Karnataka Rain Update: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಬೆಂಗಳೂರು ಸೇರಿ 9 ಜಿಲ್ಲೆಗಳಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್
Karnataka Rain Update: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಹಾಗೂ ಚಂಡಮಾರುತ ಪ್ರಸರಣ ಪ್ರಭಾವ ಸೇರಿದಂತೆ ಹವಾಮಾನ ಬದಲಾವಣೆಯ ಕಾರಣದಿಂದ ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ಕರ್ನಾಟಕದಲ್ಲಿ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇದ್ದು, 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಇನ್ನೂ ನಾಲ್ಕರಿಂದ ಐದು ದಿನಗಳ ವರೆಗೆ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಮುಂದಿನ 2-3 ದಿನಗಳಲ್ಲಿ ಪಂಜಾಬ್, ಹರಿಯಾಣ-ಚಂಡೀಗಢ-ದೆಹಲಿ, ರಾಜಸ್ಥಾನದ ಕೆಲವು ಭಾಗಗಳು ಮತ್ತು ಸೌರಾಷ್ಟ್ರ ಮತ್ತು ಕಚ್, ಜಮ್ಮು ಮತ್ತು ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರಾಖಂಡ ಮತ್ತು ಪಶ್ಚಿಮ ಉತ್ತರ ಪ್ರದೇಶದ ಕೆಲವು ಭಾಗಗಳಿಂದ ಚಂಡಮಾರುತವು ಹಿಂದೆ ಸರಿಯಲು ಅನುಕೂಲಕರ ಪರಿಸ್ಥಿತಿಗಳಿವೆ. ಪುರಿ (ಒಡಿಶಾ) ದಿಂದ 210 ಕಿ.ಮೀ ದಕ್ಷಿಣಕ್ಕೆ ಮತ್ತು ವಿಶಾಖಪಟ್ಟಣ (ಆಂಧ್ರಪ್ರದೇಶ) ದಿಂದ ಪೂರ್ವಕ್ಕೆ 290 ಕಿ.ಮೀ. ಮುಂದಿನ 12 ಗಂಟೆಗಳಲ್ಲಿ ಪಶ್ಚಿಮ-ವಾಯುವ್ಯ ದಿಕ್ಕಿಗೆ ಚಲಿಸುವ ಮತ್ತು ಪಶ್ಚಿಮ-ಮಧ್ಯ ಮತ್ತು ಪಕ್ಕದ ವಾಯುವ್ಯ ಬಂಗಾಳಕೊಲ್ಲಿಯಲ್ಲಿ ಆಳವಾದ ವಾಯುವ್ಯ ದಿಕ್ಕಿಗೆ ತೀವ್ರಗೊಳ್ಳುವ ಸಾಧ್ಯತೆಯಿದೆ. ಪಶ್ಚಿಮ-ವಾಯುವ್ಯ ದಿಕ್ಕಿಗೆ ಚಲಿಸುತ್ತಾ ಮುಂದುವರಿಯುವ ಇದು ಸೆಪ್ಟೆಂಬರ್ 23ರ ರಾತ್ರಿಯಿಂದ 24 ರ ಬೆಳಗಿನ ಜಾವದವರೆಗೆ ಆಳವಾದ ವಾಯುವ್ಯ ದಿಕ್ಕಿನ ರೂಪದಲ್ಲಿ ಉತ್ತರ ಆಂಧ್ರಪ್ರದೇಶ - ದಕ್ಷಿಣ ಒಡಿಶಾ ಕರಾವಳಿಗಳನ್ನು ವಿಶಾಖಪಟ್ಟಣ ಮತ್ತು ಗೋಪಾಲಪುರದ ನಡುವೆ ದಾಟುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.

ಈ ತಗ್ಗು ಈಗ ಆಗ್ನೇಯ ಅರೇಬಿಯನ್ ಸಮುದ್ರದಿಂದ ಕರ್ನಾಟಕ ಮತ್ತು ಕರಾವಳಿ ಆಂಧ್ರಪ್ರದೇಶದಾದ್ಯಂತ ಪಶ್ಚಿಮ-ಮಧ್ಯ ಮತ್ತು ಪಕ್ಕದ ವಾಯುವ್ಯ ದಿಕ್ಕಿನ ಮೇಲೆ ಖಿನ್ನತೆಗೆ ಸಂಬಂಧಿಸಿದ ಚಂಡಮಾರುತದ ಪರಿಚಲನೆಗೆ ಸರಾಸರಿ ಸಮುದ್ರ ಮಟ್ಟದಿಂದ 3.1 ಮತ್ತು 7.6 ಕಿ.ಮೀ ನಡುವೆ ಚಲಿಸುತ್ತದೆ.
