ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

48 ಗಂಟೆಗಳಲ್ಲಿ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆ

|
Google Oneindia Kannada News

ಬೆಂಗಳೂರು, ಸಪ್ಟೆಂಬರ್.21: ಕರ್ನಾಟಕದಲ್ಲಿ ಮುಂದಿನ ಎರಡು ದಿನಗಳ ಕಾಲ ವರುಣನ ಅಬ್ಬರ ಮುಂದುವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಅಧಿಕಾರಿಗಳು ಮುನ್ನೆಚ್ಚರಿಕೆ ನೀಡಿದ್ದಾರೆ. ರಾಜ್ಯದ ಕರಾವಳಿ ಭಾಗವೂ ಸೇರಿದಂತೆ 9 ಜಿಲ್ಲೆಗಳಲ್ಲಿ ಹೈಅಲರ್ಟ್ ಘೋಷಿಸಲಾಗಿದೆ.

ಕೊಡಗು, ಮಡಿಕೇರಿ, ದಕ್ಷಿಣ ಕನ್ನಡ, ಉಡುಪಿ ಗಡಿಭಾಗದಲ್ಲಿ ಕಳೆದ ಎರಡು ದಿನಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಕೊಡಗು ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ 8.30 ಕ್ಕೆ ಕೊನೆಗೊಂಡಂತೆ ಕಳೆದ 24 ಗಂಟೆಗಳ ಅವಧಿಯಲ್ಲಿ ಕೊಡಗು ಜಿಲ್ಲೆಯಲ್ಲಿ ಸರಾಸರಿ ಮಳೆ 66.75 ಮಿ.ಮೀ. ಮಳೆಯಾಗಿದೆ.

ಕೊಡಗು ಮಳೆ ರೆಡ್ ಅಲರ್ಟ್, ತುರ್ತು ಸೇವೆಗೆ ಹೆಲ್ಪ್ ಲೈನ್ಕೊಡಗು ಮಳೆ ರೆಡ್ ಅಲರ್ಟ್, ತುರ್ತು ಸೇವೆಗೆ ಹೆಲ್ಪ್ ಲೈನ್

ಮಡಿಕೇರಿ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 114.8 ಮಿ.ಮೀ. ವಿರಾಜಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 47.5 ಮಿ.ಮೀ. ಸೋಮವಾರಪೇಟೆ ತಾಲ್ಲೂಕಿನಲ್ಲಿ ಇಂದಿನ ಸರಾಸರಿ ಮಳೆ 37.95 ಮಿ.ಮೀ. ಮಳೆಯಾಗಿದೆ.

Karnataka Rain Update: Rainfall Likely In Upcoming 48 Hours At Coastal Districts

ಎಲ್ಲಾ ದಿಕ್ಕುಗಳಲ್ಲೂ ಆವರಿಸಿದ ಮಳೆ, ಕರ್ನಾಟಕ ಗಢಗಢ ಎಲ್ಲಾ ದಿಕ್ಕುಗಳಲ್ಲೂ ಆವರಿಸಿದ ಮಳೆ, ಕರ್ನಾಟಕ ಗಢಗಢ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ:

ಕರಾವಳಿ ಜಿಲ್ಲೆ ದಕ್ಷಿಣ ಕನ್ನಡದಲ್ಲಿ ಮಳೆರಾಯನ ಆರ್ಭಟ ಮುಂದುವರಿದಿದ್ದು, ದಕ್ಷಿಣ ಕನ್ನಡ- ಉಡುಪಿ ಗಡಿ ಭಾಗದಲ್ಲೇ ಮಳೆ ಅಬ್ಬರ ಜೋರಾಗಿದೆ. ದಕ್ಷಿಣ ಜಿಲ್ಲೆಯ ಮುಲ್ಕಿ ಹೋಬಳಿಯಲ್ಲಿ ಕೃತಕ ನೆರೆ ಉಂಟಾಗಿದ್ದು, ಹಲವೆಡೆ ಮಳೆ ನೀರು ಮನೆಗಳಿಗೆ ನುಗ್ಗಿದೆ. ಗ್ರಾಮೀಣ ಭಾಗದ ಕೃಷಿ ಭೂಮಿಗಳು ಜಲಾವೃತಗೊಂಡಿದ್ದು, ಕಿನ್ನಿಗೋಳಿಯಲ್ಲಿ ಗ್ರಾಮ ಸಂಪರ್ಕಿಸುವ ಸೇತುವೆ ಸಂಪರ್ಕ ಕಡಿತಗೊಂಡಿದೆ.

ಕಳೆದ 24 ಗಂಟೆಯಲ್ಲಿ 700 ಮನೆಗಳು ಮುಳುಗಡೆ, 2500 ಜನರ ರಕ್ಷಣೆ: ಉಡುಪಿ ಜಿಲ್ಲಾಧಿಕಾರಿಕಳೆದ 24 ಗಂಟೆಯಲ್ಲಿ 700 ಮನೆಗಳು ಮುಳುಗಡೆ, 2500 ಜನರ ರಕ್ಷಣೆ: ಉಡುಪಿ ಜಿಲ್ಲಾಧಿಕಾರಿ

Recommended Video

Corona ಲಸಿಕೆ ಭಾರತದಲ್ಲಿ ಉತ್ಪಾದನೆ ಆದ ಬಳಿಕ ಇರುವ ಸವಾಲುಗಳೇನು ? | Oneindia Kannada

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕೊಪ್ಪ, ಎನ್.ಆರ್ ಪುರ, ಶೃಂಗೇರಿ ತಾಲ್ಲೂಕಿನಲ್ಲಿ ಬಿಟ್ಟುಬಿಡದೆ ಮಳೆಯಾಗಿದ್ದು, ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ, ಬಾಳೂರು, ಕಳಸ ಸುತ್ತಮುತ್ತ ಧಾರಾಕಾರವಾಗಿ ಮಳೆ ಸುರಿದಿದೆ.

English summary
Karnataka Rain Update: Rainfall Likely In Upcoming 48 Hours At Coastal Districts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X