ರಾಜ್ಯದ ಈ ಜಿಲ್ಲೆಗಳಲ್ಲಿ ಇಂದು ಸಹ ಗುಡುಗು ಸಹಿತ ಮಳೆ ಬೀಳುವ ಮುನ್ಸೂಚನೆ, ಇಲ್ಲಿದೆ ವಿವರ

ಕರ್ನಾಟಕ, ಮೇ, 31: ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶ ಮಾಡಲಿದೆ. ಇದಕ್ಕೂ ಮುನ್ನವೇ ಈಗಾಗಲೇ ಸುರಿದ ಮುಂಗಾರು ಪೂರ್ವ ಮಳೆ ರಾಜ್ಯದ ಹಲವೆಡೆ ಅವಾಂತರಗಳನ್ನೇ ಸೃಷ್ಟಿಸಿದೆ. ಭಾರೀ ಮಳೆಯಿಂದ ಕೆಲವರು ಮನೆ, ಮಠಗಳನ್ನು ಕಳೆದುಕೊಂಡು ಬೀದಿಗೆ ಬಂದಿದ್ದರೆ, ಮತ್ತೊಂದೆಡೆ ಕೃಷಿ ಭೂಮಿಗಳನ್ನು ಕಳೆದುಕೊಂಡ ರೈತರು ಆತಂಕಕ್ಕೆ ಒಳಗಾಗಿದ್ದಾರೆ. ಹಾಗೆಯೆ ಇಂದು ಕೂಡ ಈ ಭಾಗಗಲ್ಲಿ ಭಾರೀ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸಿಲಿಕಾನ್‌ ಸಿಟಿಯಲ್ಲಿ ಅಬ್ಬರದ ಮಳೆ

ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದ ಸಾಕಷ್ಟು ಅನಾಹುತಗಳು ಸಂಭವಸಿದೆ. ಕೆಲವೆಡೆ ರಸ್ತೆಗಳನ್ನು ಕೆರೆಯಂತೆ ಮಾರ್ಪಟ್ಟು ವಾಹನ ಸವಾರರು ಪರದಾಡಿದರೆ, ಮತ್ತೊಂದೆಡೆ ಅಂಡರ್‌ಪಾಸ್‌ಗಳಲ್ಲಿ ಹೋಗದಂತೆ ಪೊಲೀಸರು ವಾಹನಗಳನ್ನು ತಡೆದು ಮುಂಜಾಗ್ರತೆ ಮೂಡಿಸಿದ ಘಟನೆಗಳು ಕೂಡ ನಡೆದವು.

Karnataka Rain Update: Heavy Rain alert in many district of karnataka state on may 31

ಹೀಗೆ ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆ ಆರ್ಭಟಸಿದೆ. ಹಾಗೆಯೆ ಸಿಲಿಕಾನ್‌ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗಿದ್ದು, ಸಿಡಿಲು ಬಡಿದು ಮೂವರು ಸಾವನ್ನಪ್ಪಿದ್ದಾರೆ ಎನ್ನುವ ಮಾಹಿತಿಯೂ ಲಭ್ಯವಾಗಿದೆ. ಇನ್ನು ಬೆಂಗಳೂರು, ಚಿಕ್ಕಮಗಳೂರು, ಉಡುಪಿ, ರಾಮನಗರ, ಕೊಡಗು, ಚಾಮರಾಜನಗರ, ಹಾಸನ, ಶಿವಮೊಗ್ಗ, ಬೆಳಗಾವಿ ಕಲಬುರಗಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದೆ. ಮತ್ತು ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ 80ಕ್ಕೂ ಹೆಚ್ಚು ಮರಗಳು ಧರೆಗುರುಳಿವೆ ಎಂದು ತಿಳಿದುಬಂದಿದೆ.

ಭಾರೀ ಮಳೆಯಿಂದ ಮೂರು ಸಾವು

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಕೋಹಳ್ಳಿಯ ಅಮೂಲ್ ಜಯಸಿಂಗ್ ಕಾನಡೆ (24), ದೇಸಾರಹಟ್ಟಿ ಗ್ರಾಮದ ವಿಠ್ಠಬಾಯಿ ಮಹದೇವ ಕಾಮಕರ್ (50), ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ರೇವೂರ (ಬಿ) ಗ್ರಾಮದಲ್ಲಿ ರೈತ ಮಾಳಪ್ಪ ದತ್ತಪ್ಪ ಪೂಜಾರಿ (32) ಸಿಡಿಲು ಬಡಿದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮತ್ತೊಂದೆಡೆ ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ, ಕಲಬುರಗಿ, ಹಾಸನ, ಚಾಮರಾಜನಗರ ಜಿಲ್ಲೆಗಳಲ್ಲಿ ಮನೆಗಳ ಮೇಲ್ಚಾಚಾವಣಿಗಳು ಗಾಳಿ ಮಳೆಗೆ ತೂರಿಕೊಂಡು ಹೋದ ಘಟನೆಯೂ ನಡೆದಿದೆ. ಮತ್ತು ಸಿಲಿಕಾನ್‌ ಸಿಟಿ ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಸುರಿದ ಅಬ್ಬರದ ಮಳೆಯಿಂದ ರಸ್ತೆಗಳಲ್ಲ ಕೆರೆಯಂತಾಗಿದೆ ವಾಹನ ಸವಾರರು ಪರದಾಡಿದರು.

ಅಲ್ಲದೆ ಮುಂದಿನ 48 ಗಂಟೆಯಲ್ಲಿ ಕರಾವಳಿ ಜಿಲ್ಲೆಗಳು ಸೇರಿದಂತೆ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುವ ಸಂಭವ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಈ ಹಿನ್ನೆಲೆ 10 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

ಮುಂದಿನ ಎರಡು ದಿನಗಳ ಕಾಲ ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರದಲ್ಲಿ ಗುಡುಗು ಸಹಿತ ಮಳೆ ಬೀಳುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ಸಂದೇಶವನ್ನು ರವಾನಿಸಿದೆ.

ಒಟ್ಟಿನಲ್ಲಿ ರಾಜ್ಯದ ಹಲವೆಡೆ ಮುಂಗಾರು ಪೂರ್ವ ಮಳೆ ಸಾಕಷ್ಟು ಅನಾಹುತಗಳನ್ನು ಸೃಷ್ಟಿಸಿದೆ. ಇನ್ನೇನು ಕೆಲವೇ ದಿನಗಳಲ್ಲಿ ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡಲಿದ್ದು, ಈ ಹಿನ್ನೆಲೆ ರಾಜ್ಯದ ಜಿಲ್ಲಾವರು ಮುನ್ನೆಚ್ಚರಿಕಾ ಕ್ರಮವಾಗಿ ಯಾವುದೇ ಅನಾಹುತಗಳನ್ನು ಸಂಭವಿಸಬಾರದೆಂದು ಜಿಲ್ಲಾಧಿಕಾರಿಗಳು ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದ್ದಾರೆ. ಅಲ್ಲದೆ ಪೋಷಕರಿಗೆ ಮಳೆ ಬಂದಂತಹ ಸಂದರ್ಭದಲ್ಲಿ ತಮ್ಮ ಮಕ್ಕಳನ್ನು ಕೆರೆ, ನದಿ ಸೇರಿದಂತೆ ಮುಂತಾದ ನೀರಿನ ಮೂಲಗಳ ಬಳಿ ಕಳುಹಿಸದಂತೆ ಎಚ್ಚರಿಕೆ ವಹಿಸಬೇಕು ಎಂದು ಈಗಾಗಲೇ ಸೂಚಿಸಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+