ಉತ್ತರ ಬಂಗಾಳಕೊಲ್ಲಿಯಿಂದ ಖಿನ್ನತೆಗೆ ಸಂಬಂಧಿಸಿದ ಚಂಡಮಾರುತದ ಪರಿಚಲನೆಗೆ ಮತ್ತು ಸರಾಸರಿ ಸಮುದ್ರ ಮಟ್ಟದಿಂದ 3.1 ಕಿ.ಮೀ ವರೆಗೆ ವಿಸ್ತರಿಸಿರುವ ಉತ್ತರ-ದಕ್ಷಿಣ ದಿಕ್ಕಿನ ತಗ್ಗು ಕಡಿಮೆ ಗುರುತಿಸಲ್ಪಟ್ಟಿದೆ. ಅಲ್ಲದೆ ಮಧ್ಯ ತಮಿಳುನಾಡು ಮತ್ತು ನೆರೆಹೊರೆಗಳಲ್ಲಿ ಸರಾಸರಿ ಸಮುದ್ರ ಮಟ್ಟದಿಂದ 4.5 ಮತ್ತು 7.6 ಕಿ.ಮೀ. ನಡುವಿನ ಮೇಲ್ಬಾಗದ ವಾಯು ಚಂಡಮಾರುತದ ಪ್ರಸರಣವು ಮುಂದುವರಿದಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಹೀಗಾಗಿ, ಕರ್ನಾಟಕದ ವಿವಿಧ ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿದಿದೆ.
Karnataka Rain Update: ಈ ಜಿಲ್ಲೆಗಳಲ್ಲಿ ಭಾರೀ ಮಳೆ: ಐಎಂಡಿ
ಇನ್ನು ಕರ್ನಾಟಕದ 9 ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್ ಮತ್ತು ಕಲಬುರಗಿ, ದಕ್ಷಿಣ ಒಳನಾಡಿನ ಬಳ್ಳಾರಿ, ವಿಜಯನಗರ, ತುಮಕೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದ್ದು, ಈ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್ ಕೊಟ್ಟಿದೆ. ಈ 9 ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗಂಟೆಗೆ 30 ರಿಂದ 40 ಕಿ.ಮೀ ವೇಗದ ಬಿರುಗಾಳಿ ಹಾಗೂ ಗುಡುಗು-ಮಿಂಚಿನೊಂದಿಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ಕೊಡಲಾಗಿದೆ.
ಕರಾವಳಿ: ಕರ್ನಾಟಕದ ಕರಾವಳಿ ಭಾಗದ ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಭಾರೀ ಮಳೆ ಇರಲಿದೆ. ಈ ಭಾಗಗಳಲ್ಲಿ ಮಿಂಚು ಗುಡುಗು ಸಹಿತ ಭಾರೀ ಮಳೆ ಆಗುವ ಸಾಧ್ಯತೆ ಇದೆ. ಗಾಳಿಯ ವೇಗವು ಪ್ರತಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ.
ಉತ್ತರ ಒಳನಾಡು / ಕರ್ನಾಟಕ: ಉತ್ತರ ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಭಾರೀ ಮಳೆ ಇರಲಿದೆ. ಬಳ್ಳಾರಿ - ವಿಜಯನಗರ, ಹಾವೇರಿ, ಯಾದಗಿರಿ, ಧಾರವಾಡ, ರಾಯಚೂರು, ಕೊಪ್ಪಳ ಹಾಗೂ ಗದಗ ಜಿಲ್ಲೆ ಸೇರಿದಂತೆ ವಿವಿಧ ಭಾಗಗಳಲ್ಲಿ ಭಾರೀ ಮಳೆ ಇರಲಿದೆ. ಗಾಳಿಯ ವೇಗವು ಪ್ರತಿ ಗಂಟೆಗೆ 30ರಿಂದ 40 ಕಿ.ಮೀ ವೇಗದಲ್ಲಿ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡು / ದಕ್ಷಿಣ ಕರ್ನಾಟಕ: ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ತುಮಕೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಭಾರೀ ಮಳೆ ಮತ್ತು ಗಾಳಿ (30-40 ಕಿ.ಮೀ.) ಬೀಳುವ ಸಾಧ್ಯತೆ ಇದೆ. ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಹಾಸನ, ಕೊಡಗು ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿಯು ಉಲ್ಲೇಖಿಸಿದೆ.


Click it and Unblock the Notifications
