Karnataka Rain: ಕರ್ನಾಟಕದಲ್ಲಿ ಭಾರೀ ಮಳೆ: ಈ ಜಿಲ್ಲೆಗಳಿಗೆ ಆರೆಂಜ್ & ಯೆಲ್ಲೋ ಅಲರ್ಟ್!
Karnataka Rain: ಕರ್ನಾಟಕದ ವಿವಿಧ ಭಾಗದಲ್ಲಿ ಧಾರಾಕಾರ ಮಳೆ ಮುಂದುವರಿದಿದೆ. ವಿವಿಧ ಭಾಗದಲ್ಲಿ ಮಳೆಯಾಗುತ್ತಿರುವುದರಿಂದ ಶಾಲಾ - ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ. ಕರ್ನಾಟಕಲ್ಲಿ ಜುಲೈ 1ರ ವರೆಗೆ ಮಳೆ ಅಬ್ಬರ ಮುಂದುವರಿಯಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಭಾಗದಲ್ಲಿ ಮಳೆ ಮುಂದುವರಿಯಲಿದೆ. ಧಾರಾಕಾರ ಮಳೆ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಯಲ್ಲಿ ಹವಾಮಾನ ಇಲಾಖೆಯಿಂದ ಆರೆಂಜ್ ಮತ್ತು ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ ಹಾಗೂ ಉತ್ತರ ಕರ್ನಾಟಕದಲ್ಲಿ ಮಳೆಯಬ್ಬರ ಜೋರಾಗಿದೆ ಯಾವ ಜಿಲ್ಲೆಗಳಲ್ಲಿ ಮಳೆ ಆಗಲಿದೆ ಎನ್ನುವ ವಿವರ ಇಲ್ಲಿದೆ.
ಮುಂಗಾರು ಮಳೆ ಚುರುಕು ಪಡೆದುಕೊಂಡಿದೆ. ಮುಂದಿನ ಮೂರು ದಿನಗಳ ಅವಧಿಗೆ ಮಿಂಚು - ಗುಡುಗು ಸಹಿತ ಧಾರಾಕಾರ ಮಳೆ ಆಗಲಿದೆ. ಈ ಭಾರಿ ಮುಂಗಾರು ಮಳೆ ರಾಜ್ಯದ ಬಹುತೇಕ ಭಾಗದಲ್ಲಿ ಉತ್ತಮವಾಗಿ ಆಗಿದೆ. ಹೀಗಾಗಿ, ಜಲಾಶಯಗಳು ಹಾಗೂ ಕೆರೆ - ಕುಂಟೆಗಳು ಮೈದುಂಬಿವೆ. ರಾಜ್ಯದ ಪ್ರಮುಖ 13 ಪ್ರಮುಖ ಜಲಾಶಯಗಳಲ್ಲೂ ಉತ್ತಮ ಒಳಹರಿವು ಇದೆ. ಇಂದೂ ಸಹ ವಿವಿಧೆಡೆ ಧಾರಾಕಾರ ಮಳೆ ಆಗಲಿದೆ. ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಆಗುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ಆರೆಂಜ್ ಹಾಗೂ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ನಾಳೆಯ ವರೆಗೆ ಯೆಲ್ಲೋ ಅಲರ್ಟ್: ರಾಜ್ಯದಲ್ಲಿ ಮಳೆಯಬ್ಬರ ಮುಂದುವರಿದಿರುವ ಹಿನ್ನೆಲೆಯಲ್ಲಿ ಒಟ್ಟಾರೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆಯಲ್ಲಿ ಜೂನ್ 26ರ ವರೆಗೆ ಯೆಲ್ಲೋ ಅಲರ್ಟ್ ಇರಲಿದೆ. ಜುಲೈ ಮೊದಲ ವಾರದ ವರೆಗೆ ಮಳೆ ಅಬ್ಬರ ಇರಲಿದೆ. ಇನ್ನು ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಮುಂದುವರಿಯುವ ಸಾಧ್ಯತೆ ಇದ್ದು ಈ ಭಾಗದಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ.
ಜೂನ್ 25ಕ್ಕೆ ಈ ಜಿಲ್ಲೆಗಳಲ್ಲಿ ಮಳೆ: ಕರಾವಳಿ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಮುಂದುವರಿದಿದೆ. ಕರಾವಳಿಯ ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಆಗಲಿದೆ. ಇನ್ನು ಉತ್ತರ ಕನ್ನಡ ಬೆಳಗಾವಿ ಹಾಗೂ ಧಾರವಾಡದಲ್ಲಿ ಭಾರೀ ಮಳೆ ಮುಂದುವರಿಯಲಿದೆ. ಅಲ್ಲದೇ ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ, ಬೀದರ್, ಕಲಬುರಗಿ, ವಿಜಯಪುರ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆ ಇರಲಿದೆ ಎಂದು ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.












Click it and Unblock the Notifications