Karnataka Rain Update: ಈ ಐದು 5 ಜಿಲ್ಲೆಗಳಲ್ಲಿ ಮಳೆ ಕೊರತೆ- ಯಾವುವು ತಿಳಿಯಿರಿ

ಬೆಂಗಳೂರು, ಜುಲೈ 12: ಕರ್ನಾಟಕದ ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದೆ. ಈ ಭಾರಿ ಕರಾವಳಿ ಜಿಲ್ಲೆಗಳಲ್ಲಿ ಅತಿ ಹೆಚ್ಚು ಮಳೆಯಾಗಿದೆ. ಬೆಂಗಳೂರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ. ಮುಂದಿನ ಎರಡು ದಿನಗಳಲ್ಲಿ ದಕ್ಷಿಣ ಕರ್ನಾಟಕ, ಮಧ್ಯ ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ.

ವಿಶೇಷವಾಗಿ ಕರಾವಳಿ ಪ್ರದೇಶಗಳಲ್ಲಿ ಹೆಚ್ಚು ಮಳೆ ಸುರಿಯಲಿದೆ ಎಂಬ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

Karnataka Rain Update: Deficiency of rain in these five 5 districts- Which are those?

ಭಾರತೀಯ ಹವಾಮಾನ ಇಲಾಖೆ ಪ್ರಕಾರ, ಕರಾವಳಿ ಪ್ರದೇಶಗಳಲ್ಲಿ ಮತ್ತು ದಕ್ಷಿಣ ಕರ್ನಾಟಕದ ಒಳನಾಡು ಮತ್ತು ಉತ್ತರ ಕರ್ನಾಟಕದ ಒಳನಾಡು ಪ್ರದೇಶಗಳಲ್ಲಿ ಕನಿಷ್ಠ ಶುಕ್ರವಾರದವರೆಗೆ ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ.

ಮುಂದಿನ ಕೆಲವು ದಿನಗಳವರೆಗೆ ರಾಜ್ಯದಾದ್ಯಂತ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಯೆಲ್ಲೋ ಎಚ್ಚರಿಕೆಯನ್ನು ನೀಡಿದೆ.

Karnataka Rain Update: Deficiency of rain in these five 5 districts- Which are those?

ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳಲ್ಲಿ ಕಳೆದ 24 ಗಂಟೆಗಳಲ್ಲಿ ಅತಿ ಹೆಚ್ಚು ಮಳೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರ (ಕೆಎಸ್‌ಎನ್‌ಡಿಎಂಸಿ) ತಿಳಿಸಿದೆ. ಮಂಗಳವಾರ ರಾಜ್ಯದ ಸರಾಸರಿ ಕನಿಷ್ಠ ತಾಪಮಾನವು ( 19.9 ಡಿಗ್ರಿ ಸೆಲ್ಸಿಯಸ್ ) ಹಾಸನ ಜಿಲ್ಲೆಯಲ್ಲಿ ವರದಿಯಾಗಿದೆ. ಯಾದಗಿರಿ ಜಿಲ್ಲೆಯಲ್ಲಿ ಕ್ರಮವಾಗಿ ಅತಿ ಹೆಚ್ಚು ಅಂದರೆ 35.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಕೆಎಸ್‌ಎನ್‌ಡಿಎಂಸಿ ತಿಳಿಸಿದೆ.

ಕರ್ನಾಟಕದ 13 ಜಿಲ್ಲೆಗಳು ಹೆಚ್ಚುವರಿ ಅಥವಾ ಅತಿ ಹೆಚ್ಚುವರಿ ಮಳೆಯನ್ನು ಕಂಡಿವೆ ಎಂದು ಕೇಂದ್ರವು ಹೇಳಿದೆ. ಆದರೆ 12 ಜಿಲ್ಲೆಗಳು ಸಾಮಾನ್ಯ ಮಳೆಯನ್ನು ಕಂಡಿವೆ ಎಂದು ವರದಿ ನೀಡಿದೆ. ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆ ಕೊರತೆ ಮುಂದುವರಿದಿದೆ ಎಂದು ಇಲಾಖೆ ಹೇಳಿದೆ.

Karnataka Rain Update: Deficiency of rain in these five 5 districts- Which are those?

ಬೆಂಗಳೂರು ನಗರದಲ್ಲಿ ಶುಕ್ರವಾರದವರೆಗೆ ಮಳೆ

ಬೆಂಗಳೂರು ನಗರದಲ್ಲಿ ಬುಧವಾರ ಬೆಳಿಗ್ಗೆ ದಟ್ಟವಾದ ಮಂಜು ಕವಿದಿದೆ. ಮಂಗಳವಾರ ಸಂಜೆ ಹಲವಾರು ಗಂಟೆಗಳ ಕಾಲ ಲಘುವಾಗಿ ಸಾಧಾರಣ ಮಳೆಯಾಯಿತು. ಬೆಂಗಳೂರಿನಲ್ಲಿ ಇನ್ನೂ ಒಂದೆರಡು ದಿನ ಹಗುರದಿಂದ ಸಾಧಾರಣ ಮಳೆ ಮತ್ತು ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಕಂಡುಬರುವ ನಿರೀಕ್ಷೆಯಿದೆ. ನಗರದಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 26 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+