Karnataka Rain Update: ರಾಜ್ಯದ ವಿವಿಧ ಜಿಲ್ಲೆಗಳ ಮುಂದಿನ ಐದು ದಿನದ ಹವಾಮಾನ ವರದಿ, ತಾಪಮಾನದ ವಿವರ

ಬೆಂಗಳೂರು, ಮೇ 24: ಕರ್ನಾಟಕ ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಧಾರಾಕಾರ ಮಳೆ ಮುಂದಿನ ಐದು ದಿನಗಳ ವರೆಗೆ ಮುಂದುವರಿಯಲಿದೆ. ಈ ಪೈಕಿ ಮೊದಲ ಎರಡು ದಿನ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ತೀವ್ರವಾಗಿರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಮೇ 29 ರವರೆಗೆ ಕರ್ನಾಟಕದಲ್ಲಿ ಮಳೆ ಸುರಿಸುವ ಮಾರುತಗಳು ಸಕ್ರಿಯವಾಗಿರಲಿವೆ. ಇದರಲ್ಲಿ ಮೊದಲ ಎರಡು ದಿನ ನಾಳೆ ಗುರುವಾರ ಮತ್ತು ಶುಕ್ರವಾರ ಉತ್ತರ ಒಳನಾಡು ಜಿಲ್ಲೆಗಳು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣವಾಗಿ ಮಳೆ ಬರಬಹುದೆಂದು ಅಂದಾಜಿಸಲಾಗಿದೆ. ಇದೇ ಎರಡು ದಿನ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಬಹತೇಕ ಕಡೆಗಳಲ್ಲಿ ಸಾಧಾರಣದಿಂದ ಭಾರೀ ಮಳೆ ಸಂಭವವಿದೆ ಎಂದು ಹವಾಮಾನ ತಜ್ಞರ ವರದಿ ತಿಳಿಸಿದೆ.

Karnataka Rain Update

ದಕ್ಷಿಣ ಒಳನಾಡಿನ ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಹಾಸನ, ಚಿಕ್ಕಮಗಳೂರು, ತುಮಕೂರು, ಶಿವಮೊಗ್ಗ, ಕೊಡಗು, ಚಿತ್ರದುರ್ಗ, ದಾವಣಗೆರೆ, ವಿಜಯನಗರ ಜಿಲ್ಲೆಗಳ ಹಲವೆಡೆ ಮುಂದಿನ ಎರಡು ದಿನ ಗುಡುಗು ಮತ್ತು ಮಿಂಚು ಸಹಿತ ಧಾರಾಕಾರವಾಗಿ ಮಳೆ ಅಬ್ಬರಿಸುವ ನಿರೀಕ್ಷೆ ಇದೆ.

ನಂತರದ ಮೂರು ದಿನಗಳಲ್ಲಿ ಈ ಪ್ರದೇಶಗಳಲ್ಲಿ ಮಳೆ ಕ್ಷೀಣಿಸಿಲಿದೆ. ಆಗ ಇದೇ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣವಾಗಿ ಮಳೆ ಬರಲಿದೆ. ಇಲ್ಲವೇ ತುಂತುರು ಮಳೆ ಕಂಡು ಬರಲಿದೆ.

Karnataka Rain Update

ಕರಾವಳಿ ಉತ್ತರ ಕರ್ನಾಟಕಕ್ಕೆ ಹಗುರ ಮಳೆ

ಇನ್ನೂ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಹಾಗೂ ಬೆಳಗಾವಿ, ವಿಜಯಪುರ, ಬಾಗಲಕೋಟೆ, ಗದಗ, ಹಾವೇರಿ, ಕೊಪ್ಪಳ, ಕಲಬುರಗಿ, ಯಾದಗಿರಿ, ಬೀದರ್, ರಾಯಚೂರು ಜಿಲ್ಲೆಗಳಲ್ಲಿ ಇಂದಿನಿಂದ ಶುಕ್ರವಾರದವರೆಗೆ ಸಾಧಾರಣವಾಗಿ ಮಳೆ ಬರಲಿದೆ.

ಕಳೆದ ಕೆಲವು ದಿನಗಳಿಂದ ದಕ್ಷಿಣ ಒಳನಾಡು ಮತ್ತು ಮಲೆನಾಡು ಜಿಲ್ಲೆಗಳ ಹಲವೆಡೆ ಅಧಿಕ ಮಳೆ ದಾಖಲಾಗಿದೆ. ಕಳೆದ 24 ಗಂಟೆಯಲ್ಲಿ ಶಿವಮೊಗ್ಗ, ಚಿಕ್ಕಮಗಳೂರು ವ್ಯಾಪ್ತಿ ಹಲವು ಕಡೆಗಳಲ್ಲಿ, ಹಾಸನ, ದಕ್ಷಿಣ ಕನ್ನಡ, ಬೆಂಗಳೂರು ನಗರ, ಚಿತ್ರದುರ್ಗ, ತುಮಕೂರಿನ ಕೆಲವು ಪ್ರದೇಶಗಳಲ್ಲಿ ಬಿರುಗಾಳಿ ಸಹಿ ಮಳೆ ಅಬ್ಬರಿಸಿದೆ. ಇದು ಮುಂದಿನ ಎರಡು ಮೂರು ದಿನ ಮುಂದುವರಿಯಲಿದೆ.

ಕಲಬುರಗಿಯಲ್ಲಿ ರಾಜ್ಯದ ಗರಿಷ್ಠ ತಾಪಮಾನ

ಕಲಬುರಗಿಯಲ್ಲಿ ರಾಜ್ಯದ ಗರಿಷ್ಠ ತಾಪಮಾನ 41 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಉಳಿದಂತೆ ಬಳ್ಳಾರಿ, ರಾಯಚೂರು, ವಿಜಯಪುರಗಳಲ್ಲಿ 39 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಕಂಡು ಬಂದಿದೆ ಎಂದು ಹವಾಮಾನ ಇಲಾಖೆ ವರದಿ ತಿಳಿಸಿದೆ.

ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮುಂದಿನ ನಾಲ್ಕು ಜೋರು ಮಳೆ ಸಂಭವವಿದೆ. ನಿತ್ಯ ಸಂಜೆ ಇಲ್ಲವೇ ಸಂಜೆ ನಂತರ ವ್ಯಾಪಕವಾಗಿ ಮಳೆ ಅಬ್ಬರಿಸಲಿದೆ. ಮೇ 28ರವರೆಗೆ ನಗರದ ಒಂದೆರಡು ಕಡೆ ಜೋರು ಮಳೆ, ಮತ್ತೊಂದಿಷ್ಟು ಕಡೆ ಸಾಮಾನ್ಯವಾಗಿ ಮಳೆ ಬರುವ ಲಕ್ಷಣಗಳು ಇವೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+