Karnataka Heavy Rain: ಮುಂದಿನ ಒಂದು ವಾರ ರಾಜ್ಯಾದ್ಯಂತ ಹೈ ಅಲರ್ಟ್: ಸಚಿವ ಕೃಷ್ಣ ಬೈರೇಗೌಡ

ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದು, ಹಲವು ನದಿಗಳು ಉಕ್ಕಿ ಹರಿಯುತ್ತಿವೆ. ಹಲವು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಹಲವು ಕಡೆ ಗುಡ್ಡ ಕುಸಿತವಾಗಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ.

ಭಾರಿ ಮಳೆಯಾಗುತ್ತಿರುವ ಹಿನ್ನಲೆಯಲ್ಲಿ, ಜಿಲ್ಲಾಡಳಿತಗಳ ಸಮನ್ವಯದೊಂದಿಗೆ ಕಂದಾಯ ಇಲಾಖೆ ಪರಿಸ್ಥಿತಿಯನ್ನು ನಿರಂತರವಾಗಿ ಗಮನಿಸುತ್ತಿದೆ. ಮುಂದಿನ ವಾರ ಕಟ್ಟೆಚ್ಚರ ವಹಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಇಲಾಖೆಗೆ ಸೂಚನೆ ನೀಡಿದ್ದಾರೆ.

 Karnataka Rain: Week-Long High Alert In State: Krishna Byre Gowda

ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪರಿಸ್ಥಿತಿ ಅವಲೋಕನ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೀದರ್, ಯಾದಗಿರಿ, ವಿಜಯಪುರ, ಕಲಬುರಗಿ ಮತ್ತಿತರ ಜಿಲ್ಲೆಗಳಲ್ಲಿ ಮುಂಗಾರು ಚುರುಕುಗೊಳ್ಳಲಿದೆ. ಈ ಬಹುತೇಕ ಜಿಲ್ಲೆಗಳಲ್ಲಿ ಜುಲೈನಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗಿದೆ ಎಂದು ಮಾಹಿತಿ ನೀಡಿದರು.

ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲು ಇಲಾಖೆಯು ಆಯಾ ಜಿಲ್ಲಾಧಿಕಾರಿಗಳೊಂದಿಗೆ ಸಂಪರ್ಕದಲ್ಲಿದೆ ಎಂದು ಅವರು ಹೇಳಿದರು. ಕಳೆದ ವಾರದಲ್ಲಿ ಉತ್ತರ ಒಳನಾಡಿನಲ್ಲಿ ವಾಡಿಕೆಗಿಂತ ಶೇ.120ರಷ್ಟು ಹೆಚ್ಚು ಮಳೆಯಾಗಿದೆ. ಕಲಬುರಗಿ ಶೇ.300 ಹಾಗೂ ಯಾದಗಿರಿಯಲ್ಲಿ ಶೇ.160ರಷ್ಟು ಹೆಚ್ಚು ಮಳೆಯಾಗಿದೆ ಎಂದರು. ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಮಳೆ ಕಡಿಮೆಯಾಗಿದೆ. ಒಟ್ಟಾರೆ ಮಳೆ ಕೊರತೆಯು ಜೂನ್ ಅಂತ್ಯಕ್ಕೆ ಸುಮಾರು 55% ರಿಂದ 14% ಕ್ಕೆ ಕಡಿಮೆಯಾಗಿದೆ ಎಂದು ಮಾಹಿತಿ ನೀಡಿದರು.

ಜಲಾಶಯಗಳಲ್ಲಿ ನೀರಿನ ಮಟ್ಟ ಏರಿಕೆ

ಕಳೆದ ವಾರದಲ್ಲಿ ಭಾರೀ ಮಳೆ ಹಾಗೂ ಸಿಡಿಲಿಗೆ 27 ಮಂದಿ ಸಾವನ್ನಪ್ಪಿದ್ದಾರೆ. ಜಲಾಶಯಗಳು ವಾರದ ಹಿಂದೆ ಕೇವಲ 23% ಸಂಗ್ರಹವನ್ನು ಹೊಂದಿದ್ದವು, ಈ ಭಾನುವಾರದ ವೇಳೆಗೆ ಸಂಗ್ರಹ ಪ್ರಮಾಣ 40% ಕ್ಕೆ ಏರಿದೆ ಮತ್ತು ಒಂದು ದಿನದಲ್ಲೇ ಇದು ಸುಮಾರು 50% ಕ್ಕೆ ಹೆಚ್ಚಾಗುವ ಸಾಧ್ಯತೆಯಿದೆ. ಕಳೆದ ಏಳು ದಿನಗಳಲ್ಲಿ ಜಲಾಶಯಗಳಲ್ಲಿ ಸಂಗ್ರಹಣೆ 144 ಟಿಎಂಸಿ ಅಡಿ ಹೆಚ್ಚಿದ್ದು, ಭಾನುವಾರವೊಂದರಲ್ಲೇ 40 ಟಿಎಂಸಿ ಅಡಿ ಏರಿಕೆಯಾಗಿದೆ ಎಂದರು.

ಬರ ಘೋಷಣೆಗೆ ನಿಯಮಾವಳಿ ಸಡಿಲಿಸುವ ಕುರಿತು ಸಿಎಂ ಸಿದ್ದರಾಮಯ್ಯ ಕೇಂದ್ರಕ್ಕೆ ಪತ್ರ ಬರೆಯಲಿದ್ದಾರೆ ಎಂದು ಕೃಷ್ಣ ಬೈರೇಗೌಡ ತಿಳಿಸಿದರು. ಕೇಂದ್ರದ ನಿಯಮಗಳ ಪ್ರಕಾರ, ಬರ ಘೋಷಣೆಗೆ 60% ಕೊರತೆ ಮತ್ತು ಮೂರು ವಾರಗಳವರೆಗೆ ಮಳೆಯಾಗದಿರುವುದು ಅಗತ್ಯವಾಗಿದೆ ಎಂದು ಅವರು ಹೇಳಿದರು ಮತ್ತು ರಾಜ್ಯಗಳ ಅವಶ್ಯಕತೆಗಳಿಗೆ ಅನುಗುಣವಾಗಿ ಅದನ್ನು 25% ಕೊರತೆಗೆ ಬದಲಾಯಿಸಬೇಕಾಗಿದೆ ಎಂದು ಹೇಳಿದರು.

ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಹಲವು ನದಿಗಳು ಉಕ್ಕಿಹರಿಯುತ್ತಿವೆ. ಕೆಲವು ಕಡೆಗಳಲ್ಲಿ ಬೃಹತ್ ಮರಗಳು ಧರೆಗುರುಳಿವೆ. ಹೊಳೆ, ನದಿಗಳು ಉಕ್ಕಿಹರಿಯುತ್ತಿರುವುದರಿಂದ ಹೊಲ ಗದ್ದೆಗಳು ಕೂಡ ಜಲಾವೃತವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+